ಬೇರೆಯವರಿಗೆ ಸರಕಾರ ರಚಿಸಲು ಬಿಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಮೇ 16: ಯಾವುದೇ ಕಾರಣಕ್ಕೂ ಬೇರೆಯವರಿಗೆ ಸರಕಾರ ರಚಿಸಲು ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಳಿ ಇರುವುದು 104 ಸಂಖ್ಯೆಬಲ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್-ಜೆಡಿಎಸ್ ಸೇರಿದರೆ 117 ಸ್ಥಾನಗಳಾಗುತ್ತವೆ. ಆದರೆ ಬಿಜೆಪಿ ಸಂವಿಧಾನಬಾಹಿರವಾಗಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್-ಜೆಡಿಎಸ್‌ಗೆ 117 ಸ್ಥಾನಗಳಿರುವುದರಿಂದ ಸರಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಬೇಕು. ಕಾಂಗ್ರೆಸ್‌ನ ಎಲ್ಲ ಶಾಸಕರು ನಾವು ಒಟ್ಟಾಗಿದ್ದೇವೆ. ಬೇರೆ ಯಾರೂ ಸರಕಾರ ರಚಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.
Next Story





