ಹಂಗಾಮಿ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ನಾಳೆ ಬೆಳಗ್ಗೆ 10:30ಕ್ಕೆ ವಿಚಾರಣೆ

ಹೊಸದಿಲ್ಲಿ, ಮೇ 18:ಕರ್ನಾಟಕ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಕೆ.ಜಿ. ಬೋಪಯ್ಯ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶನಿವಾರ ಬೆಳಗ್ಗೆ 10:30ಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಬೋಪಯ್ಯನವರನ್ನು ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನ ರಿಜಿಸ್ಟ್ರಾರ್ ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸಮಯ ನಿಗದಿಪಡಿಸಿದರು. ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಲಿದೆ.
ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಕಾಂಗ್ರೆಸ್ ಪರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ, ತ್ವರಿತ ವಿಚಾರಣೆಗೆ ಮನವಿ ಮಾಡಿದ್ದರು.
Next Story





