ರಾಜ್ಯ ವಿಧಾನಸಭಾ ಚುನಾವಣೆ: ಖಾತೆ ತೆರೆದ ಬಿಎಸ್ಪಿ

ಬೆಂಗಳೂರು, ಮೇ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್ಪಿ ಪಕ್ಷದ ಅಭ್ಯರ್ಥಿ ಎನ್.ಮಹೇಶ್ ಗೆಲುವು ಸಾಧಿಸಿದ್ದಾರೆ.
ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಎನ್.ಮಹೇಶ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಎ.ಆರ್.ಕೃಷ್ಣಮೂರ್ತಿ ಹಾಗೂ ಬಿಜೆಪಿ ಪಕ್ಷದಿಂದ ಜಿ.ಎನ್.ನಂಜುಂಡಸ್ವಾಮಿ ಸ್ಪಧೆಯಲ್ಲಿದ್ದರು.
ಮಂಗಳವಾರ ಫಲಿತಾಂಶ ಪ್ರಕಟವಾಗಿದ್ದು, ಎನ್.ಮಹೇಶ್ 71,792 ಮತಗಳನ್ನು ಪಡೆದರೆ, ಕಾಂಗ್ರೆಸ್ 52,338, ಬಿಜೆಪಿಯ ಅಭ್ಯರ್ಥಿ 39,690 ಮತ ಪಡೆದಿದ್ದಾರೆ. ಅಲ್ಲದೆ, 2013ರಲ್ಲಿ ಕಾಂಗ್ರೆಸಿನ ಎಸ್.ಜಯಣ್ಣ ವಿರುದ್ಧ 10 ಸಾವಿರ ಮತಗಳ ಅಂತರದಿಂದ ಎನ್.ಮಹೇಶ್ ಸೋತಿದ್ದರು.
Next Story





