Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಸಿ.ಎಂ ಸಿದ್ದರಾಮಯ್ಯ ಚುನಾವಣೆ ಗೆಲ್ಲಲು...

"ಸಿ.ಎಂ ಸಿದ್ದರಾಮಯ್ಯ ಚುನಾವಣೆ ಗೆಲ್ಲಲು ವಾಮಮಾರ್ಗ ಅನುಸರಿಸುತ್ತಿದ್ದಾರೆ"

ಪ್ರಧಾನಿ ಮೋದಿ ಆರೋಪ

ವಾರ್ತಾಭಾರತಿವಾರ್ತಾಭಾರತಿ9 May 2018 6:05 PM IST
share
ಸಿ.ಎಂ ಸಿದ್ದರಾಮಯ್ಯ ಚುನಾವಣೆ ಗೆಲ್ಲಲು ವಾಮಮಾರ್ಗ ಅನುಸರಿಸುತ್ತಿದ್ದಾರೆ

ಚಿಕ್ಕಮಗಳೂರು, ಮೇ 9: ಕಾಂಗ್ರೆಸ್ ಪಕ್ಷದ ದೇಶದಲ್ಲಿ ಧೂಳಿಪಟವಾಗುವ ಕಾಲ ಸನ್ನಿಹಿತವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲಿ ಒಂದರ ಹಿಂದೆ ಒಂದರಂತೆ ಕಾಂಗ್ರೆಸ್ ಸೋಲುತ್ತಿದೆ. ಉತ್ತರ ಭಾರತದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ನೆಲಕಚ್ಚಿದೆ. ಆದರೂ ಕಾಂಗ್ರೆಸ್‍ನ ರಾಹುಲ್‍ಗಾಂಧಿ, ಸೋನಿಯಾಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಹಂಕಾರ ಕಮ್ಮಿಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 

ನಗರದ ಸುಭಾಶ್ ಚಂದ್ರಭೋಸ್ ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಹೋದಲ್ಲೆಲ್ಲಾ ಅವರು ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ತೆಗಳುತ್ತಾ ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಭಾರೀ ಅಭಿವೃದ್ಧಿ ಮಾಡಿದೆ ಎಂದು ಹೊಗಳುತ್ತಿದ್ದಾರೆ. ಆದರೆ ಅವರು ಸಂಸದರಾಗಿರುವ ಅಮೇಠಿ ಕ್ಷೇತ್ರದ ಅಭಿವೃದ್ಧಿಯನ್ನು ಮರೆತಿದ್ದಾರೆಂದು ಟೀಕಿಸಿದ ಪ್ರಧಾನಿ ಮೋದಿ, ರಾಹುಲ್‍ಗಾಂಧಿಗೆ ಸದ್ಯ ಪ್ರಧಾನಿ ಖುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಅವರಿಗೆ ಪ್ರಧಾನಿ ಖುರ್ಚಿ ಬಗ್ಗೆ ಮಾತ್ರ ಕಾಳಜಿ. ದೇಶದ ಬಗ್ಗೆ ಕಿಂಚಿತ್ ಕಾಳಜಿ ಇಲ್ಲ. ಕಾಂಗ್ರೆಸ್ ಪಕ್ಷ ಗಾಂಧಿ ಪರಿವಾರವಾಗಿದೆ. ಆ ಪಕ್ಷದಲ್ಲಿ ಪ್ರಧಾನಿ ಖುರ್ಚಿ ಕೇವಲ ಗಾಂಧಿ ಕುಟುಂಬದವರ ಸೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. 

ರಾಹುಲ್‍ಗಾಂಧಿ ಹಾಗೂ ಸೋನಿಯಾಗಾಂಧಿ 5 ಸಾವಿರ ಕೋ. ರೂ. ಹಗರಣದಲ್ಲಿ ಸಿಲುಕಿ ಜಾಮೀನು ಪಡೆದು ಓಡಾಡುತ್ತಿದ್ದಾರೆ. ಈ ಹಗರಣ ಹೊರಬಿದ್ದಾಗಲೇ ಕಾಂಗ್ರೆಸ್ ನಿರ್ನಾಮವಾಗಿದೆ. ಮೇ 12ರ ಚುನಾವಣೆಯಲ್ಲಿ ಕರ್ನಾಟಕದ ಜನತೆ ತಾಯಿ-ಮಗನನ್ನು ಶಾಶ್ವತವಾಗಿ ಮನೆಯಲ್ಲೇ ಇರುವಂತೆ ಮಾಡಲಿದ್ದಾರೆ. ಈ ಸತ್ಯ ಕಾಂಗ್ರೆಸ್‍ಗೆ ತಿಳಿದಿರುವುದರಿಂದ ಸೋಲಿನ ಭೀತಿಯಿಂದ ಸಿಎಂ ಸಿದ್ದರಾಮಯ್ಯ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹುನ್ನಾರ ನಡೆಸಿದ್ದಾರೆ. ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ ಎಂಬುದು ಮೇ 15ರ ಬಳಿಕ ಕಾಂಗ್ರೆಸ್‍ಗೆ ತಿಳಿಯಲಿದೆ ಎಂದರು.

