ಮುಖ್ಯಮಂತ್ರಿಯಾಗಿ ಯಡಿಯೂರಪ್ಪ: ಸಂಭ್ರಮಾಚರಣೆ

ಉಡುಪಿ, ಮೇ 17: ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೆ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ವತಿಯಿಂದ ಗುರುವಾರ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ಸಂಭ್ರಮಾಚರಣೆ ನಡೆಸಲಾಯಿತು.
ಯಡಿಯೂರಪ್ಪ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಸಿಹಿ ತಿಂಡಿ ವಿತರಿಸಿ ಪಟಾಕಿಸಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಮಹೇಶ್ ಠಾಕೂರ್, ಪ್ರಭಾಕರ ಪೂಜಾರಿ, ಶಿಲ್ಪಾ ರಘುಪತಿ ಭಟ್, ಸಂಧ್ಯಾ ರಮೇಶ್, ಶ್ಯಾಮಲಾ ಕುಂದರ್, ದಾವೂದ್, ಶ್ರೀಶ ನಾಯಕ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರಾಘವೇಂದ್ರ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
Next Story





