ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಪರಮೇಶ್ವರ್ ಆಯ್ಕೆ

ಬೆಂಗಳೂರು, ಮೇ 17: ಕಾಂಗ್ರೆಸ್ ಶಾಸಕಾಂಗ ಪಕ್ಷ(ಸಿಎಲ್‌ಪಿ)ದ ನಾಯಕನಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ರನ್ನು ಗುರುವಾರ ಸಂಜೆ ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಆಪರೇಷನ್ ಕಮಲದ ಭೀತಿಯಿಂದಾಗಿ ಶಾಸಕರನ್ನು ಕೇರಳದ ಕೊಚ್ಚಿಗೆ ಸ್ಥಳಾಂತರಿಸುವ ಮುನ್ನ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಶಾಸಕ ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಎಲ್ಲ ಶಾಸಕರು ಪರಮೇಶ್ವರ್‌ಗೆ ಬೆಂಬಲ ಸೂಚಿಸಿದರು.
Next Story





