Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರು ಕಾಂಗ್ರೆಸ್ ಬೆಂಬಲಿಸುವಂತೆ...

ದಲಿತರು ಕಾಂಗ್ರೆಸ್ ಬೆಂಬಲಿಸುವಂತೆ ಡಾ.ಎಲ್.ಹನುಮಂತಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ10 May 2018 11:38 PM IST
share
ದಲಿತರು ಕಾಂಗ್ರೆಸ್ ಬೆಂಬಲಿಸುವಂತೆ ಡಾ.ಎಲ್.ಹನುಮಂತಯ್ಯ ಕರೆ

ತುಮಕೂರು,ಮೇ.10: ಕಾಂಗ್ರೆಸ್ ಪಕ್ಷ ಯಾವಾಗಲೂ ದಲಿತರ ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಪರವಾಗಿರುವಂತಹ ಪಕ್ಷವಾಗಿದ್ದು, ಮೇ.12 ರಂದು ನಡೆಯುವ ಮತದಾನದ ವೇಳೆ ದಲಿತರು, ಹಿಂದುಳಿದ ವರ್ಗಗಳ ಜನರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಕರೆ ನೀಡಿದ್ದಾರೆ.

ನಗರದ ಎನ್.ಆರ್.ಕಾಲೋನಿಯಲ್ಲಿ ಕಾಂಗ್ರೆಸ್ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತಿದ್ದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ನಂತರ ಎಲ್ಲಾ ಬಡವರಿಗೂ ಉಚಿತ ಅಕ್ಕಿ ಕೊಡುವಂತಹ ಅನ್ನಭಾಗ್ಯ ಯೋಜನೆ ಜಾರಿ ಮತ್ತು ದಲಿತರ ಸಾಲಮನ್ನಾ, ಆಶ್ರಯ ಮನೆಗಳ ಮೇಲಿನ ಸಾಲಮನ್ನಾ ಮಾಡಿ ನುಡಿದಂತೆ ನಡೆವ ಸರಕಾರ ಎಂದು ನಿರೂಪಿಸಿದರು ಎಂದರು.

ಕೇಂದ್ರದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಎಂದು ಮೋದಿಯವರು ಹೇಳಿ ಬರೀ ಬಾಯಿ ಮಾತಿನಲ್ಲೆ ಜನರಿಗೆ ಹೊಟ್ಟೆ ತುಂಬಿಸುತ್ತಿದ್ದಾರೆ. ಆದರೆ ನಮ್ಮ ಸಿದ್ದರಾಮಯ್ಯ ನವರು ಒಂದನೇ ತರಗತಿಯಿಂದ 30ನೇ ವರ್ಷದವರೆಗೂ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಿ ನಿಜವಾಗಿ ಬೇಟಿ ಬಚಾವೋ ಮಾಡುತ್ತಿದ್ದಾರೆ. ಶೇ25% ಇರುವ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಲ್ಲಿ ಕಳೆದ ಐದು ವರ್ಷಗಳಲ್ಲಿ 80 ಸಾವಿರ ಕೋಟಿಯನ್ನು ಮೀಸಲಿಟ್ಟಿದ್ದಾರೆ. ಇದರ ಭಾಗವಾಗಿ ಎನ್.ಆರ್.ಕಾಲೋನಿ ಕೊಳಚೆ ಪ್ರದೇಶಕ್ಕೆ 5 ಕೋಟಿ ಅನುದಾನ ಖರ್ಚು ಮಾಡಿ ಮಾದರಿ ವಾರ್ಡಾಗಿ ಪರಿವರ್ತಿಸಿದ್ದಾರೆ. ಹಾಗಾಗಿ ನಮ್ಮ ಪರವಾಗಿರುವಂತವರನ್ನು ನಾವು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿದರು.

ಜೆಡಿಎಸ್‍ನವರಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅವರು ಈಗಾಗಲೇ ಕೋಮುವಾದಿ ಪಕ್ಷವಾದ ಬಿಜೆಪಿಯವರ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಪಕ್ಷಕ್ಕೆ ಮತ ನೀಡಿ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ದಲಿತರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಡಾ.ಎಲ್.ಹನುಮಂತಯ್ಯ ಕರೆ ಕೊಟ್ಟರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆಂಚಮಾರಯ್ಯ ಮಾತನಾಡಿ, ಅನ್ನಭಾಗ್ಯ, ಕ್ಷೀರಭಾಗ್ಯ,ಶೂ ಭಾಗ್ಯ, ಹೀಗೆ ಹಲವಾರು ಜನಪರ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ದಲಿತ ಬಾಂಧವರು ಮತ ನೀಡಬೇಕೆಂದರು.

ಶಾಸಕರಾದ ರಪೀಕ್ ಅಹಮದ್ ಮಾತನಾಡಿ, ರಸ್ತೆ, ಚರಂಡಿ, ಕುಡಿಯುವ ನೀರು, ಹೀಗೆ ಮೂಲಭೂತ ಸೌಕರ್ಯಗಳಿಗೆ ಐದು ಕೋಟಿ ಅನುದಾನವನ್ನು ನೀಡಿದ್ದೇನೆ. ಕಾಲೋನಿಗೆ ಒಂದು ಶೈಕ್ಷಣಿಕ ಭವನವನ್ನು ಹಾಗೂ ಕುಡಿಯುವ ನೀರಿನ ಘಟಕ ಹಾಗೂ ಗಂಡಸರು ಮತ್ತು ಹೆಂಗಸರಿಗೆ ಒಂದೊಂದು ಪ್ರತ್ಯೇಕ ಶೌಚಾಲಯವನ್ನು ನೀಡಿ ಅಭಿವೃದ್ಧಿ ಕೆಲಸವನ್ನುಮಾಡಿದ್ದೇನೆ. ನಾನು ಮಾಡಿದ ಕೆಲಸಕ್ಕೆ ನಿಮ್ಮ ಬಳಿ ಕೂಲಿ ಕೇಳುತ್ತಿದ್ದೇನೆ. ನನ್ನ ಕೆಲಸವನ್ನು ನೋಡಿ ತಾವುಗಳು ಮತ ನೀಡಬೇಕೆಂದು ಕೇಳಿಕೊಂಡರು.

ರ್ಯಾಲಿಯನ್ನು ಎನ್.ಆರ್.ಕಾಲೋನಿ, ನಿರ್ವಾಣಿ ಲೇಔಟ್, ಆರ್.ವಿ.ಕಾಲೋನಿ, ಭಾಗ್ಯಮಂದಿರ, ಕೋತಿತೋಪು ಮುಖ್ಯರಸ್ತೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ನರಸೀಯಪ್ಪ, ಕೆಪಿಸಿಸಿ ಸದಸ್ಯರಾದ ಡಾ.ಸೋಮಶೇಖರ್, ಸ್ಲಂ ಜನಾಂದೋಲನದ ಎ.ನರಸಿಂಹಮೂರ್ತಿ, ಮಾಜಿ ಟೂಡಾ ಸದಸ್ಯ ಜಯಮೂರ್ತಿ, ಕುಮಾರ್ ಮಾದರ್, ಶಾವಾಜ್, ಲತಾ, ಯುವ ಮುಖಂಡರಾದ ಕಿರಣ್, ಕೆಂಪರಾಜ್ ದೊಡ್ಡಟ್ಟಿ, ದಾಸಮಂಜು, ಕಿಶೋರ್, ಹಾಗೂ 19 ಮತ್ತು 20ನೇ ವಾರ್ಡ್‍ನ ದಲಿತರು ಮತ್ತು ಅಲ್ಪಸಂಖ್ಯಾತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X