Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ 120 ಕ್ಕೂ ಹೆಚ್ಚು ಸ್ಥಾನ...

ಕಾಂಗ್ರೆಸ್ 120 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ12 May 2018 10:51 PM IST
share
ಕಾಂಗ್ರೆಸ್ 120 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ಡಾ.ಜಿ.ಪರಮೇಶ್ವರ್

ತುಮಕೂರು.ಮೇ.12: ಕರ್ನಾಟಕ ವಿಧಾನಸಭೆಗೆ ಇಂದು ನಡೆದ ಮತದಾನದಲ್ಲಿ ಕಾಂಗ್ರೆಸ್ ಪಕ್ಷ 120ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು, ಬೂತ್ ಮಟ್ಟದ ಅಧ್ಯಕ್ಷರುಗಳು ನೀಡಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲ್ಲಿದ್ದು, ಸ್ವಾತಂತ್ರವಾಗಿ ಸರಕಾರ ರಚನೆ ಮಾಡಲಿದೆ. ಅತಂತ್ರ ಸ್ಥಿತಿ ಈ ಬಾರಿ ನಿರ್ಮಾಣವಾಗಲ್ಲ ಎಂದು ಸ್ಪಷ್ಟ ಪಡಿಸಿದರು.

ಸ್ವಚ್ಚ ಆಡಳಿತ ಮತ್ತು ಸುಬಧ್ರ ಸರಕಾರ ಎಂಬ ಕಾಂಗ್ರೆಸ್ ಚುನಾವಣೆ ವಿಷಯಕ್ಕೆ ಮೆಚ್ಚಿ ಜನತೆ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ವಿಶ್ವಾಸ ಇದೆ. ರಾಜ್ಯದಲ್ಲಿ ಶಾಂತಿಯುತ ಚುನಾವಣೆಗೆ ಸಹಕರಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು, ಇನ್ನೊಬ್ಬರನ್ನು ಟೀಕಿಸದೆ, ಕಳೆದ ಐದು ವರ್ಷಗಳ ಆಡಳಿತವನ್ನು ಮುಂದಿಟ್ಟು ಕೊಂಡು, ಕಾಂಗ್ರೆಸ್ ಸರಕಾರ ಜಾರಿಗೆ ತಂದ ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಜನರ ಬಳಿ ಮತ ಕೇಳಿದ್ದೇವೆ. ಜನರು ತಮ್ಮ ಮನವಿಯನ್ನು ಪುರಸ್ಕರಿಸಿದ್ದಾರೆ ಎಂಬ ನಂಬಿಕೆಯಿದೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.

ಮುಂಬರುವ 2019ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದ ಇಂದಿನ ವಿಧಾನಸಭಾ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ನಮ್ಮ ಕಾಂಗ್ರೆಸ್ ಸರಕಾರದ ಬಗ್ಗೆ ಮಾಡುತ್ತಿರುವ ಇಲ್ಲ ಸಲ್ಲದ, ಆಧಾರರಹಿತ ಅಪಪ್ರಚಾರಗಳಿಗೆ ಜನರು ಕಿವಿಗೊಟ್ಟಿಲ್ಲ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರ ವಿರುದ್ದ ನಡೆಸಿದ ಅಪಪ್ರಚಾರ, ವೈಯುಕ್ತಿಕ ದಾಳಿಗಳನ್ನು ಗಮನಿಸಿದ್ದು, ಜನರ ಮುಂದೆ ಸತ್ಯ ಹೇಳಲು ತಯಾರಿಲ್ಲದ ಮೋದಿ ಮತ್ತು ಅಮಿತ್ ಶಾ ಅವರ ಮಾತುಗಳಿಗೆ ರಾಜ್ಯದ ಜನತೆ ಬೆಲೆ ನೀಡಿಲ್ಲ. 1977-78ರಲ್ಲಿ ಹೇಗೆ ಕರ್ನಾಟಕದಿಂದ ಕಾಂಗ್ರೆಸ್ ಪುನಶ್ಚೇತನ ಪಡೆಯಿತೋ, ಅದೇ ರೀತಿ ಈ ಬಾರಿಯೂ ಕರ್ನಾಟಕದಿಂದ ಕಾಂಗ್ರೆಸ್ ಮತ್ತೆ ದೇಶದಲ್ಲಿ ಅಧಿಕಾರವನ್ನು ಹಿಡಿಯಲಿದೆ ಎಂದರು.

