Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತ್ಯತೀತ ಪಕ್ಷವನ್ನು ಗೆಲ್ಲಿಸಲು ಸುನ್ನೀ...

ಜಾತ್ಯತೀತ ಪಕ್ಷವನ್ನು ಗೆಲ್ಲಿಸಲು ಸುನ್ನೀ ಉಲಮಾಗಳ ಕರೆ

ವಾರ್ತಾಭಾರತಿವಾರ್ತಾಭಾರತಿ8 May 2018 10:47 PM IST
share
ಜಾತ್ಯತೀತ ಪಕ್ಷವನ್ನು ಗೆಲ್ಲಿಸಲು ಸುನ್ನೀ ಉಲಮಾಗಳ ಕರೆ

ಮಂಗಳೂರು, ಮೇ 8: ಪ್ರಜಾಪ್ರಭುತ್ವ ಭಾರತದಲ್ಲಿ ಚುನಾವಣೆಯು ಪ್ರಜೆಗಳ ಪಾಲಿಗೆ ಅತ್ಯಂತ ಪ್ರಬಲ ಅಸ್ತ್ರವಾಗಿದ್ದು, ಮೇ 12ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಿ, ಜಾತ್ಯತೀತ ಪಕ್ಷವನ್ನು ಗೆಲ್ಲಿಸಬೇಕೆಂದು ಸುನ್ನೀ ಉಲಮಾ ನಾಯಕರು ಕರೆ ನೀಡಿದ್ದಾರೆ.

ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ ಪಾಲುದಾರಿಕೆ ಧಾರ್ಮಿಕ ವ್ಯಕ್ತಿಗಳೂ ಸೇರಿದಂತೆ ಪ್ರತಿಯೊಬ್ಬ ಪ್ರಜೆಗೂ ಅನಿವಾರ್ಯವಾಗಿದೆ. ಬಹು ಸಂಸ್ಕೃತಿಯ ಭಾರತೀಯ ಪರಂಪರೆಯು ಇಂದು ಕೋಮುವಾದಿ ಶಕ್ತಿಗಳಿಂದಾಗಿ ಅಪಾಯಕ್ಕೀಡಾಗಿದ್ದು, ಇದರ ವಿರುದ್ಧ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸುನ್ನೀ ಸಂಘಟನೆಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರೋಧವಾಗಿ ನಿಲ್ಲುವುದಿಲ್ಲ. ಆದಾಗ್ಯೂ ಜಾತ್ಯತೀತ ಮತಗಳು ವಿಭಜನೆ ಗೊಂಡು ಅತಂತ್ರ ವಿಧಾನಸಭೆ ರೂಪುಗೊಳ್ಳುವ ಇಲ್ಲವೇ ಕೋಮುವಾದಿ ಶಕ್ತಿಗಳು ಅಧಿಕಾರಕ್ಕೇರುವ ಸಾಧ್ಯತೆಯನ್ನು ತಡೆಯುವ ಸಲುವಾಗಿ ಜಯ ಸಾಧ್ಯತೆ ಹೆಚ್ಚಿರುವ ಪಕ್ಷವೊಂದನ್ನು ಬೆಂಬಲಿಸಬೇಕಾಗುತ್ತದೆ. ದೇಶದಲ್ಲಿ ಕಂಡು ಬರುತ್ತಿರುವ ಕೋಮುವಾದಿ ಅಸಹಿಷ್ಣುತೆ, ಆತಂಕಕಾರಿ ಬೆಳವಣಿಗೆಗಳನ್ನು ಸೋಲಿಸಲು ಜಾತ್ಯತೀತ ಕೈಗಳನ್ನು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಮತದಾನದ ಹಕ್ಕನ್ನು ಪ್ರಜ್ಞಾವಂತಿಕೆಯಿಂದ ಚಲಾಯಿಸುವಂತೆ ಉಲಮಾಗಳು ಆಗ್ರಹಿಸಿದ್ದಾರೆ.

ಕಳೆದ ಐದು ವರ್ಷಗಳ ಆಡಳಿತವನ್ನು ಅವಲೋಕಿಸಿದ ಸಭೆಯು, ಜನಪರ ಕಾಳಜಿ ಹಾಗೂ ಕೋಮು ಸೌಹಾರ್ದಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಸರಕಾರ ತೋರಿದ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿತು.

ಸುನ್ನೀ ಜಂಇಯತುಲ್ ಉಲಮಾ ರಾಜ್ಯಾಧ್ಯಕ್ಷ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಕಾರ್ಯದರ್ಶಿ ಎಸ್.ಪಿ.ಹಂಝ ಸಖಾಫಿ, ಎಸ್‌ವೈಎಸ್ ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್, ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸಂ ಅಬ್ದುಲ್ ರಶೀದ್ ಝೈನಿ, ಸಹ ಕಾರ್ಯದರ್ಶಿ ಎಂ.ಎ.ಸಿದ್ದೀಖ್ ಸಖಾಫಿ, ಸದಸ್ಯರಾದ ಎಂ.ಇ.ಉಮರ್ ಸಖಾಫಿ, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ.ಕಾಮಿಲ್ ಸಖಾಫಿ, ಮುಸ್ಲಿಮ್ ಜಮಾತ್ ಕೌನ್ಸಿಲ್ ಕಾರ್ಯದರ್ಶಿ ಅಬೂ ಸುಫ್ಯಾನ್ ಮದನಿ, ಸುನ್ನೀ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಪಿ.ಪಿ.ಅಹ್ಮದ್ ಸಖಾಫಿ, ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಖ್ ಭಾಗವಹಿಸಿದ್ದರು.

ಅಪಪ್ರಚಾರಗಳಿಗೆ ಕಿವಿಗೊಡಬೇಡಿ

ಎಸ್ಸೆಸ್ಸೆಫ್ ಸೇರಿದಂತೆ ಸುನ್ನೀ ಸಂಘಟನೆಗಳು ನಿರ್ದಿಷ್ಟ ಪಕ್ಷದ ಕೆಲವು ಅಭ್ಯರ್ಥಿಗಳನ್ನು ಸೋಲಿಸಲು ತೀರ್ಮಾನ ಕೈಗೊಂಡಿದೆ ಎಂಬ ಅಪಪ್ರಚಾರ ನಡೆಯುತ್ತಿರುವುದು ಖಂಡನೀಯ. ನಮ್ಮ ಸಂಘಟನೆಗಳು ಯಾವತ್ತೂ ಯಾವುದೇ ವ್ಯಕ್ತಿ ಅಥವಾ ಅಭ್ಯರ್ಥಿಯ ಪರ ಅಥವಾ ವಿರುದ್ಧವಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಸರಕಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ನೀಡಿದ್ದ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಯಾರದೇ ವೈಯಕ್ತಿಕ ಹೇಳಿಕೆಗಳಿಗೆ ಸಂಘಟನೆ ಹೊಣೆಯಾಗಿರುವುದಿಲ್ಲ. ಸಂಘಟನೆಯ ನಿಲುವುಗಳನ್ನು ಬಹಿರಂಗಪಡಿಸಲು ಯಾರನ್ನೂ ವಕ್ತಾರರನ್ನಾಗಿ ನೇಮಿಸಲಾಗಿಲ್ಲ. ಆದ್ದರಿಂದ ಅಪಪ್ರಚಾರಗಳಿಗೆ ಯಾರೂ ಕಿವಿಗೊಡಬಾರದೆಂದು ಸುನ್ನೀ ಉಲಮಾ ನಾಯಕರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X