Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ವಿಧಾನಸಭಾ ಚುನಾವಣೆ: ನಾಳೆ ಮತ...

ರಾಜ್ಯ ವಿಧಾನಸಭಾ ಚುನಾವಣೆ: ನಾಳೆ ಮತ ಎಣಿಕೆ

ಮಧ್ಯಾಹ್ನ ವೇಳೆ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ14 May 2018 9:01 PM IST
share
ರಾಜ್ಯ ವಿಧಾನಸಭಾ ಚುನಾವಣೆ: ನಾಳೆ ಮತ ಎಣಿಕೆ

ಬೆಂಗಳೂರು, ಮೇ 14: ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿಯೆಂದೇ ವಿಶ್ಲೇಷಿಸಲಾಗುತ್ತಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕಾಗಿ ದೇಶ ಹಾಗೂ ರಾಜ್ಯದ ಜನತೆ ಕಾತರದಿಂದ ಎದುರು ನೋಡುತ್ತಿದ್ದು, ನಾಳೆ(ಮೇ 15) ಬೆಳಗ್ಗೆ 8ಗಂಟೆಯಿಂದ ಮತ ಏಣಿಕೆ ಕಾರ್ಯ ಆರಂಭಗೊಳ್ಳಲಿದೆ. 

ರಾಜಧಾನಿ ಬೆಂಗಳೂರಿನ 26, ಬೆಳಗಾವಿಯ 18 ಕ್ಷೇತ್ರಗಳು ಸೇರಿದಂತೆ ರಾಜ್ಯದ 222 ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆದಿತ್ತು. ಮಧ್ಯಾಹ್ನದ ವೇಳೆ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿದ್ದು, ರಾಜ್ಯದ ಅಧಿಕಾರದ ಗದ್ದುಗೆಯನ್ನು ಯಾರು ಏರಲಿದ್ದಾರೆಂಬುದು ಊಹಾಪೋಹಗಳಿಗೆ ತೆರೆಬೀಳಲಿದೆ.
ಈಗಾಗಲೇ ಚುನಾವಣಾ ಆಯೋಗ ರಾಜ್ಯಾದ್ಯಂತ ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ಆಯೋಗ ಮಾಡಿಕೊಂಡಿದೆ. ಬಿಗಿ ಭದ್ರತೆಯಲ್ಲಿ ಮತ ಯಂತ್ರಗಳಿಗೆ ಅಳವಡಿಸಿರುವ ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್‌ಗಳನ್ನು ಮತ ಎಣಿಕೆ ಕೇಂದ್ರಕ್ಕೆ ನಾಳೆ ಬೆಳಗ್ಗೆ ತರಲಾಗುವುದು ಎಂದು ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

222 ಕ್ಷೇತ್ರಗಳ ಮತ ಎಣಿಕೆಗಾಗಿ ರಾಜ್ಯಾದ್ಯಂತ 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 5 ಕಡೆ, ತುಮಕೂರಿನಲ್ಲಿ 3 ಕಡೆ ಹಾಗೂ ಚಿತ್ರದುರ್ಗ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ತಲಾ 2 ಕಡೆಗಳಲ್ಲಿ ಹಾಗೂ ಇನ್ನುಳಿದ ಜಿಲ್ಲೆಗಳಲ್ಲಿ ತಲಾ ಒಂದೊಂದು ಕಡೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.

ಮತ ಎಣಿಕೆ ನಡೆಯುವ ದಿನದಂದು ಸುಗಮವಾಗಿ ಮತ ಎಣಿಕೆ ನಡೆಯಲು ಅನುವು ಮಾಡಿಕೊಡುವ ದೃಷ್ಟಿಯಿಂದ 222 ಮತಕ್ಷೇತ್ರಗಳಿಗೆ ಪರಿವೀಕ್ಷಕರನ್ನು ನೇಮಿಸಲಾಗಿದೆ. ಹಾಗೆಯೇ, ಹೆಚ್ಚುವರಿಯಾಗಿ ತಲಾ 14 ಮಂದಿಯಂತೆ ಸೂಕ್ಷ್ಮ ವೀಕ್ಷಕರನ್ನು ಪ್ರತಿ ಮತಕ್ಷೇತ್ರಕ್ಕೆ ನಿಯೋಜಿಸಲಾಗಿದೆ.

222 ಮತಕ್ಷೇತ್ರಗಳಲ್ಲಿ ಬಳಸಿದ 57,786 ಕಂಟ್ರೋಲ್ ಯೂನಿಟ್‌ಗಳನ್ನು ತೆರೆದು ಮತ ಎಣಿಕೆ ನಡೆಸಲಾಗುವುದು. ಹಾಗೆಯೇ, ಬಳಕೆಯಾದ 57,786 ವಿವಿಪ್ಯಾಟ್‌ಗಳ ಪೈಕಿ ಪ್ರತಿ ಮತಕ್ಷೇತ್ರಕ್ಕೆ ಒಂದರಂತೆ ಒಂದೊಂದು ವಿವಿ ಪ್ಯಾಟ್‌ಗಳನ್ನು ತೆರೆದು ಎಣಿಕೆ ಮಾಡಿ ಕಂಟ್ರೋಲ್ ಯೂನಿಟ್‌ನೊಂದಿಗಿನ ಫಲಿತಾಂಶವನ್ನು ತಾಳೆ ನೋಡಲಾಗುವುದು.

