Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಗುಮಾಸ್ತ ಹುದ್ದೆಯಿಂದ ಸಿಎಂ...

'ಗುಮಾಸ್ತ ಹುದ್ದೆಯಿಂದ ಸಿಎಂ ಗದ್ದುಗೆಯವರೆಗೆ...'

3 ನೇ ಬಾರಿ ಮುಖ್ಯಮಂತ್ರಿಯಾಗುತ್ತಿರುವ ಬಿ.ಎಸ್.ಯಡಿಯೂರಪ್ಪರ ಜೀವನಗಾಥೆ

ವಾರ್ತಾಭಾರತಿವಾರ್ತಾಭಾರತಿ17 May 2018 8:11 PM IST
share
ಗುಮಾಸ್ತ ಹುದ್ದೆಯಿಂದ ಸಿಎಂ ಗದ್ದುಗೆಯವರೆಗೆ...

ಶಿವಮೊಗ್ಗ, ಮೇ 17: 'ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್...ಅಕ್ಕಿ ಗಿರಣಿಯಲ್ಲಿ ರೈಟರ್... ಪುರಸಭೆ ಸದಸ್ಯ...ಎಂಎಲ್‍ಎ...ವಿರೋಧ ಪಕ್ಷದ ನಾಯಕ... ಡಿಸಿಎಂ... ಸಿಎಂ..! ' ಇದು, ರಾಜ್ಯದ 23 ನೇ ಸಿಎಂ ಆಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪರ ಜೀವನಗಾಥೆಯ ಸಂಕ್ಷಿಪ್ತ ಹೈಲೈಟ್ಸ್ ಗಳು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಬೂಕನಕೆರೆ ಜನ್ಮಭೂಮಿಯಾದರೂ, ಬಿ.ಎಸ್.ಯಡಿಯೂರಪ್ಪರವರು ತಮ್ಮ ಜೀವನ ರೂಪಿಸಿಕೊಂಡಿದ್ದು ಹಾಗೂ ರಾಜಕೀಯ ನೆಲೆ ಕಂಡುಕೊಂಡಿದ್ದು ಮಾತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಕ್ಷೇತ್ರ ಪ್ರವೇಶಿಸಿ, ಇದೀಗ 3 ನೇ ಬಾರಿ ರಾಜ್ಯದ ಸಿಎಂ ಹುದ್ದೆಯ ಗದ್ದುಗೆಯೇರುವ ಮೂಲಕ ಎಲ್ಲರ ಗಮನವನ್ನು ಬಿಎಸ್‍ವೈ ತಮ್ಮತ್ತ ಸೆಳೆದುಕೊಂಡಿದ್ದಾರೆ. ಅವರ ರಾಜಕೀಯ ಜೀವನದ ಏಳುಬೀಳಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಕ್ಲರ್ಕ್: 1943 ಫೆಬ್ರವರಿ 27 ರಂದು ಬೂಕನಕೆರೆಯ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಬಿ.ಎಸ್.ವೈ.ರವರು ಮಂಡ್ಯದ ಪಿಇಎಸ್ ಕಾಲೇಜ್‍ನಲ್ಲಿ ಪಿಯುಸಿವರೆಗೆ ಶಿಕ್ಷಣ ಪಡೆದರು. ನಂತರ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸಕ್ಕೆ ಸೇರಿದರು. ಕೆಲಸಕ್ಕೆ ರಾಜೀನಾಮೆ ನೀಡಿದ್ದ ಅವರು, ವೃತ್ತಿಗಾಗಿ ಶಿಕಾರಿಪುರಕ್ಕೆ ಆಗಮಿಸಿದರು. ಪಟ್ಟಣದ ವೀರಭದ್ರಶಾಸ್ತ್ರಿಯವರ ಅಕ್ಕಿ ಗಿರಣಿಯಲ್ಲಿ ರೈಟರ್ ಆಗಿ ಕೆಲಸಕ್ಕೆ ಸೇರ್ಪಡೆಯಾದರು. ಅಕ್ಕಿ ಗಿರಣಿ ಮಾಲಿಕರ ಪುತ್ರಿ ಮೈತ್ರಾದೇವಿಯವರನ್ನು 1967 ರಲ್ಲಿ ಮದುವೆಯಾದರು.

