Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ಮುಂದುವರಿದ ವರುಣನ ಆರ್ಭಟ

ರಾಜ್ಯಾದ್ಯಂತ ಮುಂದುವರಿದ ವರುಣನ ಆರ್ಭಟ

ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟ

ವಾರ್ತಾಭಾರತಿವಾರ್ತಾಭಾರತಿ14 May 2018 6:57 PM IST
share
ರಾಜ್ಯಾದ್ಯಂತ ಮುಂದುವರಿದ ವರುಣನ ಆರ್ಭಟ

ಬೆಂಗಳೂರು, ಮೇ 14: ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರೆದಿದ್ದು, ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿಗಳು ಭಾರೀ ನಷ್ಟವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೊಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರೂ, ವಾಯವ್ಯ ಅಭಿಮುಖವಾಗಿ ಚಲಿಸುತ್ತಿರುವುದರಿಂದ ಅದರ ಪ್ರಮಾಣ ಕಡಿಮೆ. ಆದರೆ ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ಮೋಡಗಳ ಸಾಲು ಹೆಚ್ಚಾಗಿರುವುದರಿಂದ ಮೇ 19 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಭಾಗದಲ್ಲಿ ಒಂದಲ್ಲ ಒಂದು ಸ್ಥಳಗಳಲ್ಲಿ ಮಳೆ ಮುಂದುವರಿಯಲಿದೆ. ಮೇ ತಿಂಗಳಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ಸಹಜ. ಆದರೆ, ಈ ಬಾರಿ ಕೆಲವು ಸ್ಥಳಗಳಲ್ಲಿ ಮಳೆಯಾಗುತ್ತಿದೆ. ಈಗಿನ ಹವಾಮಾನ ಮುನ್ಸೂಚನೆ ಪ್ರಕಾರ ನೈರುತ್ಯ ಮುಂಗಾರು ಈ ತಿಂಗಳ ಅಂತ್ಯಕ್ಕೆ ಪ್ರಾರಂಭವಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹೇಳಿದೆ.

ಕಳೆದ ಮೂರು ದಿನಗಳಿಂದ ವಿವಿಧೆಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಕಳೆದ ರಾತ್ರಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಸುರಿದ ಭಾರೀ ಬಿರುಗಾಳಿ ಮಳೆಗೆ 17ಕ್ಕೂ ಅಧಿಕ ಮನೆಗಳ ಹೆಂಚು, ಶೀಟ್‌ಗಳು ಹಾರಿ ಹೋಗಿವೆ. ರಾತ್ರಿ 11.30ರ ಸಮಯದಲ್ಲಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಹೆಂಚು, ಶೀಟ್‌ಗಳು ಪುಡಿಪುಡಿಯಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಕೆಲವೆಡೆ ಗಾಳಿಗೆ ಅಡಕೆ, ತೆಂಗಿನ ಮರಗಳು ಧರೆಗೆ ಉರುಳಿವೆ. ಲಕ್ಷಾಂತರ ರೂ. ಬೆಳೆಗಳು ನಷ್ಟವಾಗಿದ್ದು, ಒಟ್ಟಾರೆ ಅಕಾಲಿಕ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಉದ್ಯಾನನಗರಿ ಬೆಂಗಳೂರಿನಲ್ಲಿ ಮಳೆ ಸುರಿದಿದ್ದು, ಅಂಡರ್‌ಪಾಸ್‌ಗಳು, ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸವಾರರು ಸಂಚಾರ ಮಾಡಲು ಪರದಾಡುವಂತಾಗಿತ್ತು.

ಹಾಸನದಲ್ಲಿ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಪಾತಪಾಳ್ಯದ ಬಳಿ ಮರವೊಂದು ಹಸುವಿನ ಮೇಲೆ ಉರುಳಿ ಬಿದ್ದ ಪರಿಣಾಮ ಹಸು ಸಾವನ್ನಪ್ಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆ ಸದ್ದು ಮಾಡಿದ್ದು, ಅಪಾರ ಬೆಳೆ ನಷ್ಟವಾಗಿದೆ. ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಹಾಸನ, ಮಂಡ್ಯ, ಕೋಲಾರ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಿದೆ.

ರಾಜ್ಯಾದ್ಯಂತ ಬಿಸಿಲಿನ ಝಳದಿಂದ ನಲುಗಿಹೋಗಿದ್ದ ಜನರಿಗೆ ಮಳೆ ತಂಪೆರೆದರೆ, ಮತ್ತೊಂದು ಕಡೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಾಶ ಮಾಡಿದೆ. ಅಲ್ಲದೆ, ಹಲವರ ಪ್ರಾಣಾಪಾಯಕ್ಕೆ ಅಪಾಯ ತಂದೊಡ್ಡಿದೆ. ಮತ್ತೊಂದು ಕಡೆ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿಗೆ ನಷ್ಟವಾದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X