ನರೇಂದ್ರ ಮೋದಿ ಸರಕಾರ ಮಹಿಳೆಯರಿಗೆ ಹಲವಾರು ಯೋಜನೆ ಹಾಕಿಕೊಂಡಿದೆ: ರೂಪಾ ಡಿ. ಬಂಗೇರ
ಮಂಗಳೂರು, ಮೇ 9: ಕೇಂದ್ರದ ನರೇಂದ್ರ ಮೋದಿ ಸರಕಾರ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಮಹಿಳೆಯರು ಬಿಜೆಪಿ ಮತವನ್ನು ಹಾಕುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಕಾರ್ಪೋರೇಟರ್ ರೂಪಾ ಡಿ. ಬಂಗೇರ ಮನವಿ ಮಾಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಟಿ ಬಚಾವೊ, ಬೇಟಿ ಪಡಾವೊ, ಸುಕನ್ಯಾ ಸಮೃದ್ದಿ, ಮುದ್ರಾ ಯೋಜನೆ, ಉಜ್ವಲ ಯೋಜನೆ ಮೊದಲಾದ ಯೋಜನೆಗಳನ್ನು ಕೇಂದ್ರ ಸರಕಾರ ಪರಿಚಯಿಸಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರಕ್ಕೆ ಮಹಿಳೆಯರ ಕಾಳಜಿ ಇಲ್ಲದಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಜಯಂತಿ ಆಚಾರ್, ಮೀರಾ ಕರ್ಕೇರಾ, ಬಿಜೆಪಿ ಮಹಿಳಾ ಮೋರ್ಚಾ ಮಂಗಳೂರು ದಕ್ಷಿಣ ಅಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ದಕ್ಷಿಣ ಮಂಡಲ ಕಾರ್ಯದರ್ಶಿ ನಿವೇದಿತಾ ಶೆಟ್ಟಿ ಉಪಸ್ಥಿತರಿದ್ದರು.
Next Story