ಇನ್ನೂ ನಿಗೂಢವಾಗಿರುವ ಇಬ್ಬರು ಶಾಸಕರ ನಡೆ

ಪ್ರತಾಪ್ ಗೌಡ ಪಾಟೀಲ್, ಆನಂದ್ ಸಿಂಗ್
ಬೆಂಗಳೂರು, ಮೇ 19: ಕಾಂಗ್ರೆಸ್ ಶಾಸಕರಾದ ವಿಜಯ ನಗರದ ಆನಂದ್ ಸಿಂಗ್ ಮತ್ತು ಕಂಪ್ಲಿಯ ಪ್ರತಾಪ್ ಗೌಡ ಪಾಟೀಲ್ ಸದನಕ್ಕೆ ಗೈರು ಹಾಜರಾಗಿದ್ದಾರೆ.
ಇಬ್ಬರು ಶಾಸಕರು ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ತಂಗಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಅವರು ಸದನಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಮಾಣವಚನ ಸ್ವೀಕಾರಕ್ಕೆ ಪ್ರತಾಪ್ ಗೌಡ ಹೆಸರನ್ನು ವಿಧಾನಸಭೆಯ ಕಾರ್ಯದರ್ಶಿ ಕೂಗಿದರೂ, ಅವರು ಆ ವೇಳೆ ಹಾಜರಿರಲಿಲ್ಲ ಎನ್ನಲಾಗಿದೆ.
ಈ ಮೊದಲು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಇದೀಗ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರ ನಡೆ ನಿಗೂಢವಾಗಿದೆ ಎಂದು ಹೇಳಲಾಗುತ್ತಿದೆ.
Next Story





