Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಗಾಲ-ಚಳಿಗಾಲದಲ್ಲಿ ಶಿವಮೊಗ್ಗ...

ಮಳೆಗಾಲ-ಚಳಿಗಾಲದಲ್ಲಿ ಶಿವಮೊಗ್ಗ ಜಿಲ್ಲೆಗೆ ಎದುರಾಗಲಿದೆ ವಿವಿಧ ಚುನಾವಣೆಗಳು

ವರದಿ : ಬಿ. ರೇಣುಕೇಶ್ವರದಿ : ಬಿ. ರೇಣುಕೇಶ್20 May 2018 9:02 PM IST
share
ಮಳೆಗಾಲ-ಚಳಿಗಾಲದಲ್ಲಿ ಶಿವಮೊಗ್ಗ ಜಿಲ್ಲೆಗೆ ಎದುರಾಗಲಿದೆ ವಿವಿಧ ಚುನಾವಣೆಗಳು

ಶಿವಮೊಗ್ಗ, ಮೇ 20: ಜಿಲ್ಲೆಯಲ್ಲಿ ಬೇಸಿಗೆಯ ಸುಡು ಬಿಸಿಲಿನ ನಡುವೆಯೇ, ವಿಧಾನಸಭೆ ಚುನಾವಣೆಯ ಅಬ್ಬರ ಕೊನೆಗೊಂಡಿದೆ. ಮುಂಗಾರು ಮಳೆಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಪ್ರಸ್ತುತ ವರ್ಷ ಕೊನೆಗೊಳ್ಳುವುದರಲ್ಲಿ, ಮುಂದಿನ ಆರೇಳು ತಿಂಗಳ ಮಳೆ - ಚಳಿಗಾಲದ ಅವಧಿಗಳಲ್ಲಿ ನಾಲ್ಕು ಪ್ರಮುಖ ಚುನಾವಣೆಗಳು ಜಿಲ್ಲೆಯ ಜನತೆಯನ್ನು ಎದುರುಗೊಳ್ಳಲಿವೆ.

ಹೌದು. ಆರು ವರ್ಷ ಅಧಿಕಾರಾವಧಿ ಪೂರ್ಣಗೊಂಡಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ (ವಿಧಾನ ಪರಿಷತ್‍ಗೆ ಆಯ್ಕೆ), ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಜಿಲ್ಲೆಯ 9 ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳು ಹಾಗೂ ಸಂಸದರ ರಾಜೀನಾಮೆಯಿಂದ ತೆರವಾಗಿರುವ ಲೋಕಸಭೆಗೆ ಚುನಾವಣೆ ನಡೆಯುವುದಕ್ಕೆ ವೇದಿಕೆ ಸಿದ್ದವಾಗಿದೆ. ಲೋಕಸಭೆ ಚುನಾವಣೆ ಹೊರತುಪಡಿಸಿ, ಉಳಿದ ಮೂರು ಚುನಾವಣೆಗಳಲ್ಲಿ ಸೀಮಿತ ವರ್ಗ ಹಾಗೂ ವ್ಯಾಪ್ತಿಯ ಮತದಾರರು ಮಾತ್ರ ಮತದಾನದ ಹಕ್ಕು ಹೊಂದಿದ್ದಾರೆ. 

ಒಟ್ಟಾರೆ ಜಿಲ್ಲೆಯಲ್ಲಿ ಈ ವರ್ಷಾಂತ್ಯದೊಳಗೆ ಅಕ್ಷರಶಃ ಚುನಾವಣಾ ಪರ್ವಕಾಲವೇ ಎದುರುಗೊಳ್ಳಲಿದೆ. ಈಗಾಗಲೆ ವಿಧಾನಸಭೆ ಮಾದರಿ ನೀತಿ-ಸಂಹಿತೆಯ ಬಿಸಿಯಲ್ಲಿ ಪರಿತಪಿಸಿರುವ ನಾಗರೀಕರು, ಮುಂದಿನ ಕೆಲ ತಿಂಗಳುಗಳ ಕಾಲ ನೀತಿ-ಸಂಹಿತೆ ಅಡೆತಡೆ ಎದುರಿಸಬೇಕಾಗುತ್ತದೆ. 

ಅದರಲ್ಲಿಯೂ ಆಡಳಿತದ ವಿವಿಧ ಹಂತದ ಜನಪ್ರತಿನಿಧಿಗಳ ಅಧಿಕಾರ ಚಲಾವಣೆಗೂ ಅಡ್ಡಿಯಾಗಿ ಪರಿಣಮಿಸಲಿದೆ. ಅಭಿವೃದ್ದಿ ಕಾರ್ಯಗಳ ಮೇಲೆಯೂ ಗಂಭೀರ ಪರಿಣಾಮ ಬೀರುವುದು ನಿಶ್ಚಿತವಾಗಿದೆ. ಮೂರು ಚುನಾವಣೆಗಳ ಸಂಕ್ಷಿಪ್ತ ವಿವರ ಈ ಮುಂದಿನಂತಿದೆ. 

