ಕಾಂಗ್ರೆಸ್ ಶಾಸಕರನ್ನು ಮುಟ್ಟಿದರೆ ಬಿಜೆಪಿಗೆ ತಕ್ಕ ಪಾಠ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 17: ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ ತಕ್ಕ ಪಾಠ ಕಲಿಸದೆ ಬಿಡುವುದಿಲ್ಲವೆಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮುಂಭಾಗ ರಾಜ್ಯಪಾಲ ವಜುಬಾಯಿ ವಾಲಾರ ಅಸಂವಿಧಾನಿಕ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಅವರು, ಬಿಜೆಪಿಗೆ ಬಹುಮತ ಸಾಬೀತು ಪಡಿಸಲು ಸಾಧ್ಯವೇ ಇಲ್ಲ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಮ್ಮ ಶಾಸಕರನ್ನು ಸೆಳೆಯುವಂತಹ ಕೆಲಸಕ್ಕೆ ಕೈ ಹಾಕಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್‌ನ ಹಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದೆಲ್ಲ ಸುಳ್ಳು ಸುದ್ದಿ. ಉದ್ದೇಶಪೂರ್ವಕವಾಗಿಯೇ ಇಂತಹ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಒಂದು ವೇಳೆ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ, ನಮ್ಮದೇ ಶೈಲಿಯಲ್ಲಿ ನಾವು ಕಾರ್ಯರೂಪಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ತಿಳಿಸಿದರು.
Next Story





