Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯೋತ್ಸವ ಆಯೋಜನೆಗೆ ಪರವಾನಿಗೆ...

ವಿಜಯೋತ್ಸವ ಆಯೋಜನೆಗೆ ಪರವಾನಿಗೆ ಅತ್ಯಗತ್ಯ: ಎಸ್ಪಿ ಅಣ್ಣಾಮಲೈ

ವಾರ್ತಾಭಾರತಿವಾರ್ತಾಭಾರತಿ14 May 2018 5:04 PM IST
share
ವಿಜಯೋತ್ಸವ ಆಯೋಜನೆಗೆ ಪರವಾನಿಗೆ ಅತ್ಯಗತ್ಯ: ಎಸ್ಪಿ ಅಣ್ಣಾಮಲೈ

ಚಿಕ್ಕಮಗಳೂರು, ಮೇ 14: ಈ ಬಾರಿ ಮೇ 12ರಂದು ನಡೆದ ಮತದಾನದ ವೇಳೆ ಜಿಲ್ಲೆಯಾದ್ಯಂತ ಒಂದೇ ಒಂದು ಎಫ್‍ಐರ್ ದಾಖಲಾಗಿಲ್ಲ. 2013ರ ಚುನಾವಣೆ ವೇಳೆ ಜಿಲ್ಲೆಯಾದ್ಯಂತ 8 ಪ್ರಕರಣಗಳು ದಾಖಲಾಗಿದ್ದವು. ಇದಕ್ಕೆ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸಿದ್ದ ಪೊಲೀಸ್, ಅರೆಸೇನಾ ಪಡೆಗಳ ಸಿಬ್ಬಂದಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದೆ ಕಾರಣ. ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. ಈ ಭಾಗದ ಹಂಚಿನಕುಡಿಗೆ ಮತಗಟ್ಟೆಯಲ್ಲಿ ಶೇ.97 ಮತದಾನವಾಗಿದ್ದು, ಇದು ಈ ಭಾಗದ ಜನತೆ ನಕ್ಸಲ್ ಚಳವಳಿಯಿಂದ ವಿಮುಖರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಹೊಂದುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಚಿಕ್ಕಮಗಳೂರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಮಲೈ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 12 ಚುನಾವಣೆ ಶಾಂತಿಯುತವಾಗಿ ನಡೆಯಲು ಜಿಲ್ಲಾಧಿಕಾರಿ, ಎಸಿ, ಸಿಇಒ ಹಾಗೂ ಜಿಲ್ಲೆಯ ಜನತೆ ಉತ್ತಮ ಸಹಕಾರ ನೀಡಿದ್ದಾರೆಂದು ಶ್ಲಾಘಿಸಿದ ಅವರು, ಮೇ 15ರಂದು ಮಂಗಳವಾರ ನಡೆಯಲಿರುವ ಮತ ಎಣಿಕೆ ಕಾರ್ಯ ನಿಮಿತ್ತ ನಗರದ ಎಸ್‍ಟಿಜೆ ಕಾಲೇಜಿನಲ್ಲಿ ಅಗತ್ಯ ಭದ್ರತೆಯನ್ನು ಕಲ್ಪಿಸಲಾಗಿದೆ. ಭದ್ರತೆಗಾಗಿ ಸ್ಥಳೀಯ ಪೊಲೀಸರನ್ನು ಹೆಚ್ಚು ಬಳಸಿಕೊಳ್ಳಲಾಗುತ್ತಿದೆ. ಮತ ಎಣಿಕೆ ಕೇಂದ್ರದ ಬಳಿ 550 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಮತ ಎಣಿಕೆ ಬಳಿಕೆ ನಗರದದಲ್ಲಿ ವಿಜೇತ ಅಭ್ಯರ್ಥಿಗಳ ಪರವಾಗಿ ವಿಜಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ಪೊಲೀಸ್ ಇಲಾಖೆಯಿಂದ ಪರವಾನಿಗೆ ಪಡೆಯುವುದು ಅಗತ್ಯ. ತಾಲೂಕು ಕೇಂದ್ರಗಳಲ್ಲೂ ವಿಜೇತ ಅಭ್ಯರ್ಥಿಗಳ ಪರ ಮೆರವಣಿಗೆ ನಡೆಸಲು ಪರವಾನಿಗೆ ಅತ್ಯಗತ್ಯ. ಈ ಬಗ್ಗೆ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ವಿಜಯೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಅಗತ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದ ಅವರು, ಮಂಗಳವಾರ ಮತ ಎಣಿಕೆ ಹಿನ್ನೆಯಲ್ಲಿ ಜಿಲ್ಲಾದ್ಯಂತ ಸುಮಾರು 1200-1300 ಭದ್ರತಾ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆಂದು ಎಸ್ಪಿ ಮಾಹಿತಿ ನೀಡಿದರು.

ಕೇಂದ್ರ ಸರಕಾರ ನಕ್ಸಲ್ ಪೀಡಿತ ಪ್ರದೇಶಗಳಿಗೆ ದೇಶದ ವಿವಿಧೆಡೆ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ನೀಡಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ವಿಶೇಷ ಪೊಲೀಸ್ ಠಾಣೆಗಳನ್ನು ನೀಡಿಲ್ಲ. ಈ ಹಿಂದೆ ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನಕ್ಸಲರು ಚಳವಳಿ ಆರಂಭಿಸಿದ್ದರು. ಇದು ಪ್ರಸಕ್ತ ಹಂತಹಂತವಾಗಿ ಕ್ಷೀಣಗೊಂಡಿದ್ದು, ನಕ್ಸಲರ ಪ್ರಭಾವದಿಂದ ಜಿಲ್ಲೆ ಮುಕ್ತವಾಗಿದೆ. ಕಳೆದ 15 ವರ್ಷಗಳಲ್ಲಿ ಜಿಲ್ಲೆಯ ಯುವಕ ಯುವತಿಯರು ನಕ್ಸಲ್ ಗುಂಪಿಗೆ ಸೇರಿರುವ ಬಗ್ಗೆ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ. ಆದರೂ ಈ ಹಿಂದೆ ಜಿಲ್ಲೆಯಲ್ಲಿದ್ದ ನಕ್ಸಲ್ ಚಳವಳಿಯ ಪ್ರಭಾವ ಸಂಪೂರ್ಣವಾಗಿ ಹೋಗುವವರೆಗೂ ನಕ್ಸಲ್ ಪೀಡಿತ ಪ್ರದೇಶಗಳು ಎಂದು ಕರೆಯುವುದು ಅನಿವಾರ್ಯವಾಗಲಿದೆ ಎಂದು ಎಸ್ಪಿ ಅಣ್ಣಾಮಲೈ ನಕ್ಸಲ್ ಪೀಡಿತ ಪ್ರದೇಶಗಳು ಎಂಬ ಹೆಸರಿನಿಂದ ಈ ಭಾಗಗಳನ್ನು ಕರೆಯುವಂತಿಲ್ಲ ಎಂದು ರಾಜ್ಯ ಸರಕಾರ ಘೋಷಿಸಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X