Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ

ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ

ವಾರ್ತಾಭಾರತಿವಾರ್ತಾಭಾರತಿ21 May 2018 11:55 PM IST
share
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ

ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ,
ಬೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ,
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ.
ಸುವರ್ಣ ಒಂದು, ಆಭರಣ ಹಲವಾದಂತೆ,
ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ.
ಮತ್ತಿದಿರು ದೈವವುಂಟೆಂದು ಗದಿಯಬೇಡ.

 ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.

                                                     -ಅರಿವಿನ ಮಾರಿತಂದೆ

 ಶೈವವೆಂಬುದು ಶಿವಮತವಾಗಿದೆ. ಶಿವೋಪಾಸಕರು ಶೈವರು. ಶೈವ ಮತದಲ್ಲಿ ಶೈವ, ಪಾಶುಪತ, ಸೋಮ, ದಕ್ಷಿಣ, ಕಾಳಾಮುಖ, ಲಾಕುಳ (ಯಾಮಳ), ಆದಿಶೈವ, ಮಹಾಶೈವ, ಅನುಶೈವ, ಅವಾಂತರ ಶೈವ, ಅಂತ್ಯಶೈವ, ಪ್ರವರಶೈವ, ಆದಿಶೈವರೆನಿಸಿಕೊಳ್ಳುವ ಶಿವದ್ವಿಜರು, ದೀಕ್ಷೆಹೊಂದಿ ಮಹಾಶೈವರಾದ ಶಿವದ್ವಿಜರು, ದೀಕ್ಷೆ ಪಡೆದ ರಾಜರು ಮತ್ತು ವೈಶ್ಯರು ಅನುಶೈವರು, ದೀಕ್ಷೆ ಪಡೆದ ಶೂದ್ರರು ಅವಾಂತರ ಶೈವರು, ಬ್ರಾಹ್ಮಣರಿಂದ ಶೂದ್ರ ಸ್ತ್ರೀಯರಲ್ಲಿ ಹುಟ್ಟಿದ ಪ್ರವರ ಶೈವರು, ಶೈವ ಮತ ಸ್ವೀಕರಿಸಿದ ಅಂತ್ಯಜರು ಅಂತ್ಯಶೈವರು, ಶಕ್ತಿಪರವಾದ ವಾಮ ಶೈವರು, ಭೈರವಪರವಾದ ದಕ್ಷಿಣಶೈವರು, ಸಪ್ತಮಾತೃಕಾ ಪರವಾದ ಮಿಶ್ರಶೈವರು, ಶುದ್ಧಶೈವರು, ಸಾಮಾನ್ಯ ಶೈವರು, ಶಿವ, ವಿಷ್ಣು, ಬ್ರಹ್ಮ, ಷಣ್ಮುಖ, ಗಣಪತಿ ಮುಂತಾದ ದೇವತೆಗಳನ್ನು ಪೂಜಿಸುವ ಮಿಶ್ರಶೈವರು, ಶಿವನನ್ನೇ ಪೂಜಿಸುವ ಶುದ್ಧಶೈವರು, ವೀರಶೈವರು ಎಂದು ಮುಂತಾದ ಶೈವಪ್ರಭೇದಗಳಿವೆ ಎಂದು ಫ.ಗು. ಹಳಕಟ್ಟಿ ಅವರು ಶಿವಾನುಭವ ಶಬ್ದಕೋಶದಲ್ಲಿ ತಿಳಿಸಿದ್ದಾರೆ. ಪರಶಿವನು ನೆಲೆಸಿದ ಸ್ಥಳವೇ ಕೈಲಾಸ ಎಂದು ಇವರೆಲ್ಲ ಭಾವಿಸಿದ್ದಾರೆ. ಇಷ್ಟೊಂದು ಶೈವಪ್ರಭೇದಗಳಿದ್ದರೂ ಈ ಎಲ್ಲ ಉಪಾಸಕರು ಮುಕ್ತಿಹೊಂದಿ ಕೈಲಾಸ ಸೇರುವುದಾಗಿ ನಂಬಿದ್ದಾರೆ.
ಬ್ರಹ್ಮ, ವಿಷ್ಣು ಮಹೇಶ್ವರರೆಂಬ ತ್ರಿಮೂರ್ತಿಗಳಲ್ಲಿ ಒಬ್ಬನಾದ ವಿಷ್ಣುವಿನ ಭಕ್ತರಿಗೆ ವೈಷ್ಣವರು ಎಂದು ಕರೆಯುತ್ತಾರೆ. ಕೊನೆಯಲ್ಲಿ ವಿಷ್ಣುವಿನ ನಿವಾಸವಾದ ವೈಕುಂಠ ಸೇರುವುದಾಗಿ ಹೇಳುತ್ತಾರೆ. ಆತ್ಮವು ಜನನ ಮರಣಗಳಿಂದ ದೂರವಾಗುವುದಕ್ಕೆ ಮೋಕ್ಷ ಎಂದು ಕರೆಯುತ್ತಾರೆ. ಬಹುಜನರ ಸುಖವನ್ನು ಮತ್ತು ಹಿತವನ್ನು ಸಾಧಿಸುತ್ತ ಪರಿನಿರ್ವಾಣಹೊಂದಿ ಮೋಕ್ಷಸಾಧಿಸುವುದು ಬೌದ್ಧರ ಕ್ರಮವಾಗಿದೆ.
ಹೀಗೆ ವಿವಿಧ ಧರ್ಮಗಳಲ್ಲಿ ಮೋಕ್ಷಸಾಧನೆಯ ಗುರಿಗಳು ಮೇಲ್ನೋಟಕ್ಕೆ ಬೇರೆಬೇರೆಯಾಗಿರಬಹುದು. ಆದರೆ ಎಲ್ಲರೂ ಸೇರುವುದು ಒಂದೇ ನಿಶ್ಚಿತ ಸ್ಥಳವನ್ನು. ಮನುಷ್ಯರು ಬೇರೆಬೇರೆಯಾದರೂ ಅವರೆಲ್ಲ ಪಂಚಮಹಾಭೂತಗಳಿಂದ ಸೃಷ್ಟಿಯಾಗಿದ್ದಾರೆ. ಅವು ಎಲ್ಲರಿಗೂ ಒಂದೇ ಆಗಿವೆ. ಚಿನ್ನದ ಆಭರಣಗಳು ಬೇರೆಬೇರೆಯಾದರೂ ಅವುಗಳಿಗೆ ಬಳಿಸಿದ ಚಿನ್ನ ಒಂದೇ ಆಗಿರುತ್ತದೆ. ಹಾಗೆಯೆ ದೇವರನ್ನು ಯಾವುದೇ ಹೆಸರಿನಿಂದ ಕರೆದರೂ ದೇವರು ಒಬ್ಬನೇ ಆಗಿರುತ್ತಾನೆ.‘‘ಮತ್ತೆ ಬೇರೆ ದೈವವಿದೆ ಎಂದು ಹೇಳಬೇಡರಿ’’ ಎಂದು ಅರಿವಿನ ಮಾರಿತಂದೆ ಹೇಳುತ್ತಾರೆ. ‘ಕೈಲಾಸವಾಸಿಗಳಾದರು’, ‘ವೈಕುಂಠವಾಸಿಗಳಾದರು’, ‘ಪರಿನಿರ್ವಾಣ ಹೊಂದಿದರು’ ಹೀಗೆ ಏನೆಲ್ಲ ಹೇಳಿದರೂ ಅುಗಳ ನಿಜಾರ್ಥ ಒಂದೇ ಆಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X