ದ.ಕ. ಜಿಲ್ಲೆ: ಮತದಾನ ಪ್ರಕ್ರಿಯೆ ಆರಂಭ

ಮಂಗಳೂರು, ಮೇ 12: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮತದಾರರಿಂದ ಹಕ್ಕು ಚಲಾವಣೆ ಆರಂಭಗೊಂಡಿದೆ.
ನಿಧಾನಗತಿಯಲ್ಲಿ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತಗಟ್ಟೆಯಲ್ಲಿ ಮತ ಚಲಾಯಿಸುವುದನ್ನು ಆರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 1858 ಮತಗಟ್ಟೆಗಳಿಲ್ಲಿ ಇಂದು ಮತದಾನ ನಡೆಯುತ್ತಿದ್ದು, 13,176 ಸಿಬ್ಬಂದಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 517 ಕ್ಲಿಷ್ಟ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ 97 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್, 221 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರ ಕಣ್ಗಾವಲಿನೊಂದಿಗೆ ಮತದಾನ ನಡೆಯುತ್ತಿದೆ.
8 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ: ವಿಧಾನಸಭಾ ಕ್ಷೇತ್ರ ಮತದಾರರ ಸಂಖ್ಯೆ
Next Story