ಮತ ಎಣಿಕೆ ಕಾರ್ಯಕ್ಕಾಗಿ ಸುಮಾರು 16,662 ಸಿಬ್ಬಂದಿ ನಿಯೋಜಿಸಲಾಗಿದೆ. ಈ ಪೈಕಿ 3,410 ಮತ ಎಣಿಕೆ ಮೇಲ್ವಿಚಾರಕರು, 3,410 ಎಣಿಕೆ ಸಹಾಯಕರು ಮತ್ತು 3,410 ಸೂಕ್ಷ್ಮ ವೀಕ್ಷಕರನ್ನು ಒಳಗೊಂಡಿದೆ. ಸುಮಾರು 888 ಮಂದಿ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಿದ್ದಾರೆ. ಇವರ ಜೊತೆಗೆ ಹೆಚ್ಚುವರಿಯಾಗಿ 5,544 ಮಂದಿ ಭದ್ರತಾ ಕೊಠಡಿಯಿಂದ ಇವಿಎಂಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರಲು ನಿಯೋಜಿಸಲಾಗಿದೆ.

ಪ್ರತಿ ಮತ ಕ್ಷೇತ್ರಕ್ಕೆ ಸುಮಾರು 80ಮಂದಿ ಎಣಿಕೆ ಮಾಡುವವರನ್ನು ನಿಯೋಜಿಸಲಾಗಿದೆ. ಈ ಪೈಕಿ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಎಣಿಕೆ ಸಹಾಯಕರು ಮತ್ತು 14 ಸೂಕ್ಷ್ಮ ವೀಕ್ಷಕರಿಂದ ಕೂಡಿರುವ ಒಂದು ತಂಡವಾಗಿ ಕಾರ್ಯ ನಿರ್ವಹಿಸಲಿದೆ. ಈ ತಂಡದಲ್ಲಿ ಇರುವ ಹೆಚ್ಚುವರಿ 4 ಮಂದಿ ಅಂಚೆ ಮತಪತ್ರಗಳನ್ನು ಎಣಿಸಲಿದ್ದಾರೆ. ಪ್ರತಿ ಮತಕ್ಷೇತ್ರದಿಂದ 24 ಮಂದಿಯನ್ನು ಭದ್ರತಾ ಕೊಠಡಿಯಿಂದ ಮತ ಎಣಿಕೆ ಕೇಂದ್ರಕ್ಕೆ ಇವಿಎಂಗಳನ್ನು ಸಾಗಿಸಲು ನಿಯೋಜಿಸಲಾಗಿರುತ್ತದೆ ಎಂದು ಅವರು ವಿವರಿಸಿದರು.

ಮತ ಎಣಿಕೆ ನಡೆಯುವ 222 ಮತಕ್ಷೇತ್ರಗಳ ಪೈಕಿ ಸುಮಾರು 217 ಮತಕ್ಷೇತ್ರಗಳ ಮತ ಎಣಿಕೆಯು 14 ಟೇಬಲ್‌ಗಳಿರುವ ಹಾಲ್‌ನಲ್ಲಿ ನಡೆಯಲಿದೆ. ಉಳಿದ 5 ಕ್ಷೇತ್ರಗಳ ಮತ ಎಣಿಕೆಯು 14ಕ್ಕೂ ಹೆಚ್ಚು ಟೇಬಲ್‌ಗಳಿರುವ ಹಾಲ್‌ನಲ್ಲಿ ನಡೆಯಲಿದೆ.

ಈ ಮತಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಸ್ಪರ್ಧಿಗಳು ಚುನಾವಣಾ ಕಣದಲ್ಲಿದ್ದುದರಿಂದ ಹೆಚ್ಚುವರಿ ಟೇಬಲ್‌ಗಳನ್ನುಬಳಕೆ ಮಾಡಲಾಗುತ್ತದೆ. ಮತ ಎಣಿಕೆ ಕೇಂದ್ರಗಳು ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಕಾರ್ಯ ನಿರ್ವಹಿಸಲಿವೆ ಎಂದು ಅವರು ತಿಳಿಸಿದರು.

-222 ಕ್ಷೇತ್ರ, 57786 ಇವಿಎಂ ಕಂಟ್ರೋಲ್ ಯೂನಿಟ್
-ಪ್ರತಿ ಕ್ಷೇತ್ರದ 1ವಿವಿಪ್ಯಾಟ್ ತೆರೆದು ಕಂಟ್ರೋಲ್ ಯೂನಿಟ್‌ನೊಂದಿಗೆ ತಾಳೆ
-ಮತ ಎಣಿಕೆಗೆ 16 ಸಾವಿರ ಸಿಬ್ಬಂದಿ
-3,410 ಮತ ಎಣಿಕೆ ಮೇಲ್ವಿಚಾರಕರು
-3,410 ಎಣಿಕೆ ಸಹಾಯಕರು
-3,410 ಸೂಕ್ಷ್ಮ ವೀಕ್ಷಕರು
-888 ಮಂದಿ ಅಂಚೆ ಮತಪತ್ರ ಎಣಿಕೆಗೆ ನಿಯೋಜನೆ
-ಪ್ರತಿ ಕ್ಷೇತ್ರಕ್ಕೆ 80 ಮಂದಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X