ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಒಪ್ಪಿಕೊಳ್ಳಲಿ: ಕೇಂದ್ರ ಸಚಿವ ಅನಂತಕುಮಾರ್
ಬೆಂಗಳೂರು, ಮೇ 16: ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ, ಬಿಜೆಪಿ ಪರ ತೀರ್ಪು ನೀಡಿದ್ದಾರೆ. ಹೀಗಾಗಿ ಜನತೆ ನೀಡಿರುವ ತೀರ್ಪನ್ನು ಕಾಂಗ್ರೆಸ್ ಒಪ್ಪಿಕೊಂಡು ಪ್ರತಿಪಕ್ಷ ಸ್ಥಾನ ಒಪ್ಪಿಕೊಳ್ಳಬೇಕೆಂದು ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನತೆ ಕಾಂಗ್ರೆಸ್ ಪಕ್ಷವನ್ನು 21 ರಾಜ್ಯಗಳಲ್ಲಿ ತಿರಸ್ಕರಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ತಿರಸ್ಕರಿಸಿದ್ದಾರೆ. ಆದರೆ, ಕಾಂಗ್ರೆಸ್ ಷಡ್ಯಂತ್ರದಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸಚಿವ ಸದಾನಂದ ಗೌಡ ಮಾತನಾಡಿ, ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸೀಟು ಬಂದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈ ಹಿಂದೆ ಸಾಕಷ್ಟು ಭಾರಿ ಪರಸ್ಪರ ವಾಗ್ವಾದ ಮಾಡಿಕೊಂಡಿದ್ದಾರೆ. ಆದರೂ ಕೇವಲ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವುದು ಸರಿಯಲ್ಲವೆಂದು ಎಂದು ಅವರು ಹೇಳಿದರು.
Next Story