1978 ರಲ್ಲಿ ಉತ್ತರ ಭಾರತದಲ್ಲಿ ಕಾಂಗ್ರೆಸ್ ನಿರ್ನಾಮವಾಗಿತ್ತು. ಅಂದು ದೇಶದಲ್ಲಿ ಇಂದಿರಾಗಾಂಧಿಗೆ ಎಲ್ಲೂ ನೆಲೆ ಇರಲಿಲ್ಲ. ಆಗ ಚಿಕ್ಕಮಗಳೂರಿಗೆ ಓಡಿ ಬಂದಿದ್ದ ಅವರನ್ನು ಇಲ್ಲಿನ ಜನತೆ ಆರಿಸಿ ಕಳುಹಿಸಿದ್ದರು. ಆದರೆ ಗೆದ್ದು ಹೋದ ಇಂದಿರಾಗಾಂಧಿ ಮತ್ತೆ ಇಲ್ಲಿಗೆ ಬಂದಿದ್ದರಾ? ರಾಜಕೀಯವಾಗಿ ಮರುಜನ್ಮ ನೀಡಿದ ಚಿಕ್ಕಮಗಳೂರಿಗೆ ಇಂದಿರಾಗಾಂಧಿ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದ ಮೋದಿ, ಸೋನಿಯಾಗಾಂಧಿ ಅವರು ಬಳ್ಳಾರಿಯಲ್ಲಿ ಈ ಹಿಂದಿನ ಚುನಾವಣೆ ಸಂದರ್ಭದಲ್ಲಿ 3 ಸಾವಿರ ಕೋ. ರೂ ಪ್ಯಾಕೇಜ್ ತಂದು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆಂದು ಭರವಸೆ ಕೊಟ್ಟಿದ್ದರು. ಆದರೆ ಈ ಭರವಸೆಯನ್ನು ಸೋನಿಯಾಗಾಂಧಿ ಈಡೇರಿಸಿದ್ದಾರಾ ಎಂದು ಮೋದಿ ಪ್ರಶ್ನಿಸಿದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅವನತಿ ಈಗಾಗಲೇ ಆರಂಭವಾಗಿದೆ. ಅವರು ಒಂದರಹಿಂದೆ ಒಂದರಂತೆ ಚುನಾವಣೆಗಳಲ್ಲಿ ಸೋಲು ಕಾಣುತ್ತಿದ್ದಾರೆ. ಉತ್ತರ ಭಾರತದಲ್ಲಿ ಕಾಂಗ್ರೆಸ್‍ಗೆ ಅಸ್ತಿತ್ವವಿಲ್ಲದಂತಾಗಿದೆ. ಆದರೂ ರಾಹುಲ್‍ಗಾಂಧಿ ಕರ್ನಾಟಕಕ್ಕೆ ಬಂದು ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚುನಾವಣೆಗಲ್ಲಿ ಸರಣಿ ಸೋಲು ಕಾಣುತ್ತಿದ್ದರೂ ಅಹಂಕಾರದ ಮಾತುಗಳಾಡುವುದನ್ನು ರಾಹುಲ್‍ಗಾಂಧಿ ಮುಂದುವರಿಸಿದ್ದಾರೆ. ಸೋಲನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳದ ಕಾಂಗ್ರೆಸ್‍ನವರು ಹತಾಶೆಯಿಂದ ಚುನಾವಣಾ ಸೋಲನ್ನು ಇವಿಎಂ ಮತಯಂತ್ರಗಳ ಮೇಲೆ ಹಾಕಲಾರಂಭಿಸಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿ ಭಾಷಣದ ಆರಂಭದಲ್ಲಿ ಕನ್ನಡದಲ್ಲಿ 'ಚಿಕ್ಕಮಗಳೂರಿನ ಮಹಾ ಜನತೆಗೆ ನಮಸ್ಕಾರಗಳು' ಎಂದು ಉಚ್ಛರಿಸಿದರು. ಈ ವೇಳೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲುಮುಟ್ಟಿತ್ತು. ಪ್ರಧಾನಿ ಕಾರ್ಯಕ್ರಮದ ಹಿಂದಿ ಭಾಷಣವನ್ನು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಕನ್ನಡಕ್ಕೆ ಅನುವಾದಿಸಿ ಹೇಳಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಮುಖ್ಯ ರಸ್ತೆಗಳಲ್ಲಿ  ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ, ಮೆರವಣಿಗೆ ನಡೆಸಿದರು. 

