ನಮ್ಮ ಶಾಸಕರಿಗೆ 100 ಕೋ.ರೂ. ಆಮಿಷ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು, ಮೇ 16: ‘‘ಬಿಜೆಪಿ ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು 100 ಕೋ.ರೂ. ಹಾಗೂ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಆಮಿಷ ಒಡ್ಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ‘‘ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆದರೆ, ನಾವು ಎರಡರಷ್ಟು ಶಾಸಕರನ್ನು ಬಿಜೆಪಿಯಿಂದ ಸೆಳೆಯುತ್ತೇವೆ’’ ಎಂದು ಎಚ್ಚರಿಕೆ ನೀಡಿದ್ದಾರೆ.
Next Story





