Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೇ. 50ರಷ್ಟು ಸೀಟುಗಳನ್ನು ನಮಗೆ ಬಿಟ್ಟು...

ಶೇ. 50ರಷ್ಟು ಸೀಟುಗಳನ್ನು ನಮಗೆ ಬಿಟ್ಟು ಕೊಡಿ: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ವೈದ್ಯಕೀಯ ಪದವಿ ಸೀಟು ಹಂಚಿಕೆ ವಿಚಾರ

ವಾರ್ತಾಭಾರತಿವಾರ್ತಾಭಾರತಿ10 May 2018 9:33 PM IST
share
ಶೇ. 50ರಷ್ಟು ಸೀಟುಗಳನ್ನು ನಮಗೆ ಬಿಟ್ಟು ಕೊಡಿ: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು, ಮೇ 10: ವೈದ್ಯಕೀಯ ಪದವಿ ಸೀಟು ಹಂಚಿಕೆಗೆ ಸಂಬಂಧಿಸಿದ ಸ್ನಾತಕೋತ್ತರ ವೈದ್ಯ ಶಿಕ್ಷಣ (ತಿದ್ದುಪಡಿ) ನಿಯಮ 2018 ಅನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಮತ್ತು ಆ ಪ್ರಕಾರ ಶೇ. 50ರಷ್ಟು ಸೀಟುಗಳನ್ನು ನಮಗೆ ಬಿಟ್ಟುಕೊಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಹೈಕೋರ್ಟ್ ಮೆಟ್ಟಿಲೇರಿವೆ.

ಈ ಸಂಬಂಧ, ಕರ್ನಾಟಕದಲ್ಲಿನ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಒಕ್ಕೂಟದ ಅಧ್ಯಕ್ಷೆ ಡಿ.ಎ.ಕಲ್ಪಜಾ, ಬೆಂಗಳೂರಿನ ರಾಜರಾಜೇಶ್ವರಿ ಮತ್ತು ವೈದೇಹಿ ವೈದ್ಯಕೀಯ ಕಾಲೇಜುಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರಕರಣದ ಪ್ರತಿವಾದಿಗಳಾದ ಕೇಂದ್ರ ಆರೋಗ್ಯ ಸಚಿವಾಲಯ, ರಾಜ್ಯದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ. ಒಪ್ಪಂದದ ಅನುಸಾರ ಪರೀಕ್ಷಾ ಪ್ರಾಧಿಕಾರ ಮಾಡುವ ಸೀಟು ಹಂಚಿಕೆಯು ಈ ರಿಟ್ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಆದೇಶಿಸಲಾಗಿದೆ.

ಅರ್ಜಿಯಲ್ಲಿ ಏನಿದೆ: ಕೇಂದ್ರ ಸರಕಾರವು 2018ರಲ್ಲಿ ಹೊರಡಿಸಿರುವ ಹೊಸ ನಿಯಮದಂತೆ ರಾಜ್ಯ ಸರಕಾರ ಶೇ 50ರಷ್ಟು ಸೀಟುಗಳನ್ನು ಖಾಸಗಿ ವೈದ್ಯ ಕಾಲೇಜುಗಳಿಗೆ ಬಿಟ್ಟುಕೊಡಬೇಕು. ಉಳಿದ ಶೇ 50ರಷ್ಟು ಸೀಟುಗಳನ್ನು ನೀಟ್ ಪರೀಕ್ಷೆಯಲ್ಲಿ ಅರ್ಹತೆ ಅನುಸಾರ ಗಿಟ್ಟಿಸಿದವರಿಗೆ ಕೆಇಎ ಮೂಲಕ ಹಂಚಿಕೆ ಮಾಡಬೇಕು. ಆದರೆ ರಾಜ್ಯ ಸರಕಾರ ಶೇ.25ರಷ್ಟು ಸೀಟುಗಳನ್ನು ಮಾತ್ರ ಖಾಸಗಿಯವರಿಗೆ ನೀಡುತ್ತಿದೆ ಎಂಬುದು ಅರ್ಜಿದಾರರ ಆಕ್ಷೇಪ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಸರಕಾರವು ಖಾಸಗಿ ವೈದ್ಯ ಕಾಲೇಜುಗಳ ಜೊತೆ ಒಪ್ಪಂದ ಮಾಡಿಕೊಳ್ಳುತ್ತಿದೆ. ಇದರ ಅನುಸಾರ ಅನಿವಾಸಿ ಭಾರತೀಯ ಕೋಟಾದಡಿ ಶೇ 15 ಮತ್ತು ಶೇ 10ರಷ್ಟು ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಕಾಲೇಜುಗಳಿಗೆ ಅವಕಾಶ ನೀಡುತ್ತಿದೆ. ಇನ್ನುಳಿದ ಶೇ 75ರಷ್ಟು ಸೀಟುಗಳನ್ನು ಸರಕಾರವೇ ಪಡೆದುಕೊಳ್ಳುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸರಕಾರ ಭರ್ತಿ ಮಾಡುವ ಸೀಟುಗಳಿಗೆ ಕಡಿಮೆ ಶುಲ್ಕ ನಿಗದಿಪಡಿಸಲಾಗಿದೆ. ಇದರಿಂದ ಮೂಲಸೌಕರ್ಯ ಕಲ್ಪಿಸುವುದು ಕಷ್ಟ. ಹೀಗಾಗಿ, ಹೊಸ ನಿಯಮದಂತೆ ಶೇ 50ರಷ್ಟು ಸೀಟುಗಳನ್ನು ಖಾಸಗಿ ವೈದ್ಯ ಕಾಲೇಜುಗಳಿಗೆ ಬಿಟ್ಟುಕೊಡಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವಕೀಲ ಆರ್.ಸುಬ್ರಹ್ಮಣ್ಯ ವಾದ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X