ಕಾರ್ಯಕ್ರಮದ ವೇದಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳಾದ ಸಿಟಿ ರವಿ, ಜೀವರಾಜ್, ಎಂ.ಪಿ.ಕುಮಾರಸ್ವಾಮಿ, ಡಿ.ಎಸ್.ಸುರೇಶ್, ಬೆಳ್ಳಿ ಪ್ರಕಾಶ್, ಬೇಲೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಉಪಸ್ಥಿತರಿದ್ದರು. ಹಾಸನ, ಬೇಲೂರು, ಸಕಲೇಶಪುರ, ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ತರೀಕೆರೆ, ಕಡೂರು ವಿಧಾನಸಭೆ ಕ್ಷೇತ್ರಗಳ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕಾಂಗ್ರೆಸ್‍ಗೆ ಜನತಂತ್ರ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ:
ಕಾಂಗ್ರೆಸ್‍ನವರು ಈ ಹಿಂದೆ ದೇಶದಲ್ಲಿ ತಮಗೆ ಜನತೆ ನೀಡಿದ ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡು ದುರಾಡಳಿತ ನಡೆಸಿದರು ಎಂದು ಆರೋಪಿಸಿದ ಮೋದಿ, ಭಾರತದ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಜಗತ್ತೇ ಮೆಚ್ಚಿಕೊಂಡಿದೆ. ಆದರೆ ಕಾಂಗ್ರೆಸ್ ಚುನಾವಣಾ ಆಯೋಗವೇ ಸರಿ ಇಲ್ಲ ಎನ್ನುತ್ತಿದೆ, ಅವರ ಪ್ರಕಾರ ಕಾಂಗ್ರೆಸ್ ಮಾತ್ರ ಸರಿ ಇದೆ. ಅವರ ಪ್ರಕಾರ ಇವಿಎಂ ಮತಯಂತ್ರಗಳು ರಾಂಗ್ ಕಾಂಗ್ರೆಸ್ ರೈಟ್, ಸಿಐಡಿ ರಾಂಗ್ ಕಾಂಗ್ರೆಸ್ ರೈಟ್. ಸಿಐಡಿ, ಎನ್‍ಐಎಯಂತಹ ಸಂಸ್ಥೆಗಳನ್ನೂ ಸರಿಯಿಲ್ಲ ಎಂದು ಕಾಂಗ್ರೆಸ್ ದೂರುತ್ತಿದೆ.

ಭಾರತರ ಸೈನ್ಯ, ರಕ್ಷಣಾ ವ್ಯವಸ್ಥೆ ಬಗ್ಗೆಯೂ ಕಾಂಗ್ರೆಸ್‍ನವರಿಗೆ ನಂಬಿಕೆ ಇಲ್ಲ. ಬೋಫೋರ್ಸ್ ಹಗರದ ಮೂಲಕ ಇಡೀ ವಿಶ್ವದ ಮುಂದೆ ಕಾಂಗ್ರೆಸ್ ದೇಶದ ಸೈನ್ಯದ ಮಾನ ಹರಾಜು ಹಾಕಿದೆ. ಕಾಂಗ್ರೆಸ್‍ನವರಿಗೆ ನಮ್ಮ ನ್ಯಾಯಾಲಯಗಳ ಮೇಲೂ ನಂಬಿಕೆ ಇಲ್ಲ. ಜಿಹಾದಿಗಳನ್ನು, ನಕ್ಸಲೇಟ್, ಉಗ್ರಗಾಮಿಗಳನ್ನು ಹತ್ತಿಕ್ಕಿದರೆ ಕಾಂಗ್ರೆಸ್‍ನವರಿಗೆ ಇದೂ ತಪ್ಪಾಗಿ ಕಾಣುತ್ತದೆ. ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆಯನ್ನು ಸುಭದ್ರಗೊಳಿಸಲು ಹೊಸ ಆರ್ಥಿಕ ನೀತಿಗಳನ್ನು ಜಾರಿ ತಂದರೆ ಅದನ್ನೂ ಕಾಂಗ್ರೆಸ್‍ನವರು ಟೀಕಿಸುತ್ತಿದ್ದಾರೆ. ಇಡೀ ಪ್ರಪಂಚ ದೇಶದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರೆ, ಮೋದಿ ಇಡೀ ವಿಶ್ವವನ್ನೇ ಖರೀದಿಸಿದ್ದಾರೆಂದು ಕಾಂಗ್ರೆಸ್ ನವರು ಆರೋಪಿಸುತ್ತಿದ್ದಾರೆಂದು ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X