Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೈಟ್‌ಹೌಸ್ ಹಿಲ್ ರಸ್ತೆ ವಿವಾದ: ಸಂತ...

ಲೈಟ್‌ಹೌಸ್ ಹಿಲ್ ರಸ್ತೆ ವಿವಾದ: ಸಂತ ಅಲೋಶಿಯಸ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ8 May 2018 6:04 PM IST
share

ಮಂಗಳೂರು, ಮೇ 8:ಲೈಟ್ ಹೌಸ್ ಹಿಲ್ ರಸ್ತೆ ನಾಮಕರಣ ವಿವಾದಕ್ಕೆ ಸಂಬಂಧಿಸಿ ಕೆಲ ರಾಜಕಾರಣಿಗಳ ಹೇಳಿಕೆ ರಾಜಕೀಯ ಗಿಮಿಕ್ ಎಂದು ಸಂತ ಅಲೋಶಿಯಸ್ ಕಾಲೇಜು ಆಡಳಿತ ಮಂಡಳಿ ಹೇಳಿದೆ.

ಸದ್ರಿ ರಸ್ತೆ ವಿವಾದ ಈಗ ರಾಜ್ಯ ಉಚ್ಛ ನ್ಯಾಯಾಲಯದ ಎದುರು ವಿಚಾರಣಾ ಹಂತದಲ್ಲಿದೆ. ವಿಜಯಾ ಬ್ಯಾಂಕ್ ನೌಕರರ ಸಂಘ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯದ ಏಕ ಸದಸ್ಯ ಪೀಠ ವಜಾ ಮಾಡಿತ್ತು. ಆ ತೀರ್ಪಿನ ವಿರುದ್ಧ ವಿಜಯಾ ಬ್ಯಾಂಕ್ ನೌಕರರ ಸಂಘ ರಿಟ್ ಮನವಿಯನ್ನು ಸಲ್ಲಿಸಿದಾಗ ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿ, ನ್ಯಾಯಾಲಯದ ಅಂತಿಮ ಆದೇಶ ಮೇ 24, 2017 ರಂತೆ ಯಥಾ ಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಈ ಆದೇಶವನ್ನೇ ತಪ್ಪು ಗ್ರಹಿಕೆಯಿಂದ ತಮಗೆ ಸಿಕ್ಕ ಜಯವೆಂದು ಪ್ರಚಾರಮಾಡಲಾಗುತ್ತಿದೆ. ಸಂತ ಅಲೋಶಿಯಸ್ ಕಾಲೇಜು ಈ ವಿವಾದದಲ್ಲಿ ಮಧ್ಯ ಪ್ರವೇಶ ಮಾಡಲು ಅವಕಾಶ ನೀಡುವಂತೆ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ರಿಟ್ ಮನವಿ ಸಲ್ಲಿಸಿದೆ. ನ್ಯಾಯಾಲಯದ ಆದೇಶದ ಪ್ರಕಾರ ಯಾವುದೇ ಸಂಘಟನೆ ಸದ್ರಿ ರಸ್ತೆಗೆ ನಾಮಫಲಕ ಹಾಕುವುದು, ಉದ್ಘಾಟನ ಕಾರ್ಯಕ್ರಮ ಹಮ್ಮಿಕೊಳ್ಳುವುದು ಮುಂತಾದ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ. ಮಂಗಳೂರು ಮಹಾನಗರ ಪಾಲಿಕೆ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡುವಂತಿಲ್ಲ. ವಿಜಯಾ ಬ್ಯಾಂಕ್ ನೌಕರರ ಸಂಘಟಣೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ಈ ಬಗ್ಗೆ ಕಾಲೇಜಿನಿಂದ ನೊಟೀಸ್ ನೀಡಲಾಗಿದೆ.

ಹಾಗಿದ್ದರೂ ಕೆಲವು ರಾಜಕೀಯ ವ್ಯಕ್ತಿಗಳು ಸದ್ರಿ ರಸ್ತೆಗೆ ನೂತನ ಸರಕಾರ ಅಧಿಕಾರ ವಹಿಸಿಕೊಂಡ ಒಂದು ತಿಂಗಳಿನೊಳಗಾಗಿ ಮರು ನಾಮಕರಣ ಮಾಡಲಾಗುವುದು, ಇತ್ಯಾದಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವೆಲ್ಲಾ ಕೇವಲ ಚುನಾವಣಾ ಗಿಮಿಕ್ ಗಳಾಗಿವೆ. ಉಚ್ಛ ನ್ಯಾಯಾಲಯದಲ್ಲಿ ವಿಚಾರಣಾಧೀನ ವಿಷಯಗಳ ಬಗ್ಗೆ ರಾಜಕೀಯ ಹೇಳಿಕೆಗಳನ್ನು ನೀಡುವುದು ನ್ಯಾಯಾಲಯದ ನಿಂದನೆಯಾಗಿರತ್ತದೆ. ನ್ಯಾಯಾಂಗ ಪ್ರಕ್ರಿಯೆ ಮುಗಿಯುವವರೆಗೆ ಸದ್ರಿ ವಿಷಯದ ಬಗ್ಗೆ ಪ್ರಚೋದನಾತ್ಮಕ, ಅನಪೇಕ್ಷಿತ ಹೇಳಿಕೆಗಳನ್ನು ನೀಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಉಚ್ಛ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X