Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುವತಿ ಕುಟುಂಬದಿಂದ ಪ್ರೇಮಿಗಳ 'ಮರ್ಯಾದಾ...

ಯುವತಿ ಕುಟುಂಬದಿಂದ ಪ್ರೇಮಿಗಳ 'ಮರ್ಯಾದಾ ಹತ್ಯೆ'

ವಾರ್ತಾಭಾರತಿವಾರ್ತಾಭಾರತಿ15 May 2018 10:29 AM IST
share
ಯುವತಿ ಕುಟುಂಬದಿಂದ ಪ್ರೇಮಿಗಳ ಮರ್ಯಾದಾ ಹತ್ಯೆ

ಅಮೃತಸರ, ಮೇ 15: ಯುವ ಪ್ರೇಮಿಗಳನ್ನು ಯುವತಿಯ ಕುಟುಂಬದವರೇ ಮರ್ಯಾದಾ ಹತ್ಯೆ ಮಾಡಿದ ಪ್ರಕರಣ ಪಾಕಿಸ್ತಾನ ಗಡಿಭಾಗದ ಪಂಜಾಬ್‌ನ ತರ್ಣ್ ತರಣ್ ಜಿಲ್ಲೆಯ ಖೇಮ್ ಕರಣ್ ಎಂಬಲ್ಲಿ ನಡೆದಿದೆ.

ನಗ್ನ ಸ್ಥಿತಿಯಲ್ಲಿರುವ ಯುವಕನ ಮೃತದೇಹ, ಯುವತಿಯ ಸಂಬಂಧಿಕರ ಮನೆ ಪಕ್ಕದ ಗಟಾರದಲ್ಲಿ ಪತ್ತೆಯಾಗಿದ್ದು, ಯುವತಿಯನ್ನು ಹತ್ಯೆ ಮಾಡಿ ಟರ್ಪಲ್‌ನಲ್ಲಿ ಮುಚ್ಚಿ ಮನೆಯೊಳಗೇ ಹುದುಗಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಮೃತ ಯುವಪ್ರೇಮಿಗಳನ್ನು ಹಸನ್‌ಪ್ರೀತ್ ಸಿಂಗ್ ಮತ್ತು ರಮಣ್‌ದೀಪ್ ಕೌರ್ ಎಂದು ಗುರುತಿಸಲಾಗಿದೆ.

ಈ ಸಂಬಂಧ ಯುವತಿಯ ತಂದೆ ಜಸ್ಸಾ ಸಿಂಗ್, ಮೂವರು ಸಹೋದರರಾದ ಶೇರ್ ಸಿಂಗ್, ಹರ್ಪಾಲ್ ಸಿಂಗ್ ಮತ್ತು ಬೋಹರ್ ಸಿಂಗ್, ಬೋಹರ್‌ಸಿಂಗ್‌ನ ಪುತ್ರ ಆಕಾಶ್, ಪತ್ನಿ ಮಂಜಿತ್ ಕೌರ್, ಶೇರ್ ಸಿಂಗ್‌ನ ಪುತ್ರ ರಾಣಾ, ಹರ್ಪಾಲ್ ಸಿಂಗ್‌ನ ಪತ್ನಿ ಮನ್‌ಪ್ರೀತ್ ಕೌರ್, ಬೋಹರ್ ಸಿಂಗ್ ಪುತ್ರ ಘುಲ್ಲಾ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಯುವಕನ ಮನೆ, ಯುವತಿಯ ಮನೆಯಿಂದ ಕೇವಲ 60 ಮೀಟರ್ ಅಂತರದಲ್ಲಿದೆ.

ಕಳೆದ ಮಾರ್ಚ್ ತಿಂಗಳಲ್ಲಷ್ಟೇ, ಪಂಜಾಬ್ ಹಾಗೂ ಹರ್ಯಾಣದ ಗ್ರಾಮಗಳಲ್ಲಿ ಇಂದಿಗೂ ವ್ಯಾಪಕವಾಗಿರುವ ಮರ್ಯಾದಾ ಹತ್ಯೆ ಮತ್ತು ಖಾಪ್ ಪಂಚಾಯತ್ ವಿರುದ್ಧ ಪ್ರಕರಣಗಳ ಬಗ್ಗೆ ಸುಪ್ರೀಂಕೋರ್ಟ್ ಕಠಿಣ ನಿಲುವು ಪ್ರಕಟಿಸಿತ್ತು.

ಮೃತ ಯುವಕನ ತಂದೆ ಪರ್ವೀಂದರ್ ಸಿಂಗ್ ಹೇಳುವ ಪ್ರಕಾರ, ರವಿವಾರ ಎಮ್ಮೆಗಳಿಗೆ ಹುಲ್ಲು ಹಾಕಲು ಹೋದ ಪುತ್ರ ವಾಪಾಸ್ಸಾಗಿಲ್ಲ. ಬಳಿಕ ಹಸನ್‌ಪ್ರೀತ್‌ನನ್ನು ಆರೋಪಿಗಳ ಮನೆಗೆ ಎಳೆದೊಯ್ಯುತ್ತಿರುವುದನ್ನು ನೋಡಿದ ಪರ್ವೀಂದರ್ ಸಹೋದರ ಮಾಹಿತಿ ನೀಡಿದ್ದರು. ಆಗಷ್ಟೇ ರಮಣ್‌ದೀಪ್ ಕೌರ್ ಮತ್ತು ಮಗನ ಸಂಬಂಧ ತಿಳಿದುಬಂದಿತ್ತು. ಪೊಲೀಸರಿಗೆ ನೀಡಿದ ದೂರಿನ ಸಂಬಂಧ ಜೆಸ್ಸಾ ಸಿಂಗ್‌ನನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ಹೇಳಿವೆ.

ಯುವಕನ ತಲೆಗೆ ಹಲಗೆಯಿಂದ ಹೊಡೆದು ಪ್ರಜ್ಞೆತಪ್ಪಿಸಿ ಉಸಿರುಗಟ್ಟಿಸಿ ಸಾಯಿಸಲಾಗಿದೆ. ಅದೇ ಹಲಗೆಯಿಂದ ಯುವತಿಯ ತಲೆಗೂ ಹೊಡೆದು ಪ್ರಜ್ಞೆತಪ್ಪಿಸಿ ಬಾಯಿಗೆ ಕೀಟನಾಶಕ ತುರುಕಿ ವಿಷಪ್ರಾಶನ ಮಾಡಲಾಗಿದೆ. ಬಳಿಕ ಯುವತಿಯ ಶವವನ್ನು ಟರ್ಪಲ್‌ನಲ್ಲಿ ಮುಚ್ಚಿಟ್ಟು ಹುದುಗಿಸಿದ್ದರು. ಯುವಕನ ದೇಹವನ್ನು ಗಟಾರಕ್ಕೆ ಎಸೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X