Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ...

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಮೆಡಿಕಲ್ ಫಿಸಿಕ್ಸ್ ನೂತನ ಕೋರ್ಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 May 2018 10:03 PM IST
share
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಮೆಡಿಕಲ್ ಫಿಸಿಕ್ಸ್ ನೂತನ ಕೋರ್ಸ್ ಉದ್ಘಾಟನೆ

ಕೊಣಾಜೆ, ಮೇ 18: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಮೆಡಿಕಲ್ ಫಿಸಿಕ್ಸ್’ ನೂತನ ಕೋರ್ಸ್ ಉದ್ಘಾಟನೆ ಸಮಾರಂಭವು ಶುಕ್ರವಾರ ವಿವಿಯ ಸಭಾಂಗಣದಲ್ಲಿ ನಡೆಯಿತು.

ನೂತನ ಕೋರ್ಸ್‌ನ ಉದ್ಘಾಟನೆಯನ್ನು ಭಾರತ ಸರಕಾರದ ಅಟೋಮಿಕ್ ಎನರ್ಜಿ ರೆಗ್ಯುಲೇಟರಿ ಮಂಡಲಿಯ ಅಧ್ಯಕ್ಷ ಎಸ್.ಎ.ಭಾರದ್ವಾಜ್ ಅವರು ನೆರವೇರಿಸಿ ಮಾತನಾಡಿ, ದೇಶದ 22 ವಿಶ್ವವಿದ್ಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ವಿಕಿರಣ ವಿಜ್ಞಾನದಲ್ಲಿ ಸ್ನಾತಕಕೋತ್ತರ ಎಂ.ಎಸ್ಸಿ ಕೋರ್ಸ್‌ಗಳನ್ನು ನಡೆಸುತ್ತಿವೆ. ಮೂರು ವರ್ಷದ ಅವಧಿಯ ಈ ಕೋರ್ಸ್ ಅಂತಿಮ ವರ್ಷದಲ್ಲಿ ಒಂದು ವರ್ಷದ ಇಂಟರ್ನ್‌ಶಿಪ್ ಒಳಗೊಂಡಿದೆ. ನೂತನ ಕೋರ್ಸ್ ಯುವ ಜನತೆಯ ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರು.

ಭಾರತದಲ್ಲಿ ಪ್ರಸ್ತುತ 450 ರೇಡಿಯೋ ಥೆರಪಿ ಕೇಂದ್ರಗಳಿವೆ ಮತ್ತು ಭಾರತ ಸರಕಾರದ ಅಟೋಮಿಕ್ ಎನರ್ಜಿ ರೆಗ್ಯುಲೇಟರಿ ಮಂಡಲಿಯಲ್ಲಿ 1,600 ರೇಡಿಯೋ ಥೆರಪಿಸ್ಟ್‌ಗು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಲ್ಪಾಕಂನ ನ್ಯೂಕ್ಲಿಯರ್ ಎನರ್ಜಿ ಸೇಫ್ಟಿ ಅನಾಲಿಸಿಸ್‌ನ ವಿ.ಬಾಲಸುಬ್ರಹ್ಮಣ್ಯಂ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ವಿಕಿರಣ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ವಿಪುಲವಾದ ಅವಕಾಶಗಳಿವೆ. ಈ ಅವಕಾಶಗಳನ್ನು ಇನ್ನಷ್ಟು ವಿಸ್ತರಿಸಲು ಸಂಸ್ಥೆಯು ವಿವಿಧ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಮಾತನಾಡಿ, ಕರ್ನಾಟಕದಲ್ಲಿ ಬೇರೆ ಯಾವುದೇ ವಿಶ್ವವಿದ್ಯಾನಿಲಯಗಳಲ್ಲಿ ಈ ಕೋರ್ಸ್ ಇರುವುದಿಲ್ಲ. ಕೋರ್ಸ್‌ನ ಅನನ್ಯತೆ ಕಂಡುಕೊಂಡು ಯುವಜನತೆಗೆ ಅನುಕೂಲವಾಗಲಿ ಎಂಬ ದಿಸೆಯಿಂದ ಹೊಸ ಕೋರ್ಸ್ ಆರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಬಿ.ಎಸ್.ನಾಗೇಂದ್ರ ಪ್ರಕಾಶ್ ಸ್ವಾಗತಿಸಿದರು. ಕೋರ್ಸ್‌ನ ಸಂಯೋಜಕ ಪ್ರೊ.ಸೋಮಶೇಖರಪ್ಪ ಉಪಸ್ಥಿತರಿದ್ದರು. ಪ್ರೊ.ಕರುಣಾಕರ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X