Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೋದಿ ಸರಕಾರದಿಂದ ಮೀನುಗಾರರಿಗೆ...

ಮೋದಿ ಸರಕಾರದಿಂದ ಮೀನುಗಾರರಿಗೆ ಅನ್ಯಾಯವಾಗಿದೆ- ರಾಮ ಮೊಗೇರ್

ವಾರ್ತಾಭಾರತಿವಾರ್ತಾಭಾರತಿ9 May 2018 9:17 PM IST
share

ಭಟ್ಕಳ, ಮೇ 9: ಕೇಂದ್ರದಲ್ಲಿನ ಮೋದಿ ಸರ್ಕಾರದಿಂದಾಗಿ ಕಳೆದ ನಾಲ್ಕ ವರ್ಷದಿಂದ ಮೀನುಗಾರರ ಸಮುದಾಯಕ್ಕೆ ಬಹಳಷ್ಟು ಅನ್ಯಾಯವಾಗಿದೆ ಎಂದು ಮೀನುಗಾರರ ಸಮುದಾಯದ ಮುಖಂಡ ರಾಮ ಮೊಗೇರ್ ಆರೋಪಿಸಿದ್ದಾರೆ.

 ಬುಧವಾರ ಪತ್ರಿಕಾಗೊಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೀನುಗಾರರಿಗೆ ಜಿ.ಎಸ್.ಟಿ ಯಿಂದಾಗಿ ಬಹಳಷ್ಟು ತೊಂದರೆಯಾಗುತ್ತಿದೆ. ಬಲೆ, ರೋಪ್,ಎಂಜಿನ್, ಒಣಮೀನು ಮೇಲೆ ಜಿ.ಎಸ್.ಟಿ ಹಾಕುವುದರ ಮೂಲಕ ಮೀನುಗಾರರ ಸಂಕಷ್ಟವನ್ನು ಅನುಭವಿಸುವಂತೆ ಮಾಡಿದ್ದಾರೆ. ಬಿಜೆಪಿಗರು ಕೇವಲ ಸುಳ್ಳು ಹೇಳುವುದನ್ನೆ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದು ಭಟ್ಕಳದ ಅಭಿವೃದ್ಧಿಯ ಹರಿಕಾರ ಮಾಂಕಾಳ್ ವೈದ್ಯರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಲ್ಲದೆ ಜಾತಿಯ ಹೆಸರು ಹೇಳಿ ನಿಂದಿಸುತ್ತಿದ್ದು ಇದು ಮೀನುಗಾರ ಸಮುದಾಯಕ್ಕೆ ಬಹಳ ನೋವುಂಟು ಮಾಡಿದೆ. ಯಾವುದೇ ಕಾರಣ ನಮ್ಮ ಸಮುದಾಯದ ನೇತಾರ ಮಾಂಕಾಳರನ್ನು ನಿಂದಿಸುವ, ತೋಜೋವಧೆ ಮಾಡುವ ಕೆಲಸವನ್ನು ನಿಲ್ಲಿಸಬೇಕೆಂದು ಅವರು ಆಗ್ರಹಿಸಿದರು.

