Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ದೇಶಕ್ಕಾಗಿ ನಿಮ್ಮ ಮನೆಯ ನಾಯಿಯೂ...

"ದೇಶಕ್ಕಾಗಿ ನಿಮ್ಮ ಮನೆಯ ನಾಯಿಯೂ ಸತ್ತಿಲ್ಲ"

ಪ್ರಧಾನಿ ಮೋದಿ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ8 May 2018 8:24 PM IST
share
ದೇಶಕ್ಕಾಗಿ ನಿಮ್ಮ ಮನೆಯ ನಾಯಿಯೂ ಸತ್ತಿಲ್ಲ

ವಿಜಯಪುರ, ಮೇ 8: ಬಾಗಲಕೋಟೆಯ ಮುಧೋಳ ನಾಯಿಯಲ್ಲಿರುವ ಪ್ರಾಮಾಣಿಕತೆ, ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದಿರುವ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ನಗರದ ಬಬಲೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ದೇಶಕ್ಕಾಗಿ ಆರೆಸೆಸ್ಸ್, ಬಿಜೆಪಿಯವರು ಏನು ತ್ಯಾಗ, ಬಲಿದಾನ ಮಾಡಿದ್ದಾರೆ ಎಂಬುದನ್ನು ಹೇಳಲಿ. ದೇಶಕ್ಕಾಗಿ ಅವರ ಮನೆಯ ಒಂದು ನಾಯಿ ಕೂಡ ಸತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತಹವರು 70 ವರ್ಷದಲ್ಲಿ ಕಾಂಗ್ರೆಸ್ ದೇಶಕ್ಕಾಗಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ. ಕಾಂಗ್ರೆಸ್ ನಾಯಕರು ಈ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್‌ಗಾಂಧಿ ಬಲಿದಾನ ನೀಡಿದ್ದಾರೆ. ಸೋನಿಯಾಗಾಂಧಿ ಪ್ರಧಾನಿ ಸ್ಥಾನದ ಅಧಿಕಾರವನ್ನು ತ್ಯಾಗ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನರೇಂದ್ರಮೋದಿ ರಾಜ್ಯದಲ್ಲಿ ಬಹಳಷ್ಟು ಓಡಾಡುತ್ತಿದ್ದಾರೆ. ರಾಜ್ಯದಿಂದ ಅವರು ಮುಖ್ಯಮಂತ್ರಿಯಾಗಬೇಕೇನೋ? ತಮ್ಮ ಭಾಷಣದ ಭರಾಟೆಯಲ್ಲಿ ರಾಜ್ಯ ಹಾಗೂ ರಾಜ್ಯದ ಜನತೆಯನ್ನು ಹಿಯಾಳಿಸುವ ಪ್ರಯತ್ನಗಳನ್ನು ಮೋದಿ ಮಾಡುತ್ತಿದ್ದಾರೆ ಎಂದು ಅವರು ಕಿಡಿಗಾರಿದರು.

ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರಕಾರದ ಎಲ್ಲ ಕಾರ್ಯಕ್ರಮಗಳು ಜನರಿಗೆ ತಲುಪಿವೆ. ಅದಕ್ಕಾಗಿ ತಮ್ಮ ಬಳಿ ಮತಯಾಚಿಸುತ್ತಿದ್ದೇವೆ. ಬಿಜೆಪಿಯವರಂತೆ ಯಾವುದೆ ಕೆಲಸವನ್ನು ಮಾಡದೆ ಮತವನ್ನು ಕೇಳುತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನರೇಂದ್ರಮೋದಿ ಸುಳ್ಳಿನ ಸರದಾರ. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.ಹಾಕುವುದಾಗಿ ಭರವಸೆ ನೀಡಿದರೂ, ಒಬ್ಬರ ಖಾತೆಗೂ ಹಣ ಬಂದಿಲ್ಲ. 2 ಕೋಟಿ ಉದ್ಯೋಗ ಕೊಟ್ಟಿಲ್ಲ, ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಅನುಷ್ಠಾನ ಮಾಡಿದ್ದೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ಸರಕಾರವು 165 ಭರವಸೆಗಳ ಪೈಕಿ 155 ಭರವಸೆಗಳನ್ನು ಈಡೇರಿಸಿದೆ. ಆದರೆ, ನರೇಂದ್ರಮೋದಿ ಸರಕಾರ ಒಂದು ಕೆಲಸವನ್ನು ಮಾಡದೆ ನಿಮ್ಮ ಬಳಿ ಬಂದು ಮತ ಯಾಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ನೀವು ಆಶೀರ್ವಾದ ಮಾಡಿ ಎಂದು ಅವರು ಮನವಿ ಮಾಡಿದರು.

ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆದಿದೆ. ಅವುಗಳ ವಿರುದ್ಧ ನೀವು ಮತ ನೀಡಿ, ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೇಂದ್ರದ ಮಾಜಿ ಸಚಿವರಾದ ಸುಶಿಲ್‌ಕುಮಾರ್ ಶಿಂಧೆ, ಶೆಲ್ಜಾ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಅಭ್ಯರ್ಥಿಗಳಾದ ಸಿ.ಎಸ್.ನಾಡಗೌಡ, ಯಶವಂತರಾಯಗೌಡ ಪಾಟೀಲ್, ಬಿ.ಆರ್.ಯಾವಗಲ್, ಶಿವಾನಂದಪಾಟೀಲ್, ಬಿ.ಎಸ್.ಪಾಟೀಲ್, ಸಿದ್ದುನ್ಯಾಮಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X