Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ನೇತೃತ್ವದ ಸರಕಾರದ...

ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮ: ಪಿ.ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ8 May 2018 7:03 PM IST
share
ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮ: ಪಿ.ಚಿದಂಬರಂ

ಬೆಂಗಳೂರು, ಮೇ 8: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿ(2013-18)ಯಲ್ಲಿ ಆರ್ಥಿಕ ಪರಿಸ್ಥಿತಿಯು ಅತ್ಯುತ್ತಮವಾಗಿದ್ದು, ರಾಜ್ಯದ ಜಿಎಸ್‌ಡಿಪಿ ಹಾಗೂ ತಲಾ ಆದಾಯ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2012-13ರಲ್ಲಿ 6,43,292 ಕೋಟಿ ರೂ.ಗಳಿದ್ದ ಜಿಎಸ್‌ಡಿಪಿಯು 2017-18ರ ವೇಳೆಗೆ 9,49,111 ಕೋಟಿ ರೂ.ಗಳಿಗೆ ತಲುಪಿದೆ. ಪ್ರತಿ ವರ್ಷ ಸರಾಸರಿ ಶೇ.8ರಷ್ಟು ಬೆಳವಣಿಗೆಯಾಗಿದೆ ಎಂದರು.

ಐದು ವರ್ಷಗಳ ಹಿಂದೆ ಇದ್ದ ತಲಾ ಆದಾಯವು 77,309 ರೂ.ಗಳಿಂದ 1,74,551 ರೂ.ಗಳಿಗೆ ಹೆಚ್ಚಳವಾಗಿದೆ. ಇದು ಶೇ.125ರಷ್ಟು ಬೆಳವಣಿಗೆಯನ್ನು ಸೂಚಿಸಿದೆ. ಇಡೀ ದೇಶದಲ್ಲಿ ಈ ಬೆಳವಣಿಗೆಯ ಪ್ರಮಾಣ ಶೇ.59ರಷ್ಟು ಮಾತ್ರವಿದೆ. ನಿರುದ್ಯೋಗ ಸಮಸ್ಯೆಯು ಶೇ.2.6ರಷ್ಟು ಕರ್ನಾಟಕವನ್ನು ಬಾಧಿಸುತ್ತಿದೆ. ರಾಷ್ಟ್ರಮಟ್ಟದಲ್ಲಿ ಈ ಸಮಸ್ಯೆ ಶೇ.5.9ರಷ್ಟಿದೆ ಎಂದು ಅವರು ಹೇಳಿದರು.

ಕಳೆದ ಐದು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ವಿತ್ತೀಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ. ಆದಾಯವು ಹೆಚ್ಚುವರಿಯಾಗಿದೆ. ಸಾಮಾಜಿಕ ವಲಯಕ್ಕೆ ಶೇ.40ರಷ್ಟು ಆದಾಯವನ್ನು ಖರ್ಚು ಮಾಡಲಾಗುತ್ತಿದೆ ಎಂದು ಚಿದಂಬರಂ ತಿಳಿಸಿದರು.

ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಮುಂದುವರೆಯಲು ಪ್ರಮುಖ ಕಾರಣ ಇಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿದ್ದ ಸ್ಥಿರ ಸರಕಾರ. ದೇವರಾಜ ಅರಸು ನಂತರ ಐದು ವರ್ಷಗಳ ಪೂರ್ಣಾವಧಿಯನ್ನು ಪೂರೈಸಿದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಸ್ಪಷ್ಟ ಬಹುಮತವನ್ನು ನೀಡಿ, ಸ್ಥಿರ ಸರಕಾರವು ಕರ್ನಾಟಕದ ಅಭಿವೃದ್ಧಿಯನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗಲಿದೆ. ಇದು ಒಂದು ರಾಜ್ಯದ ಚುನಾವಣೆಯಾದರೂ ಇಡೀ ದೇಶಕ್ಕೆ ಮಹತ್ವದ್ದಾಗಿದೆ. ದೇಶದ ಜನತೆಯ ನಿರೀಕ್ಷೆಗಳು ರಾಜ್ಯದ ಮತದಾರರು ಕೈಗೊಳ್ಳುವ ತೀರ್ಮಾನವನ್ನು ಅವಲಂಬಿಸಿವೆ ಎಂದು ಚಿದಂಬರಂ ತಿಳಿಸಿದರು.

2008-13ರ ಅವಧಿಯಲ್ಲಿ ರಾಜ್ಯದ ಜನತೆಯು ಬಿಜೆಪಿಗೆ 110 ಸ್ಥಾನಗಳನ್ನು ಕೊಟ್ಟಿದ್ದರು. ಆದರೆ, ಅದಕ್ಕೆ ಪ್ರತಿಯಾಗಿ ಜನತೆಗೆ ಸಿಕ್ಕಿದ್ದಾದರೂ ಏನು? ಐದು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಒಳಗೊಂಡ ಅಸ್ಥಿರ ಸರಕಾರ. ರಾಜ್ಯದ ಇತಿಹಾಸದಲ್ಲೆ ಅತ್ಯಂತ ಕಳಪೆ ಸರಕಾರ ಎಂಬ ಕುಖ್ಯಾತಿಯನ್ನು ಬಿಜೆಪಿ ಸರಕಾರ ಪಡೆದಿತ್ತು ಎಂದು ಅವರು ದೂರಿದರು.

ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರಲಿರುವ ಸರಕಾರದ ಎದುರು ಎರಡು ಪ್ರಮುಖವಾದ ಸವಾಲುಗಳಿವೆ. ಮೊದಲನೆಯದು ಕಳೆದ ಐದು ವರ್ಷಗಳಲ್ಲಿ ಸರಕಾರ ಸಾಧಿಸಿರುವ ಅಭಿವೃದ್ಧಿಯನ್ನು ಮುಂದುವರೆಸುವುದು ಹಾಗೂ ಎರಡನೆಯದು ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳನ್ನು ದುರ್ಬಲಗೊಳಿಸಲು ಆರೆಸೆಸ್ಸ್ ಹಾಗೂ ಬಿಜೆಪಿ ಹೇರುತ್ತಿರುವ ಒಂದು ಇತಿಹಾಸ, ಒಂದು ಸಂಸ್ಕೃತಿ, ಒಂದು ಧರ್ಮ, ಒಂದು ಭಾಷೆಯ ಸಿದ್ಧಾಂತವನ್ನು ಸಮರ್ಥವಾಗಿ ಎದುರಿಸುವುದಾಗಿದೆ ಎಂದು ಅವರು ಹೇಳಿದರು.

ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರವು 15ನೆ ಹಣಕಾಸು ಆಯೋಗಕ್ಕೆ ನೀಡಿರುವ ಉಲ್ಲೇಖಿತ ನಿಯಮಗಳು ಸಂವಿಧಾನದ ನಿಬಂಧನೆಗಳ ವಿರುದ್ಧವಾಗಿದೆ. ಹಣಕಾಸು ಆಯೋಗದ ಉಲ್ಲೇಖಿತ ನಿಯಮಗಳನ್ನು ಅನುಸರಿಸಿದರೆ ರಾಜ್ಯಗಳ ಪ್ರಗತಿಗೆ ಮಾರಕವಾಗಲಿದೆ. ಪ್ರಮುಖವಾಗಿ ದಕ್ಷಿಣ ಭಾರತದ ರಾಜ್ಯಗಳು ಇದರಿಂದ ಸಂಕಷ್ಟ ಎದುರಿಸಲಿವೆ ಎಂದು ಚಿದಂಬರಂ ಆತಂಕ ವ್ಯಕ್ತಪಡಿಸಿದರು.

ರಾಜ್ಯಗಳು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಮೇಲಿನ ಸ್ವಾತಂತ್ರವನ್ನು ಕಳೆದುಕೊಳ್ಳಲಿವೆ. ಅಪನಗದೀಕರಣ ಹಾಗೂ ಜಿಎಸ್‌ಟಿ ಅನುಷ್ಠಾನದಿಂದ ಆಗಿರುವ ಸಮಸ್ಯೆಗಳ ಜೊತೆಗೆ ಇದು ಸೇರ್ಪಡೆಗೊಳ್ಳಲಿದೆ. ಅಲ್ಲದೆ, ದೇಶದ ಒಕ್ಕೂಟ ವ್ಯವಸ್ಥೆಯನ್ನೆ ನಾಶ ಮಾಡಲಿದೆ ಎಂದು ಅವರು ಹೇಳಿದರು.

ಆದುದರಿಂದ, 15ನೆ ಹಣಕಾಸು ಆಯೋಗಕ್ಕೆ ನೀಡಿರುವ ಉಲ್ಲೇಖಿತ ನಿಯಮಗಳನ್ನು ಯಥಾವತ್ತಾಗಿ ಯಾವುದೇ ಕಾರಣಕ್ಕೂ ಮುಂದುವರೆಸಬಾರದು. ಕೇಂದ್ರ ಸರಕಾರವು ಸಂವಿಧಾನದ ನಿಬಂಧನೆಗಳ ವಿರುದ್ಧವಾಗಿರುವ ಅಂಶಗಳನ್ನು ತಿದ್ದುಪಡಿ ತರಲೇಬೇಕು ಎಂದು ಚಿದಂಬರಂ ಆಗ್ರಹಿಸಿದರು.


ರಾಜ್ಯದ ಜನರು ಕಾಂಗ್ರೆಸ್ ಪರವಾಗಿ ತಮ್ಮ ಮತಗಳನ್ನು ಚಲಾಯಿಸುವ ಮೂಲಕ ಸಿದ್ದರಾಮಯ್ಯನವರ ನಾಯಕತ್ವ ಹಾಗೂ ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಲು ಮುಂದಾಗಬೇಕು ಎಂದು ಅವರು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X