Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣಾ ವ್ಯವಸ್ಥೆಯ ಲೋಪಗಳ ಬಗ್ಗೆ...

ಚುನಾವಣಾ ವ್ಯವಸ್ಥೆಯ ಲೋಪಗಳ ಬಗ್ಗೆ ಆಯೋಗಕ್ಕೆ ಪತ್ರ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ14 May 2018 4:37 PM IST
share
ಚುನಾವಣಾ ವ್ಯವಸ್ಥೆಯ ಲೋಪಗಳ ಬಗ್ಗೆ ಆಯೋಗಕ್ಕೆ ಪತ್ರ: ಯು.ಟಿ.ಖಾದರ್

ಮಂಗಳೂರು, ಮೇ 14: ಚುನಾವಣಾ ವ್ಯವಸ್ಥೆಯು ಮತ್ತಷ್ಟು ಪಾರದರ್ಶಕವಾಗಿ ರೂಪುಗೊಳ್ಳುವುದು ಅಗತ್ಯವಿದ್ದು, ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಕೆಲವೊಂದು ಲೋಪಗಳು ಇರುವ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಕಪ್ಪು ಬಿಳುಪಿನ ವೋಟರ್ ಸ್ಲಿಪ್ ಆಧರಿಸಿ, ಆಯೋಗದ ಗುರುತಿನ ಚೀಟಿ ಆಥವಾ ಇತರ ಯಾವುದೇ ಗುರುತಿನ ಚೀಟಿ ಇಲ್ಲದೆ ಮತ ಚಲಾವಣೆಗೆ ಅವಕಾಶ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ವೋಟರ್ ಸ್ಲಿಪ್ ಇರುವ ಮಾಸಿದ ಕಪ್ಪು ಬಿಳುಪು ಫೋಟೊ ನೋಡಿ ಬಂದಿರುವ ವ್ಯಕ್ತಿ ನೈಜ ಮತದಾರನೇ ಎಂದು ನಿರ್ಧರಿಸುವುದು ಕಷ್ಟ. ಅಲ್ಲದೆ ವೋಟರ್ ಸ್ಲಿಪ್‌ನಲ್ಲಿ ಮನೆ ನಂಬರ್ ಕೂಡ ಇರುವುದಿಲ್ಲ. ಈ ವ್ಯವಸ್ಥೆ ನಕಲಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡುವ ಸಾಧ್ಯತೆ ಅಧಿಕ ಎಂದವರು ಅನಿಸಿಕೆ ವ್ಯಕ್ತ ಪಡಿಸಿದರು.

ವೋಟರ್ ಸ್ಲಿಪ್‌ಗಳನ್ನು ಪ್ರತೀ ಮನೆಗೆ ತಲುಪಿಸುವಲ್ಲಿ ಕೂಡ ಆಯೋಗ ವಿಫಲವಾಗಿದೆ. ಬಿಎಲ್‌ಒ ಗಳಿಗೆ ವೋಟರ್ ಸ್ಲಿಪ್ ಪ್ರತೀ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಲಾಗಿದೆ. ಅನೇಕ ಕಡೆ ಈ ಬಿಎಲ್‌ಒ ಗಳು ವೋಟರ್ ಸ್ಲಿಪ್ ಸ್ವತಃ ಮತದಾರನ ಮನೆಗಳಿಗೆ ತಲುಪಿಸದೆ ಈ ಜವಾಬ್ದಾರಿಯನ್ನು ಯೋವುದೋ ಒಂದು ಪಕ್ಷಕ್ಕೆ ಸೇರಿದ ಮುಖಂಡರಿಗೆ ವರ್ಗಾಯಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ ವೋಟರ್‌ ಸ್ಲಿಪ್ ದುರುಪಯೋಗ ಸಾಧ್ಯತೆ ಹೆಚ್ಚು. ಮುಂದಿನ ಆಯೋಗ ಭರವಸೆ ನೀಡಿದಂತೆ ಆವಶ್ಯ ಉಳ್ಳವರಿಗೆ ಗಾಲಿ ಕುರ್ಚಿ ಕೂಡ ದೊರೆತ್ತಿಲ್ಲ. ಲೋಕಸಭಾ ಚುನಾವಣೆ ಮೊದಲು ಈ ವ್ಯವಸ್ಥೆ ಸರಿಪಡಿಸುವುದು ಅಗತ್ಯ ಎಂದವರು ಹೇಳಿದರು.

ಚುನಾವಣಾ ಆಯೋಗ ಈ ಬಾರಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದೆ ಎನ್ನುವುದನ್ನು ಕೂಡ ಮರೆಯುವಂತಿಲ್ಲ. ಕೊನೆಯ ಹಂತದ ತನಕ ಕೂಡ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಒದಗಿಸಲಾಗಿತ್ತು ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಖ್ಯಮಂತ್ರಿ ಸ್ಥಾನ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಚಿವ ಯು.ಟಿ.ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸಹಿತ ರಾಜ್ಯದ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಇದ್ದಾರೆ. ಕಳೆದ ಅವಧಿ ಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಸಿದ್ದರಾಮಯ್ಯನವರು ಯಶಸ್ವಿಯಾಗಿ ಅಧಿಕಾರ ಪೂರ್ಣಾವಧಿ ನಡೆಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಳ್ಳಲಿದೆ. ಹಾಗೆ ನೋಡಿದರೆ ನನ್ನ ಕ್ಷೇತ್ರವೇ ಕಷ್ಟ ಇರಬಹುದು ಎಂದು ಅಭಿಪ್ರಾಯಪಟ್ಟರು. ಅಶ್ರಫ್ ಸ್ಪರ್ಧೆಯಿಂದ ಸಮಸ್ಯೆಯಾಯಿತೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎದುರಾಳಿ ಯಾರು ಎನ್ನುವುದು ನಮಗೆ ಮುಖ್ಯವೇ ಅಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X