Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಸಿಹಿನೀರಿನ ಪ್ರಮಾಣ ಕುಸಿತ:...

ದೇಶದಲ್ಲಿ ಸಿಹಿನೀರಿನ ಪ್ರಮಾಣ ಕುಸಿತ: ನಾಸಾ ವರದಿ

ವಾರ್ತಾಭಾರತಿವಾರ್ತಾಭಾರತಿ18 May 2018 11:50 PM IST
share
ದೇಶದಲ್ಲಿ ಸಿಹಿನೀರಿನ ಪ್ರಮಾಣ ಕುಸಿತ: ನಾಸಾ ವರದಿ

ಹೊಸದಿಲ್ಲಿ, ಮೇ 18: ನೀರನ್ನು ಅತಿಯಾಗಿ ಬಳಸುತ್ತಿರುವ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದ್ದು, ಭಾರತದಲ್ಲಿ ಸಿಹಿನೀರಿನ ಪ್ರಮಾಣ ಅಪಾಯಕಾರಿ ರೀತಿಯಲ್ಲಿ ಕುಸಿಯುತ್ತಿದೆ ಎಂದು 'ನಾಸಾ'ದ ಉಪಗ್ರಹಗಳು ಭೂಮಿಯ ಕುರಿತು ನಡೆಸಿದ ಅಧ್ಯಯನದಲ್ಲಿ ಕಂಡುಬಂದಿದೆ. ವಿಶ್ವದಲ್ಲಿ ಸಿಹಿನೀರಿನ ಪ್ರಮಾಣದಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಇದರ ಕಾರಣದ ಕುರಿತು ಅಮೆರಿಕದ 'ನಾಸಾ' ವಿಜ್ಞಾನಿಗಳ ನೇತೃತ್ವದಲ್ಲಿ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಭೂಮಿಯ ಒಣಪ್ರದೇಶಗಳು ಮತ್ತಷ್ಟು ಒಣಗುತ್ತಿದ್ದು ಇದಕ್ಕೆ ನೀರಿನ ನಿರ್ವಹಣೆ , ಹವಾಮಾನದ ಬದಲಾವಣೆ ಹಾಗೂ ಪ್ರಾಕೃತಿಕ ಘಟನೆಗಳು ಸೇರಿದಂತೆ ಹಲವು ಕಾರಣಗಳಿವೆ. ಭಾರತದ ಉತ್ತರ ಹಾಗೂ ಪೂರ್ವ ಭಾಗಗಳು, ಮಧ್ಯಪ್ರಾಚ್ಯ ರಾಷ್ಟ್ರಗಳು, ಕ್ಯಾಲಿಫೋರ್ನಿಯ ಮತ್ತು ಆಸ್ಟ್ರೇಲಿಯಾ ದೇಶದಲ್ಲಿ ಸಿಹಿನೀರಿನ ಪ್ರಮಾಣ ಕ್ಷಿಪ್ರವಾಗಿ ಬರಿದಾಗುತ್ತಾ ಸಾಗುತ್ತಿದೆ ಎಂದು 'ದಿ ಗಾರ್ಡಿಯನ್' ಪತ್ರಿಕೆ ವರದಿ ಮಾಡಿದೆ. ಉತ್ತರಭಾರತದಲ್ಲಿ ಮಳೆಯ ಪ್ರಮಾಣ ಕ್ರಮಬದ್ಧವಾಗಿದ್ದರೂ ಗೋಧಿ, ಅಕ್ಕಿ ಮುಂತಾದ ಬೆಳೆಗಳಿಗೆ ನೀರುಣಿಸಲು ಅಂತರ್ಜಲವನ್ನು ಹೊರತೆಗೆಯುವುದರಿಂದ ನೀರಿನ ಲಭ್ಯತೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗುತ್ತಿದೆ. ಮಳೆಗಾಲದಲ್ಲಿ ಅಂತರ್ಜಲದ ಮರುಪೂರಣವು ನೀರನ್ನು ಬಳಸುವ ಪ್ರಮಾಣಕ್ಕಿಂತ ತುಂಬಾ ಕಡಿಮೆಯಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಇದರಿಂದ ಅಂತರ್ಜಲದ ಮಟ್ಟ ಕಳವಳಕಾರಿ ಸ್ಥಿತಿಗೆ ತಲುಪಿದೆ ಎಂದು ವರದಿ ತಿಳಿಸಿದೆ.

ವಿಶ್ವದಾದ್ಯಂತದ 34 ಪ್ರದೇಶಗಳಲ್ಲಿ ಅಮೆರಿಕ/ಜರ್ಮನಿ ನೇತೃತ್ವದ ತಂಡವು ಸಿಹಿನೀರಿನ ಲಭ್ಯತೆಯ ಕುರಿತ 14 ವರ್ಷ ಅಧ್ಯಯನ ನಡೆಸಿ ವರದಿ ತಯಾರಿಸಿದೆ. ಸಿಹಿ ನೀರು ಕುಡಿಯಲು ಹಾಗೂ ಕೃಷಿಯ ಬಳಕೆಗೆ ಅತ್ಯಗತ್ಯವಾಗಿದೆ. ನೀರಿನ ಲಭ್ಯತೆ, ಬಳಕೆ , ಪ್ರಮಾಣ ಹಾಗೂ ಗುಣಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ನಾವು ಗಮನಿಸಿದ್ದೇವೆ ಎಂದು 'ನಾಸ'ದ ವಿಜ್ಞಾನಿ ಜೇ ಫ್ಯಮಿಗ್ಲಿಯೆಟಿ ತಿಳಿಸಿದ್ದಾರೆ. ವಿಶ್ವದಲ್ಲಿ ತೇವಭೂಮಿಗಳು ಮತ್ತಷ್ಟು ತೇವಗೊಳ್ಳುತ್ತಾ ಸಾಗುವುದು, ಒಣಪ್ರದೇಶಗಳು ಮತ್ತಷ್ಟು ಒಣಗುತ್ತಾ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಒಣಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಾ ಸಾಗುತ್ತಿದೆ. ಆಲ್ಪ್ ಪ್ರದೇಶದ ಹಿಮನದಿ, ನೀರು ಮಂಜುಗಡ್ಡೆಯಾಗುವುದು ಇತ್ಯಾದಿಗಳಿಗೆ ಹವಾಗುಣದಲ್ಲಿ ಆಗುವ ಬದಲಾವಣೆ ಕಾರಣವಾಗಿದೆ. ಆದರೆ ಸಿಹಿನೀರಿನ ಪ್ರಮಾಣದಲ್ಲಿ ಆಗುವ ಬದಲಾವಣೆಗೆ ಪ್ರಮುಖ ಕಾರಣವನ್ನು ಕಂಡುಹಿಡಿಯಲು ಇನ್ನಷ್ಟು ಸಮಯ ಹಾಗೂ ಅಧ್ಯಯನದ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X