ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ

ಚಿಕ್ಕಮಗಳೂರು, ಮೇ 17: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅಣ್ಣಾಮಲೈರವರನ್ನು ರಾಮನಗರ ಜಿಲ್ಲೆಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅಣ್ಣಾಮಲೈ ಆಗಸ್ಟ್ 4, 2016 ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡು ಅಧಿಕಾರ ವಹಿಸಿಕೊಂಡಿದ್ದರು.
ಎಸ್ಪಿ ಅಣ್ಣಾಮಲೈ ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ತಮ್ಮನ್ನು ಬೆಂಗಳೂರಿಗೆ ವರ್ಗಾಯಿಸುವಂತೆ ಸರಕಾರವನ್ನು ಕೋರಿಕೊಂಡಿದ್ದರು. ಆದರೆ ರಾಜ್ಯ ಸರಕಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿರಲಿಲ್ಲ. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಯಲ್ಲಿ ಬೇರೆ ರಾಜಕೀಯ ಕಾರಣವಿಲ್ಲ ಎನ್ನಲಾಗುತ್ತಿದೆ.
Next Story





