Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 1858 ಮತಗಟ್ಟೆಗಳಲ್ಲಿ...

ದ.ಕ. ಜಿಲ್ಲೆಯಲ್ಲಿ 1858 ಮತಗಟ್ಟೆಗಳಲ್ಲಿ ಮತದಾನ

18 ಸುತ್ತಿನಲ್ಲಿ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ13 May 2018 10:13 PM IST
share

ಮಂಗಳೂರು, ಮೇ 13: ದ.ಕ. ಜಿಲ್ಲೆಯಲ್ಲಿ 1858 ಮತಗಟ್ಟೆಗಳಲ್ಲಿ ನಡೆದಿರುವ ಮತದಾನದ ಎಣಿಕೆ ಕಾರ್ಯವು 18 ಸುತ್ತಿನಲ್ಲಿ ನಡೆಯಲಿದೆ. ಮತ ಎಣಿಕೆಯ ಕೊಠಡಿಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸೆಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

380 ಸೇವಾಮತದಾರರಿಗೆ ಅಂಚೆ ಮತಪತ್ರವನ್ನು ಇಟಿಪಿಬಿಎಸ್ ಮೂಲಕ ಕಳುಹಿಸಲಾಗಿದೆ. 11,401 ಕರ್ತವ್ಯ ನಿರತ ಸಿಬ್ಬಂದಿಗೆ ಅಂಚೆ ಮೂಲಕ ಮತಪತ್ರಗಳನ್ನು ನೀಡಲಾಗಿದೆ. ಮೇ 15ರಂದು ಪೂರ್ವಾಹ್ನ 8 ಗಂಟೆಯವರೆಗೆ ಸ್ವೀಕೃತವಾದ ಎಲ್ಲಾ ಅಂಚೆ ಮತಪತ್ರಗಳನ್ನು ಎಣಿಕೆಗೆ ಒಳಪಡಿಸಲಾಗುವುದು.

ಅಂದು ಪೂರ್ವಾಹ್ನ 8 ಗಂಟೆಯಿಂದ ಇಟಿಪಿಬಿಎಸ್ ಮತ್ತು ಅಂಚೆಯ ಮೂಲಕ ಸ್ವೀಕೃತ ಮತಗಳ ಎಣಿಕೆಯು ಚುನಾವಣಾಧಿಕಾರಿಯವರ ಮೇಜಿನಲ್ಲಿ ನಡೆಸಲಾಗುವುದು. ಸದ್ರಿ ಪ್ರಕ್ರಿಯೆ ಪ್ರಾರಂಭವಾದ 30 ನಿಮಿಷಗಳ ನಂತರ ಮತಗಟ್ಟೆಗಳಲ್ಲಿ ಇವಿಎಂನಲ್ಲಿ ದಾಖಲಾದ ಮತಗಳ ಎಣಿಕೆಯನ್ನು ಪ್ರಾರಂಭಿಸಲಾಗುವುದು. ಮತ ಎಣಿಕೆ ಟೇಬಲ್‌ಗೆ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕ ಸಿಬ್ಬಂದಿ ಮತ್ತು ಮೈಕ್ರೊ ವೀಕ್ಷರನ್ನು ನೇಮಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮತಗಳ ಎಣಿಕೆ ನಡೆಸುವ ಬಗ್ಗೆ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆ 18ರಲ್ಲಿ 14 ಮತ ಎಣಿಕೆ ಮೇಜಿಗೆ ಮತ್ತು 1 ಚುನಾಣಾಧಿಕಾರಿ ಮೇಜಿಗೆ ಒಟ್ಟು 15 ಮತ ಎಣಿಕೆ ಏಜೆಂಟರನ್ನು ನೇಮಕ ಮಾಡಬಹುದಾಗಿದೆ.

ನಿಷೇಧಾಜ್ಞೆ

ಮತ ಎಣಿಕೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಹಾಗೂ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯ ಕಾಪಾಡುವ ದೃಷ್ಟಿಯಿಂದ ಮೇ 14 ರಾತ್ರಿ 12 ಗಂಟೆಯಿಂದ ಮೇ 16ರ ರಾತ್ರಿ 8 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಗುಂಪು ಸೇರುವುದನ್ನು, ವಿಜಯೋತ್ಸವ ಮಾಡುವುದನ್ನು, ಮೆರಣಿಗೆ ನಡೆಸುವುದನ್ನು ನಿಷೇಧಿಸುವ ಸಲುವಾಗಿ ಕಲಂ 144ರನ್ವಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮದ್ಯಪಾನ ಮಾರಾಟ ನಿಷೇಧ

ಮೇ 14ರ ಸಂಜೆ 6 ಗಂಟೆಯಿಂದ ಮೇ 15ರ ರಾತ್ರಿ 12 ಗಂಟೆಯವರೆಗೆ ಮದ್ಯಪಾನ ಮಾರಾಟವನ್ನು ನಿಷೇಧಿಸಲಾಗಿದೆ. ಸದ್ರಿ ಆದೇಶವನ್ನು ಉಲ್ಲಂಘಿಸಿದಲ್ಲಿ 6 ತಿಂಗಳ ಸೆರೆವಾಸ, 2,000 ರೂ. ದಂಡ ಅಥವಾ ಅವೆರಡು ಒಳಗೊಂಡಂತೆ ಶಿಕ್ಷೆಗೆ ಒಳಪಡಿಸಲಾಗುವುದು.

ಚುನಾವಣಾ ವೀಕ್ಷಕರ ನೇಮಕ

ಮತ ಎಣಿಕೆ ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಚುನಾವಣಾ ವೀಕ್ಷಕರನ್ನು ನೇಮಿಸಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಬೆನುಧಾರ್ ಬೆಹೆರ (ಮೊ. 8277807200), ಮುಡಬಿದ್ರೆ ಕ್ಷೇತ್ರ: ಪುನೀತ್ ಯಾದವ್ (8277807201), ಮಂಗಳೂರು ಉತ್ತರ: ಜೂಯಿಟ್ ಸಿಂಗ್ (09431435881), ಮಂಗಳೂರು ದಕ್ಷಿಣ: ಉಪೇಂದ್ರನಾಥ್ ಶರ್ಮಾ (8277807203), ಮಂಗಳೂರು: ಅರವಿಂದ ಕುಮಾರ್ (09431277900), ಬಂಟ್ವಾಳ: ವಿಕಾಸ್ ಯಾದವ್ ((8277807205), ಪುತ್ತೂರು: ಜಗದೀಶ್ ಪ್ರಸಾದ್ (8277807206), ಸುಳ್ಯ: ನರೈನ್‌ಲಾಲ್‌ಮೀನಾ (8277807207)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X