ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಲಾವಣ್ಯಾ ಬಲ್ಲಾಳ್

ಬಂಟ್ವಾಳ, ಮೇ 9: ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ. ಮತದಾರರ ಮನಸ್ಥಿತಿಯೂ ಕಾಂಗ್ರೆಸ್ ಪರವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ವಕ್ತಾರೆ, ಜಿಲ್ಲಾ ಪ್ರಚಾರ ಸಮಿತಿಯ ಉಸ್ತುವಾರಿ ವೀಕ್ಷಕಿ ಲಾವಣ್ಯಾ ಬಲ್ಲಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರಚಾರ ವೀಕ್ಷಕರಾಗಿರುವ ಲಾವಣ್ಯಾ ಬಲ್ಲಾಳ್, ಬುಧವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪ್ರತೀ ಯೋಜ ನೆಯೂ ಜನರ ಮನೆ ಬಾಗಿಲಿಗೆ ತಲುಪುಲ್ಲಿಯೂ ಕೂಡಾ ಸಿದ್ದರಾಮಯ್ಯ ಸರಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಭಾಗ್ಯಗಳ ಸರದಾರ ಎಂದೆನಿಸಿಕೊಂಡಿರುವ ರಾಜ್ಯ ಸರಕಾರ ಬಡವರು, ಮಹಿಳೆಯರು, ಯುವಕರು, ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿ ಗೊಳಿಸಿದೆ. ಅನ್ನಭಾಗ್ಯ ಯೋಜನೆಯಿಂದ ಬಡವರು ಮೂರೊತ್ತು ಉನ್ನುವಂತಾಗಿದೆ ಎಂದು ಅವರು, ರೈತ ವಿರೋಧಿಯಾಗಿರುವ ಬಿಜೆಪಿಯನ್ನು ಜನರು ತಿರಸ್ಕರಿಸುತ್ತಿದ್ದಾರೆ ಎಂದು ಅವರು ಹೇಳಿದರು.