1970 ರಲ್ಲಿ ಶಿಕಾರಿಪುರ ತಾಲೂಕಿನ ಆರೆಸ್ಸೆಸ್ ಕಾರ್ಯದರ್ಶಿಯಾಗಿ ನೇಮಕಗೊಂಡರು. ಜನಸಂಘದ ತಾಲೂಕು ಘಟಕದ ಅಧ್ಯಕ್ಷರಾದರು. 1972 ರಲ್ಲಿ ಶಿಕಾರಿಪುರ ಪುರಸಭೆ ಚುನಾವಣೆಗೆ ನಿಂತು ಆಯ್ಕೆಯಾದರು. ನಂತರ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದರು. 1993 ರಲ್ಲಿ ಮೊಟ್ಟ ಮೊದಲ ಬಾರಿಗೆ ವಿಧಾನಸಭೆ ಚುನಾವಣಾ ಕಣಕ್ಕಿಳಿದರು. ಮೊದಲ ಯತ್ನದಲ್ಲಿಯೇ ಅಂದು ಶಾಸಕರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಯಂಕಟಪ್ಪರನ್ನು ಶಿಕಾರಿಪುರದಲ್ಲಿ ಪರಾಭವಗೊಳಿಸಿದರು. 40,687 ಮತ ಪಡೆದು, 22,183 ಮತಗಳ ಅಂತರದಲ್ಲಿ ವಿಧಾನಸಭೆಗೆ ಆಯ್ಕೆಯಾದರು. ತದನಂತರ ಅವರು ಹಿಂದಿರುಗಿ ನೋಡಿದ್ದೆ ಇಲ್ಲ. ಸತತವಾಗಿ ಚುನಾವಣೆಯಲ್ಲಿ ಜಯ ಸಾಧಿಸುತ್ತಾ ಬಂದರು. 1988 ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದರು. ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಸುತ್ತಾಡಿ ಬಿಜೆಪಿ ಪಕ್ಷ ಕಟ್ಟುವ ಕೆಲಸ ಮಾಡಿದರು. 1994 ರ ಚುನಾವಣೆಯ ನಂತರ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದರು. 1999 ರ ಚುನಾವಣೆಯಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಅವರು ಮೊದಲ ಬಾರಿಗೆ ಸೋಲಿನ ರುಚಿ ಕಂಡರು. ಕಾಂಗ್ರೆಸ್ ಅಭ್ಯರ್ಥಿ ಮಹಾಲಿಂಗಪ್ಪರವರು 55,852 ಮತ ಪಡೆದು ಆಯ್ಕೆಯಾದರೆ, ಬಿಎಸ್‍ವೈರವರು 48,291 ಮತಗಳಿಸಿ ಸೋಲನುಭವಿಸಿದ್ದರು.

ನಂತರ ವಿಧಾನಪರಿಷತ್‍ಗೆ ಅವರು ಆಯ್ಕೆಯಾಗಿದ್ದರು. ತದನಂತರ ನಡೆದ ಚುನಾವಣೆಗಳಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ಜಯ ಸಾಧಿಸುತ್ತಾ ಬಂದರು. ಇಲ್ಲಿಯವರೆಗೂ ಅವರು ಶಿಕಾರಿಪುರ ಕ್ಷೇತ್ರದಲ್ಲಿ 8 ಚುನಾವಣೆಗಳನ್ನೆದುರಿಸಿದ್ದು, 7 ಬಾರಿ ಜಯ ಸಂಪಾದಿಸಿದ್ದಾರೆ. ಆ ಮಟ್ಟಕ್ಕೆ ಅವರು ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಕಾಯ್ದುಕೊಂಡು ಬಂದಿದ್ದಾರೆ.

ಬೀಳು: 2008 ರ ಮೇ 30 ರಿಂದ 2011 ರ ಜುಲೈ 31 ರವರೆಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ನಿರ್ವಹಿಸಿದರು. ದಕ್ಷಿಣ ಭಾರತದ ಪ್ರಪ್ರಥಮ ಬಿಜೆಪಿ ಸಿಎಂ ಎಂಬ ಖ್ಯಾತಿಗೂ ಪಾತ್ರರಾದರು. ಆದರೆ ಸ್ವತಃ ಬಿಎಸ್‍ವೈ ಸೇರಿದಂತೆ ಅವರ ಮಂತ್ರಿಮಂಡಲದ ಹಲವು ಸದಸ್ಯರು, ಬಿಜೆಪಿ ಶಾಸಕರು ನಾನಾ ರೀತಿಯ ಭ್ರಷ್ಟಾಚಾರ, ಹಗರಣಗಳಲ್ಲಿ ಸಿಕ್ಕಿ ಬೀಳುವಂತಾಯಿತು. ಇದೇ ಕಾರಣದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡುವಂತಾಯಿತು. ತದನಂತರ ನಡೆದ ಬೆಳವಣಿಗೆಯಲ್ಲಿ ಡಿನೋಟೀಫೀಕೇಷನ್ ಪ್ರಕರಣದಲ್ಲಿ ಬಿಎಸ್‍ವೈರವರು ಕೆಲ ದಿನಗಳ ಕಾಲ ಜೈಲುವಾಸ ಅನುಭವಿಸುವಂತಾಯಿತು. ಇದು ಬಿಜೆಪಿಗೆ ಸಾಕಷ್ಟು ಅಪಖ್ಯಾತಿ ತಂದೊಡ್ಡಿತ್ತು.

ಕೆಜೆಪಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಹಾಗೂ ತಮ್ಮ ವಿರುದ್ದ ಕೇಳಿಬಂದ ಭ್ರಷ್ಟಾಚಾರ ಆರೋಪಗಳಿಗೆ ಪಕ್ಷದ ಸ್ವಪಕ್ಷೀಯರೇ ಕಾರಣವೆಂದು ಆಕ್ರೋಶಗೊಂಡ ಬಿಎಸ್‍ವೈರವರು ತಾವೇ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷ ತೊರೆಯುವ ನಿರ್ಧಾರ ಮಾಡಿದರು. ಕೆಜೆಪಿ ಪಕ್ಷ ಕಟ್ಟಿದರು. 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರೀ ನಿರೀಕ್ಷೆಯೊಂದಿಗೆ ಚುನಾವಣೆ ಎದುರಿಸಿದರು. ಆದರೆ ಬಿಎಸ್‍ವೈ ನೇತೃತ್ವದ ಕೆಜೆಪಿ ಪಕ್ಷ ಅತ್ಯಂತ ಕಳಪೆ ಸಾಧನೆ ಮಾಡಿತ್ತು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮತ್ತೆ ಬಿಎಸ್‍ವೈ ಬಿಜೆಪಿ ಸೇರ್ಪಡೆಯಾದರು. 2014 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದರು. 3,63,305 ಮತಗಳ ಭಾರೀ ಅಂತರದಲ್ಲಿ ಜಯ ಸಂಪಾದಿಸಿದ್ದರು.

ಮೂರು ಬಾರಿ ಸಿಎಂ...!

ಬಿ.ಎಸ್.ಯಡಿಯೂರಪ್ಪ ಒಟ್ಟು ಮೂರು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದರೆ, ಬಿಎಸ್‍ವೈ ಉಪ ಮುಖ್ಯಮಂತ್ರಿಯಾಗಿದ್ದರು. ಒಪ್ಪಂದದಂತೆ 2007 ರ ನವೆಂಬರ್ 12 ರಂದು ಬಿಎಸ್‍ವೈ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಜೆಡಿಎಸ್ ನೀಡಿದ್ದ ಬೆಂಬಲ ಹಿಂದೆಗೆದುಕೊಂಡಿತು. ಈ ಕಾರಣದಿಂದ ಕೆಲವೇ ದಿನಗಳಲ್ಲಿ ಅಂದರೆ ನವೆಂಬರ್ 19 ರಂದು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು.

ತದನಂತರ ಜೆಡಿಎಸ್ ಅಧಿಕಾರ ನೀಡದ್ದನ್ನೇ ಮುಂದಿಟ್ಟುಕೊಂಡು ಪ್ರಚಾರ ನಡೆಸಿದ ಬಿಎಸ್‍ವೈ 2008 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತರುವಲ್ಲಿ ಯಶಸ್ವಿಯಾದರು. 2008 ರ ಮೇ 30 ರಿಂದ 2011 ರ ಜುಲೈ 31 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದರು. ಭ್ರಷ್ಟಾಚಾರ ಮತ್ತಿತರ ಆರೋಪಗಳಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ 2018 ಮೇ 17 ರಂದು ಮತ್ತೊಮ್ಮೆ ಕರ್ನಾಟಕದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಎದುರಾಳಿಯಾಗಿದ್ದರು ಎಸ್.ಬಂಗಾರಪ್ಪ

2008 ರ ವಿಧಾನಸಭೆ ಚುನಾವಣೆಯ ವೇಳೆ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪರವರು ಶಿಕಾರಿಪುರ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಕಣಕ್ಕಿಳಿಯುವ ನಿರ್ಧಾರ ಪ್ರಕಟಿಸಿದ್ದರು. ಯಡಿಯೂರಪ್ಪ - ಬಂಗಾರಪ್ಪ ಸ್ಪರ್ಧೆಯು ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಆದರೆ ಈ ಚುನಾವಣೆಯಲ್ಲಿ ಯಡಿಯೂರಪ್ಪರವರು 83,491 ಮತ ಪಡೆದು ಜಯ ಸಂಪಾದಿಸಿದ್ದರೇ, ಎಸ್.ಬಂಗಾರಪ್ಪರವರು 37,564 ಮತ ಪಡೆದು ಪರಾಭವಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X