ಮುಖ್ಯಮಂತ್ರಿಯಾದ ಗಂಟೆಗಳ ಒಳಗೆ ನಾಲ್ಕು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಯಡಿಯೂರಪ್ಪ

ಬೆಂಗಳೂರು, ಮೇ 17: ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದ್ದಾರೆ.
ರೈಲ್ವೇ ಇಲಾಖೆಯ ಹೆಚ್ಚುವರಿ ಪೊಲೀಸ್ ಪ್ರಧಾನ ನಿರ್ದೇಶಕ ಅಮರ್ ಕುಮಾರ್ ಪಾಂಡೆಯವರನ್ನು ಬೆಂಗಳೂರು ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಪ್ರಧಾನ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಕೆಎಸ್‌ಆರ್‌ಪಿ ಸಹಾಯಕ ಪೊಲೀಸ್ ಪ್ರಧಾನ ನಿರ್ದೇಶಕರಾದ ಸಂದೀಪ್ ಪಾಟಿಲ್‌ರನ್ನು ಬೆಂಗಳೂರು ಗುಪ್ತಚರ ಇಲಾಕೆಯ ಸಹಾಯಕ ಪೊಲೀಸ್ ಪ್ರಧಾನ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಬೀದರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಿ. ದೇವರಾಜ್ ಅವರನ್ನು ಬೆಂಗಳೂರು ನಗರ ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್‌ರನ್ನು ಬೆಂಗಳೂರು ನಗರ ಈಶಾನ್ಯ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರಕಾರದ ಪ್ರಕಟನೆಯಲ್ಲಿ ತಿಳಿಸಲಾಗಿದೆ.





