Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂಟರ್‌ಪೇಟೆ ಪರಿಸರದಲ್ಲಿ ಲೋಬೊ ಮತಯಾಚನೆ

ಸೂಟರ್‌ಪೇಟೆ ಪರಿಸರದಲ್ಲಿ ಲೋಬೊ ಮತಯಾಚನೆ

ವಾರ್ತಾಭಾರತಿವಾರ್ತಾಭಾರತಿ8 May 2018 10:53 PM IST
share
ಸೂಟರ್‌ಪೇಟೆ ಪರಿಸರದಲ್ಲಿ ಲೋಬೊ ಮತಯಾಚನೆ

ಮಂಗಳೂರು, ಮೇ 8: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ.ಆರ್. ಲೋಬೊ ಅವರು ಮಂಗಳವಾರ ವೆಲೆನ್ಸಿಯಾ, ಸೂಟರ್‌ಪೇಟೆ ಪರಿಸರಗಳಲ್ಲಿ ಬಿರುಸಿನ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಲೋಬೊ ಅವರು, ಮತಯಾಚನೆ ಮಾಡುವಾಗ ಪ್ರತೀ ಮನೆಗಳಲ್ಲಿ ಜನರು ನಮಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿದ್ದಾರೆ. ಈ ಪ್ರದೇಶದ ಜನರ ಆತ್ಮೀಯತೆ, ಪ್ರೀತಿ ವಾತ್ಸಲ್ಯ ನಮಗೆ ಅತೀವ ಸಂತಸವನ್ನು ನೀಡಿದೆ. ಪರಿಶಿಷ್ಟ ಪಂಗಡದವರ ಉದ್ಧಾರಕ ದಿ. ಕುದ್ಮುಲ್ ರಂಗರಾವ್ ಅವರ ಹೆಸರಿನಲ್ಲಿ ಬಾಬುಗುಡ್ಡೆಯಲ್ಲಿ ರೂ. 3.50 ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಇದು ಪೂರ್ತಿಯಾದರೆ ಈ ಕಟ್ಟಡದಲ್ಲಿ ಪರಿಶಿಷ್ಟ ಪಂಗಡಗಳ ಜನರ ಅನೇಕ ಕಲ್ಯಾಣ ಕಾರ್ಯಕ್ರಮಗಳು ಜರಗಲಿವೆ. ಮಹಾಕಾಳಿಪಡ್ಪುವಿನಲ್ಲಿ ರೂ. 2.40 ಕೋಟಿ ವೆಚ್ಚದಲ್ಲಿ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ವಸತಿ ಗೃಹದ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಅದಲ್ಲದೆ ಈ ಪ್ರದೇಶದಲ್ಲಿರುವ ಶ್ರೀ ಆದಿ ಶಕ್ತಿಭುವನೇಶ್ವರಿ ಸಿದ್ಧಪೀಠಕ್ಕೆ ತೆರಳಿ ದೇವರ ದರ್ಶನ ಪಡೆದು, ಅಲ್ಲಿ ಪ್ರವೀಣ್ ಬಾಬಾ ಅವರ ಆರ್ಶೀರ್ವಾದವನ್ನು ಪಡೆದಿದ್ದೇನೆ. ಖಂಡಿತವಾಗಿಯೂ, ಈ ಪ್ರದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ನನ್ನನ್ನು ಮಗದೊಮ್ಮೆ ಶಾಸಕನಾಗಿ ಆಯ್ಕೆ ಮಾಡುತ್ತಾರೆ ಎಂಬ ದೃಢನಂಬಿಕೆ ಇದೆ ಎಂದರು.

ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಅಪ್ಪಿ, ಜೆಸಿಂತಾ ಆಲ್ಫ್ರೇಡ್, ಆಶಾ ಡಿ.ಸಿಲ್ವ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಸದಾಶಿವ ಅಮೀನ್, ಸುರೇಶ್ ಶೆಟ್ಟಿ, ಪ್ರದೀಪ್ ಬೇಕಲ್, ಟಿ.ಕೆ. ಸುಧೀರ್, ಮೆರಿಲ್ ರೇಗೋ, ರಮಾನಂದ ಪೂಜಾರಿ, ಬಿ.ಎಂ. ಭಾರತಿ, ಡೆನ್ನಿಸ್ ಡಿ.ಸಿಲ್ವ, ಹೊನ್ನಯ್ಯ, ಹ್ಯೂಬರ್ಟ್ ಪಾಯಸ್, ವಿನಯ್ ಲೋಬೊ, ಚೇತನ್, ಎಸ್.ವಿ. ಅಮೀನ್, ವಿನಯ್ ಮಸ್ಕರೇನಸ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X