ಮೇ 19ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ
ಉಡುಪಿ, ಮೇ 18: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯ ಕರ್ತರಿಗೆ ಕೃತಜ್ಞತೆ ಸಲ್ಲಿಸುವ ಸಭೆಯು ಮೇ 19ರಂದು ಮಧ್ಯಾಹ್ನ 3:30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಭೆಯಲ್ಲಿ ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ವಹಿಸಲಿ ರುವರು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





