ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಲು ಸಿಪಿಐ ಮನವಿ
ಮಂಗಳೂರು, ಮೇ.9: ಸಂವಿಧಾನ, ಜಾತ್ಯತೀತತೆ, ಪ್ರಜಾಸತ್ತೆಯ ರಕ್ಷಣೆಗಾಗಿ ಜನಪರ ರಾಜಕೀಯ ನೀತಿಗಳನ್ನು ಬಲಪಡಿಸಿ ರಕ್ಷಿಸುವುದೇ ಸಿಪಿಐ ಉದ್ದೇಶವಾಗಿದ್ದು, ದಲಿತರು, ಅಲ್ಪಸಂಖ್ಯಾತರು ನೆಮ್ಮದಿಯ ಬದುಕು ಸಾಗಿಸಲು ರೈತ, ಕಾರ್ಮಿಕ, ಆದಿವಾಸಿ, ಮಹಿಳೆಯರು ಯುವಜನರ ಸ್ವಾಭಿಮಾನಿ ಬದುಕನ್ನು ರಕ್ಷಿಸುವ ಸಂಕಲ್ಪಹೊಂದಲಾಗಿದೆ. ಕೇಂದ್ರದ ಬಿಜೆಪಿ ಸರಕಾದಿಂದ ಇದನ್ನು ಈಡೇರಿಸಲು ಸಾಧ್ಯವಿಲ್ಲ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಲು ಪಕ್ಷ ತೀರ್ಮಾನಿಸಿದೆ. ಅದರಂತೆ ದ.ಕ. ಜಿಲ್ಲೆಯ ಮೂಡುಬಿದಿರೆ, ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಅಭಯಚಂದ್ರ ಜೈನ್, ಮೊಯ್ದಿನ್ ಬಾವ, ಜೆ. ಆರ್. ಲೋಬೊ, ಯು.ಟಿ ಖಾದರ್ ಅವರಿಗೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಸಿಪಿಐ ಮಂಗಳೂರು ತಾಲೂಕು ಸಮಿತಿ ಮನವಿ ಮಾಡಿದೆ.
Next Story





