Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭಾ ಚುನಾವಣೆ: ಕೊಡಗು ಜಿಲ್ಲೆಯಲ್ಲಿ...

ವಿಧಾನಸಭಾ ಚುನಾವಣೆ: ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ವಾರ್ತಾಭಾರತಿವಾರ್ತಾಭಾರತಿ12 May 2018 10:41 PM IST
share
ವಿಧಾನಸಭಾ ಚುನಾವಣೆ: ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ಮಡಿಕೇರಿ,ಮೇ.12: ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನ ಆರಂಭವಾದರೆ, ಮತ್ತೆ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನದ ನಂತರ ಮತದಾನ ಚುರುಕುಗೊಂಡಿದೆ.  

ಕಡಗದಾಳು, ಮೂರ್ನಾಡು, ಚೆಟ್ಟಳ್ಳಿ, ವಿರಾಜಪೇಟೆ, ಪೊನ್ನಂಪೇಟೆ, ಶ್ರೀಮಂಗಲ, ಕುಟ್ಟ, ಕಾನೂರು, ಆರ್ಜಿ, ಅಮ್ಮತ್ತಿ-ಕಾರ್ಮಾಡು, ಸಿದ್ದಾಪುರ, ನೆಲ್ಯಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ, ಕುಶಾಲನಗರ, ಕೂಡಿಗೆ, ಗುಡ್ಡೆಹೊಸೂರು, ಸುಂಟಿಕೊಪ್ಪ, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತಿತರ ಕಡೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದ್ದು ಕಂಡುಬಂದಿತು.   

ಮತದಾನ ದಿನವಾದ ಶನಿವಾರ ಬೆಳಗಿನ ವೇಳೆಯಲ್ಲಿ ಮತದಾರರು ಉತ್ಸಾಹದಿಂದ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದು ಕಂಡುಬಂದಿತು. ಮತಗಟ್ಟೆಗಳಲ್ಲಿ ಪ್ರಜಾತಂತ್ರದ ಹಬ್ಬದ ಸಡಗರದಲ್ಲಿ ಮತದಾರರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.    

ವಿಶೇಷತೆ: ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ತಲಾ 05 ಮತಗಟ್ಟೆಗಳಲ್ಲಿ ಪಿಂಕ್/ಸಖಿ ಮತಗಟ್ಟೆಗಳಿಗೆ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ನಗರದ ಸಂತ ಮೈಕಲರ ಶಾಲೆ, ಸಹಕಾರ ಸಂಘಗಳ ನಿರ್ವಹಣಾ ಸಂಸ್ಥೆ, ಬ್ಲಾಸಂ ಇಂಗ್ಲೀಷ್ ಮಾಧ್ಯಮ ಶಾಲೆ, ಕಡದಗಾಳು ಸರ್ಕಾರಿ ಪ್ರೌಢಶಾಲೆ, ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿರಾಜಪೇಟೆಯ ಸುಂಕದಕಟ್ಟೆ ಸಮುದಾಯ ಭವನ, ತೆಲುಗರ ಬೀದಿ ಸಮುದಾಯ ಭವನ, ಸೆಂಟ್ ಆನ್ಸ್ ಪ್ರೌಢಶಾಲೆ, ಪಂಜರಪೇಟೆಯ ಉರ್ದು ಶಾಲೆ, ಹಾಗೆಯೇ ಬಿಟ್ಟಂಗಾಲದ ಗ್ರಾಮ ಪಂಚಾಯತ್ ಮತಗಟ್ಟೆಗಳಲ್ಲಿ ಸಖಿ ಮತಗಟ್ಟೆಗಳನ್ನು ಒಳಗೊಂಡಿತ್ತು. ಈ ಶಾಲೆಗಳಲ್ಲಿ ಪಿಂಕ್ ಬಣ್ಣದಲ್ಲಿ ಮತಗಟ್ಟೆ ಸ್ಥಾಪಿಸುವುದರ ಜೊತೆಗೆ, ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಿಂಕ್ ಬಣ್ಣದ ಸಮವಸ್ತ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು.   

ವಿಕಲಚೇತನರೇ ಮತಗಟ್ಟೆಗಲ್ಲಿ ಅಧಿಕಾರಿಗಳು: ವಿಕಲಚೇತನ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಇರುವ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ನಗರದ ತಾಲ್ಲೂಕು ಪಂಚಾಯತ್ ಕಚೇರಿ ಮತ್ತು ವಿರಾಜಪೇಟೆಯ ಜಯಪ್ರಕಾಶ್ ಬಾಲಕಿಯರ ಪ್ರೌಢಶಾಲೆ, ಈ ಮತಗಟ್ಟೆಗಳಲ್ಲಿ ವಿಕಲಚೇತನ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಗಮನ ಸೆಳೆದರು.  