ಬಿಜೆಪಿ ಮಾಡಿರುವ ಆರೋಪದಲ್ಲಿ ಕಾಂಗ್ರೆಸ್ ಹೂಡಿಕೆಯಲ್ಲಿ ಹಿಂದಿದೆ ಎಂದು ಹೇಳಿತ್ತು. ಆದರೆ ಕೇಂದ್ರ ಸರಕಾರದ 30 ವಿವಿಧ ಇಲಾಖೆಗಳು ನೀಡಿರುವ ಅಂಕಿ ಅಂಶಗಳಲ್ಲಿ ಕರ್ನಾಟಕ ನಂ 1 ಸ್ಥಾನದಲ್ಲಿದೆ. ಇದಕ್ಕಾಗಿ ಪ್ರಶಸ್ತಿಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ. 2013ಕ್ಕೂ ಮುನ್ನ ಪ್ರಗತಿಯಲ್ಲಿ 13ನೇ  ಸ್ಥಾನದಲ್ಲಿದ್ದ ರಾಜ್ಯ ಇಂದು ಮೊದಲ ಸ್ಥಾನದಲ್ಲಿದೆ. ಇವರಿಗೆ ಮತ್ತೆ ಅಧಿಕಾರ ನೀಡಿದರೆ, ಇನ್ನಷ್ಟು ಪ್ರಗತಿ ಸಾಧಿಸಲಿದ್ದಾರೆ ಎಂಬ ವಿಶ್ವಾಸದಿಂದ ಜನರು ಕಾಂಗ್ರೆಸ್‍ಗೆ ಮತ ನೀಡಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಕೆ.ಪಿ.ಸಿ.ಸಿ ಅಧ್ಯಕ್ಷರು, ಉದ್ಯೋಗ ನೀಡುವಲ್ಲಿಯೂ ರಾಜ್ಯ ಸರಕಾರ ಹಿಂದೆ ಬಿದ್ದಿಲ್ಲ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ನಾನೇ ಎಂದು ಹೇಳುವುದರಲ್ಲಿ ತಪ್ಪೇನು?: ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಸುಭದ್ರ ಆಡಳಿತ ನೀಡಿ, ರಾಜ್ಯವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗಿರುವ ಮುಖ್ಯಮಂತ್ರಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದೇವೆ. ಹಾಗಾಗಿ ಸಹಜವಾಗಿ ತಾವೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ ಅವರು, ಸಿಎಲ್‍ಪಿ ಸಭೆ ನಂತರ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ಅರ್ಧ ಡಜನ್‍ಗೂ ಹೆಚ್ಚು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಲಿತ ಸಿ.ಎಂ.ಜನತೆಯ ಕೂಗು. ಈ ಬಗ್ಗೆ ಪಕ್ಷದ ಹೈಕಮಾಂಡ್‍ಗೆ ಗೊತ್ತಿದೆ. ಅವರು ಸೂಕ್ತ ಕಾಲದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರ ಬದ್ದವಿದೆ. ನಾನೇ ಖುದ್ದಾಗಿ ಈ ಬಗ್ಗೆ ಸರಕಾರದ ಮೇಲೆ ಒತ್ತಡ ತರಲಿದ್ದೇನೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಡಾ.ಜಿ.ಪರಮೇಶ್ವರ ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರೊ.ರಾಧಾಕೃಷ್ಣ, ಎಂ.ಎಲ್.ಸಿ ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ, ಜಿ.ಪಂ.ಸದಸ್ಯ ನಾರಾಯಣಮೂರ್ತಿ, ಮುರುಳೀಧರ ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X