ಕಾಶ್ಮೀರ: ಭಯೋತ್ಪಾದಕ ದಾಳಿಯಲ್ಲಿ ಪೊಲೀಸ್ ಸಾವು

ಸಾಂದರ್ಭಿಕ ಚಿತ್ರ
ಶ್ರೀನಗರ, ಮೇ 11: ಜಮ್ಮು-ಕಾಶ್ಮೀರದ ಬುದ್ಗಾಂವ್ ಜಿಲ್ಲೆಯಲ್ಲಿರುವ ಕಾವಲು ನೆಲೆಯ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕೇಂದ್ರ ಕಾಶ್ಮೀರದ ವಾರ್ದ್ವಾನ್ ಎಂಬಲ್ಲಿಯ ಕಾವಲು ನೆಲೆಯ ಮೇಲೆ ಭಯೋತ್ಪಾದಕರು ನಡೆಸಿದ ಆಕ್ರಮಣವನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಲಾಗಿದೆ. ಆದರೆ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಶಮೀನ್ ಅಹ್ಮದ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಳಿಕ ಈ ಪ್ರದೇಶದಲ್ಲಿ ಪೊಲೀಸ್ ಕಾವಲು ಬಿಗಿಗೊಳಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Next Story





