ಉಡುಪಿ: ಅಂಚೆ ಮತ ಪತ್ರ ಹಾಕಲು ವ್ಯವಸ್ಥೆ
ಉಡುಪಿ, ಮೇ 9: ಮೇ 12ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿ ಸಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಅಧಿಕಾರಿ/ಸಿಬ್ಬಂದಿಗಳಿಗೆ ಅಂಚೆ ಮತಪತ್ರಗಳ ಮೂಲಕ ಮತ ಚಲಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ಈಗಾಗಲೇ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿ, ಸಿಬ್ಬಂದಿಗಳು ನಮೂನೆ-12ರಲ್ಲಿ ಅರ್ಜಿಗಳನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಸಲ್ಲಿಸಿ ಅಂಚೆ ಮೂಲಕ ಮತಪತ್ರಗಳನ್ನು ಪಡೆದಿರುವ ಅಧಿಕಾರಿ/ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಕೇಂದ್ರದಲ್ಲಿ ಮೇ 11ರಂದು ಸಹಾಯ ಕೇಂದ್ರವನ್ನು ತೆರೆದು ಅಂಚೆ ಮತಪತ್ರಗಳನ್ನು ಡ್ರಾಪ್ ಬಾಕ್ಸ್‌ನಲ್ಲಿ ಹಾಕಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
Next Story





