ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು, ಮೇ 17: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಇಂದು ಬೆಳಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ವೇಣುಗೋಪಾಲ್, ಅಶೋಕ್ ಗೆಹ್ಲೋಟ್ ,ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದಾರೆ.
‘‘ಬಹುಮತವಿಲ್ಲದ ಸರಕಾರಕ್ಕೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಲಾಗಿದೆ. ನಾವು ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ. ಜನರ ಬಳಿಯೂ ಅರಿವು ಮೂಡಿಸುತ್ತೇವೆ’’ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Next Story





