ನೀತಿ ಸಂಹಿತೆ ಉಲ್ಲಂಘನೆ: 56.36 ಕೋಟಿ ರೂ. ನಗದು ವಶಕ್ಕೆ

ಬೆಂಗಳೂರು, ಮೇ 11: ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ 56.36 ಕೋಟಿ ರೂ. ನಗದು ಸೇರಿದಂತೆ ಅಪಾರ ಮೌಲ್ಯದ ಮದ್ಯ, ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶುಕ್ರವಾರ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್, ಕಳೆದ 24 ಗಂಟೆಗಳಲ್ಲಿ ಸಿಆರ್‌ಪಿಸಿ ಕಾಯ್ದೆಯಡಿ 204 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆದು, 200 ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಲಾಗಿದೆ ಎಂದರು.
ಶಸ್ತ್ರಾಸ್ತ್ರ: 9 ಪ್ರಕರಣಗಳನ್ನು ಸಿಆರ್‌ಪಿಸಿ ಕಾಯ್ದೆಯಡಿ ದಾಖಲು ಮಾಡಲಾಗಿದೆ. 803 ನಾಕಾಗಳನ್ನು ಕಾರ್ಯ ನಿರ್ವಹಿಸುವಂತೆ ಮಾಡಲಾಗಿದೆ. ಒಟ್ಟಾರೆ 71,574 ಶಸ್ತ್ರಾಸ್ರ್ತಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಈವರೆಗೆ ಒಟ್ಟು 97,043 ಶಸ್ತ್ರಾಸ್ತ್ರಗಳ ಪೈಕಿ 97,031 ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. 52 ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಒಟ್ಟು 6 ಶಸ್ತ್ರಾಸ್ತ್ರದ ಪರವಾನಿಗೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ನೀತಿ ಸಂಹಿತೆ ಜಾರಿಯಾದ ದಿನದಂದ ಈವರೆಗೆ ಸಿಆರ್‌ಪಿಸಿ ಕಾಯ್ದೆಯಡಿಯಲ್ಲಿ 18,096 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ ಅವರು, ಜನವರಿ 1ರಿಂದ ಈವರೆಗೆ ಒಟ್ಟು 49,574 ಪ್ರಕರಣಗಳನ್ನು ಸಿಆರ್‌ಪಿಸಿ ಕಾಯ್ದೆಯಡಿ ದಾಖಲಿಸಲಾಗಿದೆ. 24,831 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆಯಲಾಗಿದೆ. 40,005 ಪ್ರಕರಣ ಜಾಮೀನು ರಹಿತ ವಾರೆಂಟ್‌ಗಳನ್ನು ಚುನಾವಣೆ ಘೋಷಣೆಯಾದ ದಿನದಿಂದ ಈವರೆಗೆ ಹೊರಡಿಸಲಾಗಿದೆ ಎಂದು ಹೇಳಿದರು.