ಕೊಡಗಿನ ಸಂಸ್ಕೃತಿ ಬಿಂಬಿಸಿದ ಮತಗಟ್ಟೆಗಳು: ಮಡಿಕೇರಿ ವಿಧಾನಸಭಾ ಕ್ಷೇತ್ರದ ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬೊಮ್ಮಾಡು ಸರ್ಕಾರಿ ಆಶ್ರಮ ಶಾಲೆ ಮತ್ತು ನಾಗರಹೊಳೆಯ ಸರ್ಕಾರಿ ಆಶ್ರಮ ಶಾಲೆಗಳಲ್ಲಿ ಕೊಡಗಿನ ಪಾರಂಪರಿಕ ಸಂಸ್ಕೃತಿ ಬಿಂಬಿಸುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಹಿಂದೆ ಊರುಗಳಲ್ಲಿ ಚಪ್ಪರ ಹಾಕಿ ಮದುವೆ ಮಾಡುತ್ತಿದ್ದ ಸಂಭ್ರಮದ ವಾತಾವರಣದ ದೃಶ್ಯಗಳು ಈ ಪಾರಂಪರಿಕ ಮತಗಟ್ಟೆಗಳಲ್ಲಿ ಕಂಡುಬಂದವು.

ಜೊತೆಗೆ ನಗರದ ನಗರಸಭೆಯಲ್ಲಿ ಸ್ಥಾಪಿಸಲಾಗಿದ್ದ ಮಾದರಿ ಮತಗಟ್ಟೆ ಆಕರ್ಷಣಿಯವಾಗಿತ್ತು. ಈ ಮತಗಟ್ಟೆಯಲ್ಲಿ ಹೊಸ ಮತದಾರರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯವೂ ನಡೆಯಿತು. ಮತದಾನ ಮಾಡಿದವರೇ ಶೂರರು ಎಂಬ ಸಂದೇಶವುಳ್ಳ ಕುರ್ಚಿಯಲ್ಲಿ ಕೂರಿಸಿ ಯುವ ಮತದಾರನ್ನು ಗೌರವಿಸಿದ್ದು ಗಮನ ಸೆಳೆಯಿತು. ನೂತನ ಮತದಾರರಿಗೆ ಪೇಟ, ಶಾಲು ಹೊದಿಸಿ ಮತದಾರರು ಮತದಾರರಲ್ಲಿ ಮತದಾನದ ಮಹತ್ವ ಬಗ್ಗೆ ತಿಳಿಸುವ ಕೆಲಸವು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವದಿಂದ ನಡೆದುದ್ದು ವಿಶೇಷವಾಗಿತ್ತು.    

ನಗರದ ಸಂತ ಮೈಕಲ ಶಾಲೆಯ ಪಿಂಕ್ ಮತಗಟ್ಟೆಗೆ 90 ವರ್ಷ ವಯಸ್ಸಿನ ವೃದ್ಧರು ತಮ್ಮ ಮೊಮ್ಮಕ್ಕಳ ಸಹಾಯದೊಂದಿಗೆ ಮತಗಟ್ಟೆಗೆ ಆಗಮಿಸಿ ಮತ ಹಕ್ಕು ಚಲಾಯಿಸಿದರು. ಕಡಗದಾಳು ಮತಗಟ್ಟೆಯಲ್ಲಿ ಮಹಿಳಾ ಮತ್ತು ಪುರುಷ ಮತದಾರರು ಉದ್ದುದ್ದ ಸಾಲಿನಲ್ಲಿ ನಿಂತು ಮತಹಕ್ಕು ಚಯಿಸಿದ್ದು ಕಂಡುಬಂದಿತು.

ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳ ಎಲ್ಲಾ ಭಾಗಗಳಲ್ಲಿ ಉತ್ತಮ ಮತದಾನವಾಗಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 4 ಗಂಟೆ ವೇಳೆಗೆ ಸುಮಾರು ಶೇ.65 ರಷ್ಟು ಮತದಾನವಾಗಿದೆ ಎಂದು ಮೂಲಗಳು ತಿಳಿಸಿವೆ. 

ಮತದಾನ ಮಾಡಿದ ಜಿಲ್ಲಾಧಿಕಾರಿ ಶ್ರೀವಿದ್ಯಾ
ನಗರದ ತಾಲೂಕು ಪಂಚಾಯತ್ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸರತಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಸ್ವೀಪ್ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಮಿಶ್ರ ಅವರು ನಗರದ ನಗರಸಭೆಯಲ್ಲಿ ನಿರ್ಮಾಣ ಮಾಡಲಾಗಿದ್ದ ಮಾದರಿ ಮತಗಟ್ಟೆಯಲ್ಲಿ ಯುವ ಮತದಾರನ್ನು ಸನ್ಮಾನಿಸಿ, ಗೌರವಿಸಿದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X