ವಿಧಾನಪರಿಷತ್‍ಗೆ ಜೂನ್ 8 ರಂದು ನಡೆಯಲಿದೆ ಮತದಾನ 
ಈಗಾಗಲೇ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ಜೂನ್ 8 ರಂದು ಮತದಾನ ನಡೆಯಲಿದೆ. ಮೇ 15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ. ಪದವೀಧರ ಕ್ಷೇತ್ರಕ್ಕೆ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರು ಮತದಾರರಾಗಿದ್ದಾರೆ. 

ಈ ಎರಡು ಕ್ಷೇತ್ರ ವ್ಯಾಪ್ತಿಗೆ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕು ವ್ಯಾಪ್ತಿಗಳು ಸೇರ್ಪಡೆಯಾಗುತ್ತವೆ. ಇತರೆ ಜಿಲ್ಲೆಗೆ ಹೋಲಿಸಿದರೆ ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ ಮತದಾರರಿದ್ದಾರೆ. ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎಸ್.ಪಿ.ದಿನೇಶ್, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಸಂಸದ ಆಯನೂರು ಮಂಜುನಾಥ್ ಕಣಕ್ಕಿಳಿಯುತ್ತಿದ್ದಾರೆ. ಉಳಿದಂತೆ ಶಿಕ್ಷಕರ ಕ್ಷೇತ್ರದಿಂದಲೂ ಪ್ರಮುಖ ರಾಜಕೀಯ ಪಕ್ಷ ಹಾಗೂ ಪಕ್ಷೇತರವಾಗಿ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿದ್ದಾರೆ. 

ಪದವೀಧರ ಕ್ಷೇತ್ರವು ಕಳೆದ ಐದು ಚುನಾವಣೆಗಳಿಂದ ಬಿಜೆಪಿ ಅಭ್ಯರ್ಥಿ ಡಿ.ಹೆಚ್.ಶಂಕರಮೂರ್ತಿ ಕಣಕ್ಕಿಳಿದು ಜಯ ಸಾಧಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಅವರು ಕಣಕ್ಕಿಳಿಯುತ್ತಿಲ್ಲ. ಕಾಂಗ್ರೆಸ್ ಪಕ್ಷವು ಕ್ಷೇತ್ರ ವಶಕ್ಕೆ ಭಾರೀ ಕಸರತ್ತು ನಡೆಸುತ್ತಿದೆ. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದೆಯೋ? ಇಲ್ಲವೋ? ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ. 

ಪಾಲಿಕೆ-ನಗರಸಭೆ-ಪುರಸಭೆ-ಪಂ.ಪಂಚಾಯುತ್ ಚುನಾವಣೆಗೆ ಸಿದ್ದತೆ
ಜಿಲ್ಲೆಯಲ್ಲಿರುವ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಸೇರಿದಂತೆ ಒಟ್ಟಾರೆ 8 ನಗರ - ಪಟ್ಟಣ ಸ್ಥಳೀಯ ಸಂಸ್ಥೆಗಳ ಹಾಲಿ ಸದಸ್ಯರ ಅಧಿಕಾರಾವಧಿಯೂ ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅಧಿಕಾರಾವಧಿ ಅಂತ್ಯಗೊಳ್ಳುವುದರೊಳಗೆ ಹೊಸ ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕಾಗಿದೆ. 

ಈಗಾಗಲೇ ಚುನಾವಣಾ ಆಯೋಗವು ಜಿಲ್ಲೆಯ ಎಂಟು ನಗರ - ಪಟ್ಟಣಗಳ ಚುನಾವಣಾ ಪ್ರಕ್ರಿಯೆ ಆರಂಭಿಸಿದೆ. 2011 ರ ಜನಗಣತಿ ಆಧಾರದ ಮೇಲೆ ವಾರ್ಡ್‍ಗಳ ಪುನರ್ ವಿಂಗಡಣೆ ಪ್ರಕ್ರಿಯೆ ಕೂಡ ಪೂರ್ಣಗೊಳಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಹೊರತುಪಡಿಸಿ ಭದ್ರಾವತಿ, ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಸೊರಬ, ತೀರ್ಥಹಳ್ಳಿ, ಹೊಸನಗರ ಹಾಗೂ ಜೋಗಕಾರ್ಗಲ್ ಪಟ್ಟಣ ಪಂಚಾಯತ್ ಗಳಿಗೆ ವಾರ್ಡ್‍ವಾರು ಮೀಸಲಾತಿ ಪಟ್ಟಿಯನ್ನು ಕೂಡ ಪ್ರಕಟಿಸಿದೆ. ಇಷ್ಟರಲ್ಲಿಯೇ ಶಿವಮೊಗ್ಗ ಪಾಲಿಕೆ ವಾರ್ಡ್‍ಗಳ ಮೀಸಲಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 

