ಮಾಜಿ ಶಾಸಕ ಡಾ.ವೈ.ಸಿ.ವಿಶ್ವನಾಥ್ ನಿಧನಕ್ಕೆ ಬಿಎಸ್ವೈ ಸಂತಾಪ

ವೈ.ಸಿ.ವಿಶ್ವನಾಥ್
ಬೆಂಗಳೂರು, ಮೇ 20: ಕಡೂರು ಕ್ಷೇತ್ರದ ಮಾಜಿ ಶಾಸಕ ಡಾ.ವೈ.ಸಿ.ವಿಶ್ವನಾಥ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
'ಮಾಜಿ ಶಾಸಕ ಡಾ.ವೈ.ಸಿ.ವಿಶ್ವನಾಥ್ ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತ. ತಮ್ಮ ಸಹೃದಯತೆ ಹಾಗೂ ಜನಪರ ಕೆಲಸಗಳಿಂದ ಕಡೂರು ಕ್ಷೇತ್ರದಲ್ಲಿ ಜನಪ್ರಿಯತೆ ಹೊಂದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಬಹಳ ಶ್ರಮ ವಹಿಸಿದ್ದರು' ಎಂದು ಪತ್ರಿಕಾ ಹೇಳಿಕೆಯಲ್ಲಿ ಸ್ಮರಿಸಿದ್ದಾರೆ.
Next Story





