ಮಣಿಪಾಲ: ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 18: ಮಣಿಪಾಲದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಸರಕಾರಿ ಅಥವಾ ಅಂಗೀಕೃತ ಕಾಲೇಜಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ನಿಲಯಗಳಲ್ಲಿ ಒಟ್ಟು ತಲಾ 50 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಶೇ.75ರಷ್ಟು ಅಲ್ಪಸಂಖ್ಯಾತ ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಅರ್ಹ ವಿದ್ಯಾರ್ಥಿಯು ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, 2017-18ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಪಂನಿಂದ ಪಡೆದ ದೂರದ ಪ್ರಮಾಣ ಪತ್ರ, ಎರಡು ಫೋಟೊಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಣಿಪಾಲ (ದೂರವಾಣಿ:0820-2574596/2574881), ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ (ದೂ:0820-2520739), ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ರಜತಾದ್ರಿ, ಮಣಿಪಾಲ (ದೂರವಾಣಿ: 2574596), ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಾರ್ಕಳ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಂದಾಪುರ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.