ಜಿಲ್ಲೆಯ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಆ ಪ್ರದೇಶ ವ್ಯಾಪ್ತಿಯ ಮತದಾರರು ಮಾತ್ರ ಮತದಾನದ ಹಕ್ಕು ಹೊಂದಿರುತ್ತಾರೆ. ನಗರ ಸ್ಥಳೀಯ ಸಂಸ್ಥೆ ಆಡಳಿತಗಳ ಅಧಿಕಾರದ ಗದ್ದುಗೆಯೇರುವುದು ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣದಿಂದ ಈ ಚುನಾವಣೆಗಳೂ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಲಿರುವುದು ಬಹುತೇಕ ನಿಶ್ಚಿತವಾಗಿದೆ. ಬಹುತೇಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೈವೋಲ್ಟೇಜ್ ಅಖಾಡಕ್ಕೆ ವೇದಿಕೆ ಸಿದ್ದವಾಗಲಿದೆ. 

ಲೋಕಸಭೆ ಉಪ ಚುನಾವಣಾ ಜಿದ್ದಾಜಿದ್ದಿ
ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಅನಿರೀಕ್ಷಿತ ಎಂಬಂತೆ ಜಿಲ್ಲೆಯ ಜನತೆಗೆ ಲೋಕಸಭೆ ಉಪ ಚುನಾವಣೆ ಎದುರಾಗಿದೆ. ಬಹುತೇಕ ಜಿದ್ದಾಜಿದ್ದಿನ ಅಖಾಡಕ್ಕೆ ಈ ಎಲೆಕ್ಷನ್ ಸಾಕ್ಷಿಯಾಗುವ ಸಾಧ್ಯತೆಗಳು ಗೋಚರವಾಗುತ್ತಿದೆ. ಇದು ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ. 

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದ ಬಿ.ಎಸ್.ಯಡಿಯೂರಪ್ಪರವರು ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದು ಆಯ್ಕೆಯಾಗಿದ್ದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಒಂದು ಸದಸ್ಯತ್ವ ಉಳಿಸಿಕೊಳ್ಳುವ ಅವಕಾಶ ಅವರಿಗಿತ್ತು. ನಿರೀಕ್ಷಿಸಿದಂತೆ ಶನಿವಾರ ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕಾರಣದಿಂದ ಮುಂದಿನ ಆರು ತಿಂಗಳೊಳಗೆ, ಚುನಾವಣಾ ಆಯೋಗವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಿ ಅಭ್ಯರ್ಥಿ ಆಯ್ಕೆ ನಡೆಸಬೇಕಾಗಿದೆ. 

2014 ರಲ್ಲಿ ಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವನ್ನು ಬಿಜೆಪಿ ಪಕ್ಷ ವಶಕ್ಕೆ ಪಡೆದಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು 3,63,305 ಮತಗಳ ಭಾರೀ ಅಂತರದಲ್ಲಿ ಜಯಗಳಿಸಿದ್ದರು. ಇವರ ಎದುರು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್.ಬಂಗಾರಪ್ಪರ ಪುತ್ರಿ ಗೀತಾ ಶಿವರಾಜ್‍ಕುಮಾರ್ ರವರು ಹೀನಾಯ ಸೋಲನುಭವಿಸಿ, ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿಯವರು ಎರಡನೇ ಸ್ಥಾನ ಗಳಿಸಿದ್ದರು. 

ಮುಂದೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ್ಯಾರು? ಯಾವಾಗ ಚುನಾವಣೆ ಘೋಷಣೆಯಾಗಲಿದೆ ಎಂಬುವುದು ಇನ್ನಷ್ಟೆ ಗೊತ್ತಾಗಬೇಕಾಗಿದೆ. ಆದರೆ 17 ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಕೆಲವೇ ತಿಂಗಳಿರುವಂತೆ ನಡೆಯಲಿರುವ ಈ ಉಪ ಚುನಾವಣೆಯು ಬಹುತೇಕ ರಾಜಕೀಯ ಪಕ್ಷಗಳಿಗೆ ಅಕ್ಷರಶಃ ತಲೆನೋವಾಗಿ ಪರಿಣಮಿಸಿದ್ದು, ಮುಂದೆ ಎದುರಾಗಲಿರುವ ಚುನಾವಣೆಯ ಕಾರಣದಿಂದ ಅತ್ಯಂತ ಮಹತ್ವದ್ದಾಗಿರುವುದಂತೂ ಸತ್ಯ.

share
ವರದಿ : ಬಿ. ರೇಣುಕೇಶ್
ವರದಿ : ಬಿ. ರೇಣುಕೇಶ್
Next Story
X