ಸುಬ್ರಹ್ಮಣ್ಯ: ರಸ್ತೆ ಅಪಘಾತ; ಐದು ಮಂದಿಗೆ ಗಂಭೀರ ಗಾಯ

ಕಡಬ, ಮೇ14: ತೂಫಾನ್ ಹಾಗೂ ಇಂಡಿಕಾ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡು, ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಸೋಮವಾರ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅಲೇರಿ ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ತೂಫಾನ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಇಂಡಿಕಾ ನಡುವೆ ಅಲೇರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





