Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೇ...

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೇ 22 ನಾಮಪತ್ರ ಸಲ್ಲಿಸಲು ಕೊನೆಯ ದಿನ

ವಾರ್ತಾಭಾರತಿವಾರ್ತಾಭಾರತಿ17 May 2018 6:46 PM IST
share

ಬೆಂಗಳೂರು, ಮೇ 17: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 22ರಂದು ಕೊನೆಯ ದಿನವಾಗಿದೆ.

ಮೇ 23ಕ್ಕೆ ನಾಮಪತ್ರಗಳನ್ನು ಪರಿಶೀಲನೆ, ಮೇ 25ಕ್ಕೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಮತದಾನದ ಜೂನ್ 8ರ ಬೆಳಗ್ಗೆ 8ಗಂಟೆಯಿಂದ ಸಂಜೆ 4ಗಂಟೆಯ ವರೆಗೆ ನಡೆಯಲಿದೆ. ಜೂನ್ 12ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 

ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಳೇದ 173(ಬಿ)ರ ಅನ್ವಯ 30 ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಚುನಾವಣಾಧಿಕಾರಿಗಳಾಗಿರುತ್ತಾರೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆ (ದಾವಣಗೆರೆ, ಹರಿಹರ, ಜಗಳೂರು ತಾಲೂಕುಗಳು) ಈ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಮೇ 22ರ ವರೆಗೆ ಮೇಲಿನ ಅಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆಯರೆಗೆ ನಾಮಪತ್ರ ಸಲ್ಲಿಸಬಹುದು.

ನಾಮಪತ್ರಗಳನ್ನು ಸಲ್ಲಿಸಲು ಬೇಕಾದ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಫಿಸುವವರು ಗಮನಿಸಬೇಕಾದ ಮುಖ್ಯ ಅಂಶವೇನೆಂದರೆ, 1951ರ ಪ್ರಜಾಪ್ರಾತಿನಿಧ್ಯ ಅಧಿನಿಯಮದ 33ನೆ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಠ ಹತ್ತು ಮತದಾರರು ಸೂಚಕರಾಗಿ ಸಹಿ ಮಾಡಿರಬೇಕು.

ಪ್ರತಿ ಅಭ್ಯರ್ಥಿ 10 ಸಾವಿರ ರೂ.ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು 5 ಸಾವಿರ ರೂ.ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ/ಪರಿಶಿಕಷ್ಟ ಪಂಗಡಕ್ಕೆ ಸೇರಿದ್ದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು. ಈ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಇವರುಗಳು ಸಹಾುಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯವರಿಗೆ ಪ್ರಾದೇಶಿಕ ಆಯುಕ್ತ ಕಚೇರಿ, ಬೆಂಗಳೂರು ವಿಭಾಗ, 2ನೆ ಮಹಡಿ, ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು-560 027 ಇಲ್ಲಿ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X