ಬಂಟಕಲ್: ಬೋಧನಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಶಿರ್ವ, ಮೇ 17: ಇಂದಿನ ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಭಾಷೆಯ ಪಾಂಡಿತ್ಯವು ಸಂಶೋಧನ ಪ್ರಬಂಧ ಪ್ರಕಾಶನಕ್ಕೆ ಸಹಕಾರಿ ಎಂದು ಲೇಖಕ ಹಾಗೂ ಚೆನ್ನೈ ನಿವೃತ್ತ ಇಂಗ್ಲಿಷ್ ಭಾಷಾ ಪ್ರಾಧ್ಯಾಪಕ ಪ್ರೊ.ರಮಣನ್ ಹೇಳಿದ್ದಾರೆ.
ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್.ವಿ.ಎಸ್. ನರ್ಸರಿ ಮತ್ತು ಪ್ರಾಥಮಿಕ ಶಾಲೆ ಹಾಗೂ ಕಡಿಯಾಳಿ ಪ್ರಾಥಮಿಕ ಶಾಲೆಯ ಪ್ರಾಧ್ಯಾಪಕರಿಗೆ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಬೋಧನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲ ಪ್ರೊ.ತಿರುಮಲೇಶ್ವರ ಭಟ್ ಮಾತನಾಡಿದರು.
ಕಾರ್ಯಾಗಾರದ ಆಯೋಜಕ, ಇನ್ನಂಜೆ ಎಸ್‌ವಿಎಚ್ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಎ.ಪಿ.ಕೊಡಂಚ ಸ್ವಾಗತಿಸಿದರು. ಬಂಟಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚೇತನ್ ಆರ್. ಪ್ರಾಸ್ತಾವಿಕವಾಗಿ ಮಾತ ನಾಡಿದರು. ಸಹಾಯಕ ಪ್ರಾಧ್ಯಾಪಕ ರಾಜೇಶ್ ನಾಯಕ್ ವಂದಿಸಿದರು. ಸೌಮ್ಯ ಭಟ್ ಮತ್ತು ವೃಂದ ಆಡ್ಕರ್ ಕಾರ್ಯಕ್ರಮ ನಿರೂಪಿಸಿದರು.







