ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮೃತ್ಯು
ಹಿರಿಯಡ್ಕ, ಮೇ 15: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಹಿರಿಯಡ್ಕದ ಜ್ಯೂನಿಯರ್ ಕಾಲೇಜ್ ಬಳಿ ಮೇ 14ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಪೆರ್ಡೂರು ಕುಂಜದಕಟ್ಟೆಯ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ಇವರು ಹಿರಿಯಡ್ಕದಿಂದ ಪೆರ್ಡೂರಿಗೆ ಬಸ್‌ನಲ್ಲಿ ಹೋಗುತ್ತಿದ್ದು, ಚಾಲಕ ಹಠತ್ ಬ್ರೇಕ್ ಹಾಕಿದ ಪರಿಣಾಮ ಬಸ್ಸಿನಲ್ಲಿದ್ದ ವಿಜಯ ಕುಮಾರ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಮಣಿಪಾಲ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಇವರು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





