Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನನಗೆ ಹಿಂದೂಗಳ ಮತ ಬೇಡವೆಂದು ಎಲ್ಲಿಯೂ...

ನನಗೆ ಹಿಂದೂಗಳ ಮತ ಬೇಡವೆಂದು ಎಲ್ಲಿಯೂ ಹೇಳಲಿಲ್ಲ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ9 May 2018 3:03 PM IST
share
ನನಗೆ ಹಿಂದೂಗಳ ಮತ ಬೇಡವೆಂದು ಎಲ್ಲಿಯೂ ಹೇಳಲಿಲ್ಲ: ರಮಾನಾಥ ರೈ

ಬಂಟ್ವಾಳ, ಮೇ 9: ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಹಿಂದೂಗಳ ಮತ ಬೇಡವೆಂದು ತಾನು ಎಲ್ಲಿಯೂ ಹೇಳಲಿಲ್ಲ. ಆದರೆ ಬಿಜೆಪಿ ಮುಖಂಡರು ನನ್ನ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ.

ಬುಧವಾರ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಿಜೆಪಿಗೆ ಪ್ರಚಾರ ಮಾಡಲು ಯಾವುದೇ ವಿಷಯಗಳಿಲ್ಲ. ಅದಕ್ಕಾಗಿ ಈ ರೀತಿಯ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ತಾನು ಬಂಟ್ವಾಳ ಕ್ಷೇತ್ರದ ಪುಣ್ಯ ಕ್ಷೇತ್ರಗಳಿಗೆ ಬಂದು ಆಣೆ ಪ್ರಮಾಣ ಮಾಡುತ್ತಾನೆ. ಈ ಬಗ್ಗೆ ಬಿಜೆಪಿಯವರು ಸಾಕ್ಷಿ ಸಮೇತ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು. ಜಿಲ್ಲೆಯಲ್ಲಿ ಅಭಿವೃದ್ಧಿಯ ವಿಚಾರವನ್ನಿಟ್ಟು ಮತ ಕೇಳುತ್ತಿದ್ದೇನೆ. ಆದರೆ ಬಿಜೆಪಿ ಕೇವಲ ಅಪಪ್ರಚಾರವನ್ನೆ ತಮ್ಮ ಬಂಡವಾಳವಾಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಯಾವುದೇ ಮತೀಯ ಸಂಘಟನೆಗಳೊಂದಿಗೆ ಕೈ ಜೋಡಿಸಿಲ್ಲ ಹಾಗೂ ಒಪ್ಪಂದ ಮಾಡಿಕೊಂಡಿಲ್ಲ. ಎಸ್‌ಡಿಪಿಐ ಅವರನ್ನು ನಮಗೆ ಬೆಂಬಲಿಸಿ ಎಂದು ನಾವು ಹೇಳಿಲ್ಲ. ಆದರೆ, ಅವರೇ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.
ಬಿಜೆಪಿ ಮುಖಂಡರಿಗೆ ಅಭಿವೃದ್ಧಿಯ ಯಾವೂದೇ ಅಜೆಂಡಾ ಇಲ್ಲ. ಅವರಿಗಿರುವುದು ಕೇವಲ ಸುಳ್ಳು ಅಪಪ್ರಚಾರ ಅಜೆಂಡಾ ಮಾತ್ರ ಎಂದು ರೈ ಆಕ್ರೋಶ ವ್ಯಕ್ತಪಡಿಸಿದರು.

ನಾವು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇವೆ. ಬಿಜೆಪಿಗೆ ಪ್ರಮಾಣಿಕತೆ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯಾ ಪ್ರಕರಣಗಳ ಬಂಧಿತ ಆರೋಪಿಗಳಲ್ಲಿ ಒಬ್ಬರೂ ಕಾಂಗ್ರೆಸ್‌ನವರಿಲ್ಲ. ಆದರೆ ಬಿಜೆಪಿಯ ಅಂಗ ಸಂಸ್ಥೆಗಳ ಕಾರ್ಯಕರ್ತರಿದ್ದಾರೆ. ಮೋದಿ ಹಿಂದೂಗಳ ಹತ್ಯೆಯ ಬಗ್ಗೆ ಹೇಳುತ್ತಿದ್ದಾರೆ. ಆದರೆ ಮನುಷ್ಯರ ಹತ್ಯೆ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

ಎ ಗ್ರೇಡ್ ದೇವಸ್ಥಾನದ ದುಡ್ಡನ್ನು ಸಿ ಗ್ರೇಡ್ ದೇವಸ್ಥಾನಕ್ಕೆ ಕೊಡಬೇಕು. ದುಡ್ಡಿನ ರೂಪದಲ್ಲಿ ಊಟದ ಅನುದಾನವನ್ನು ನೀಡುವ ಕ್ರಮವಿಲ್ಲ ಎಂದು ಕಲ್ಲಡ್ಕ, ಪುಣಚ ಶಾಲೆಗಳಿಗೆ ಬಿಸಿಯೂಟ ರದ್ದು ವಿಚಾರವನ್ನು ಪ್ರಸ್ತಾಪಿಸಿದರು. ಈ ಹಿನ್ನೆಲೆಯಲ್ಲಿ ಬಿಸಿಯೂಟಕ್ಕೆ ನೀಡುತ್ತಿದ್ದ ದೇವಸ್ಥಾನದ ಅನುದಾನವನ್ನು ರದ್ದುಗೊಳಿಸಿ, ಅಕ್ಷರ ದಾಸೋಹ ಮೂಲಕ ಬಿಸಿಯೂಟಕ್ಕೆ ಅವಕಾಶ ಒದಗಿಸಲಾಗಿತ್ತು. ಬಿಜೆಪಿಯವರು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿಯೇ ದೇವಸ್ಥಾನದ ದುಡ್ಡನ್ನು ಅನ್ಯಕಾರ್ಯಕ್ಕೆ ಬಳಸಬಾರದು ಎಂದಿದೆ. ನಾವು ಅದನ್ನು ಆಗಲೇ ಪಾಲಿಸಿದ್ದೇವೆ ಎಂದು ರೈ ತಿರುಗೇಟು ನೀಡಿದರು.

ನಾನು ಅದ್ಭುತವಾಗಿ ಕೆಲಸ ಮಾಡಿದ್ದೇನೆ. ಕೆಲಸ ಕಾರ್ಯಗಳಲ್ಲಿ ಉದಾಸೀನ ಮಾಡಿಲ್ಲ. ಸೈದ್ಧಾಂತಿಕ ವಿಚಾರದಲ್ಲಿ ರಾಜಿ ಮಾಡಿಲ್ಲ. ಯಾಶೀಲನಾಗಿದ್ದೇನೆ. ನಾನು ಮಾಡಿದ ಕೆಲಸ ನೋಡಿ ಮತ ನೀಡಿ ಎಂದು ರೈ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಪ್ರಮುಖರಾದ ಬೇಬಿ ಕುಂದರ್, ಬಿ.ಎಚ್. ಖಾದರ್, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಬಾಲಕೃಷ್ಣ ಆಳ್ವ, ಜಗದೀಶ್ ಕೊಯಿಲ, ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X