ಜಾತಿ ರಾಜಕಾರಣ ಮಾಡುತ್ತಿರುವ ಬಿಜೆಪಿಗರು ಹಿಂದುತ್ವದ ಹುಸಿ ಮುಖವಾಡ ಧರಿಸಿದ್ದಾರೆ. ನಾವೆಲ್ಲರೂ ಹಿಂದೂಗಳೇ ಆಗಿದ್ದೇವೆ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವವಿದೆ. ಆದರೆ ಈ ಡೋಂಗಿಗಳಿಂದ ನಾವು ಹಿಂದೂ ಧರ್ಮದ ಕುರಿತಂತೆ ಪಾಠ ಕಲಿಯುವ ಅಗತ್ಯವಿಲ್ಲ. ನೀವು ನಿಮ್ಮ ಕೆಲಸ ಮಾಡಿ ಅಭಿವೃದ್ಧಿ ಕುರಿತಂತೆ ಮತ ಕೇಳಿ ಸುಖಸುಮ್ಮನೆ ಹಿಂದುತ್ವದ ಹೆಸರನ್ನು ಹಾಳು ಮಾಡಬೇಡಿ. ಬಿಜೆಪಿಯ ಶಾಸಕ ಗೌರವಯುತ ಡಾ.ಚಿತ್ತರಂಜನ್ ಹಾಗೂ ಬಿಜೆಪಿ ಮುಖಂಡ ತಿಮ್ಮಪ್ಪ ನಾಯ್ಕರ ಕೊಲೆಗಾರರನ್ನು ಹಿಡಿಯಲು ಆಗದ ನಿಮಗೆ ಅವರ ಹೆಣಗಳನ್ನು ಮುಂದಿಟ್ಟುಕೊಂಡೂ ಈಗಲೂ ರಾಜಕೀಯ ಮಾಡುತ್ತಿದ್ದೀರಿ. ಚಿತ್ತರಂಜನ್ ಕೊಲೆಯಾದಾಗ ಅಡ್ವಾಣಿ, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಬಂದು ಕಣ್ಣಿರು ಸುರಿಸಿದ್ದೀರಿ ಅದರ ಅನುಕಂಪದಿಂದಲೇ ಶಾಸಕನಾಗಿ ಮಂತ್ರಿಯಾದ ಶಿವಾನಂದಾ ನಾಯ್ಕರು ವಿಧಾಸನ ಸಭೆಯಲ್ಲಿ ಒಂದೂ ಮಾತನ್ನು ಆಡದೆ ಹಿಂದೂತ್ವದ ಡೋಂಗಿತನ ವನ್ನು ಪ್ರದರ್ಶಿಸುತ್ತಿದ್ದೀರಿ ಎಂದು ಲೆವಡಿ ಮಾಡಿದರು.

ಖಾರ್ವಿ ಸಮಾಜದ ಮುಖಂಡ ವಸಂತ ಖಾರ್ವಿ ಮಾತನಾಡಿ,ಶಾಸಕರು ತಮ್ಮ ನಾಲ್ಕ ವರ್ಷದ ಅವಧಿಯಲ್ಲಿ ಮೀನುಗಾರ ಸಮಾಜ ಹಾಗೂ ಇತರ ಎಲ್ಲ ಸಮಾಜದ ಅಭಿವೃದ್ಧಿಯನ್ನು ಮಾಡಿದ್ದು ಮೀನುಗಾರರು ಮೃತರಾದರೆ 2 ಲಕ್ಷ ಕೊಡುತ್ತಿದ್ದ ಪರಿಹಾರಧನವನ್ನು ಮಾಂಕಾಳರು 6 ಲಕ್ಷಕ್ಕೂ ಹೆಚ್ಚಿಸಿದ ಕೀರ್ತಿ ಅವರದ್ದು. ಮೀನುಗಾರರು ಸತ್ತರೆ ಅವರ ಹೆಣ ಹುಡುಕಲು ಪರದಾಡುವಂತಹ ಸನ್ನಿವೇಶ ಇತ್ತು ಆದರೆ ಮಾಂಕಾಳರು ತಮ್ಮ ಅವಧಿಯಲ್ಲಿ ದುರಂತ ಸಂಭವಿಸಿದಾಗ ಕೂಡಲೆ ಸ್ಪಂಧಿಸಿ ಹೆಲಿಕಾಪ್ಟರ್ ಮೂಲಕ ಮೃತದೇಹಗಳ ಪತ್ತೆಗೆ ನೆರವಾದರು. ಕ್ಷೇತ್ರದ ಎಲ್ಲ ಮೀನುಗಾರರು ಮಾಂಕಾಳ ವೈದ್ಯರ ಪರ ಕೆಲಸ ಮಾಡಿ ಅವರನ್ನು ಗೆಲ್ಲಿಸಲು ಪಣತೊಡಬೇಕೆಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮೋಗೇರ್ ಸಮಾಜದ ಅಧ್ಯಕ್ಷ ಭಾಸ್ಕರ್ ಮೊಗೇರ್,ಗಾಬಿತ ಸಮಾಜ ಮುಖಂಡ ಮೋಹನ್ ಗಾಬಿತ, ಹರಿಕಾಂತ್ ಸಮಾಜದ ಕೃಷ್ಣ ಹರಿಕಾಂತ್, ಎನ್.ಎನ್. ಖಾರ್ವಿ, ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X