ಕರ್ನಾಟಕ ಫ್ರೌಡಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸೆಸೆಲ್ಸಿ ಸಹಾಯವಾಣಿ ಆರಂಭ
ಬೆಂಗಳೂರು, ಮೇ 14: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶದ ನಂತರ ವಿದ್ಯಾರ್ಥಿಗಳು ಹಾಗೂ ಪೋಷಕರ ಸಂದೇಹವನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಫ್ರೌಡಶಿಕ್ಷಣ ಪರೀಕ್ಷಾ ಮಂಡಳಿ ‘ಸಹಾಯವಾಣಿ ಕೇಂದ್ರ ಆರಂಭಿಸಿದ್ದು, ಮೇ 21ರ ವರೆಗೆ ಕಾರ್ಯ ನಿರ್ವಹಿಸಲಿದೆ.
ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಮುಖ್ಯೋಪಧ್ಯಾಯರು ಸಹಾಯವಾಣಿ ಮೂಲಕ ತಮ್ಮ ಗೊಂದಲಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ಗಂಟೆಯ ವರೆಗೆ ಸಹಾಯವಾಣಿ ಕಾರ್ಯನಿರ್ವಹಿಸುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ದೂರವಾಣಿ ಸಂಖ್ಯೆ: 080 23310075/ 080 23310075 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





